Aamir Khan: ಜನಸಂಖ್ಯೆ ಸ್ಫೋಟಕ್ಕೆ ಅಮೀರ್ ಖಾನ್ ರೀತಿಯವರೇ ಕಾರಣ; ಬಿಜೆಪಿ ಸಂಸದ ವಿವಾದಾತ್ಮಕ ಹೇಳಿಕೆ

ಬಾಲಿವುಡ್ ನಟ ಅಮೀರ್ ಖಾನ್ ಇಬ್ಬರು ಹೆಂಡತಿಯರು, ಮಕ್ಕಳನ್ನು ಬಿಟ್ಟು ಈಗ ಮೂರನೇ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದಾರೆ. ಇಂಥವರಿಂದಲೇ ಜನಸಂಖ್ಯೆ ಹೆಚ್ಚುತ್ತಿದೆ ಎಂದು ಬಿಜೆಪಿ ಸಂಸದ ಸುಧೀರ್ ಗುಪ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Aamir Khan: ಜನಸಂಖ್ಯೆ ಸ್ಫೋಟಕ್ಕೆ ಅಮೀರ್ ಖಾನ್ ರೀತಿಯವರೇ ಕಾರಣ; ಬಿಜೆಪಿ ಸಂಸದ ವಿವಾದಾತ್ಮಕ ಹೇಳಿಕೆ
ಅಮೀರ್ ಖಾನ್- ಸುಧೀರ್ ಗುಪ್ತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 12, 2021 | 4:05 PM

ನವದೆಹಲಿ: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು (Population Control) ಈಗಾಗಲೇ ಉತ್ತರ ಪ್ರದೇಶ ಸರ್ಕಾರ ನೂತನ ಜನಸಂಖ್ಯಾ ನೀತಿಯನ್ನು (New Population Policy) ಜಾರಿಗೊಳಿಸಿದೆ. ಅದರಂತೆ, ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿರುವ ಬೇರೆ ರಾಜ್ಯಗಳು ಕೂಡ ಈ ಬಗ್ಗೆ ಚಿಂತನೆ ನಡೆಸಿವೆ. ಇದರ ನಡುವೆ ಮಧ್ಯಪ್ರದೇಶದ ಮಂಡ್​ಸೌರ್ ಕ್ಷೇತ್ರದ ಬಿಜೆಪಿ ಸಂಸದ ಸುಧೀರ್ ಗುಪ್ತಾ (Sudhir Gupta) ಬಾಲಿವುಡ್ ನಟ ಅಮೀರ್​ ಖಾನ್ (Bollywood Actor Aamir Khan) ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

‘ಭಾರತದಲ್ಲಿ ಜನಸಂಖ್ಯೆ ಅಸಮತೋಲನವಾಗುತ್ತಿರುವುದಕ್ಕೆ ಅಮೀರ್ ಖಾನ್​ ರೀತಿಯವರೇ ಕಾರಣ. ಭಾರತದ ಒಂದಿಂಚು ಜಾಗವೂ ವಿಸ್ತಾರವಾಗುತ್ತಿಲ್ಲ. ಆದರೆ, ಜನಸಂಖ್ಯೆ ಪ್ರಮಾಣ ಮಾತ್ರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಭಾರತದ ಜನಸಂಖ್ಯೆ 140 ಕೋಟಿ ತಲುಪಿದೆ ಎಂದರೆ ಅದು ನಿರ್ಲಕ್ಷ್ಯ ಮಾಡುವ ಸಂಗತಿಯಲ್ಲ. ಬಾಲಿವುಡ್ ನಟ ಅಮೀರ್ ಖಾನ್ ರೀತಿಯವರನ್ನು ಜನರು ಆದರ್ಶವಾಗಿ ಕಾಣುತ್ತಾರೆ. ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಆದರೆ, ಅಮೀರ್ ಖಾನ್ ತಮ್ಮ ಮೊದಲ ಹೆಂಡತಿ ರೀನಾ ಮತ್ತು ಮಕ್ಕಳನ್ನು ಬಿಟ್ಟು ಕಿರಣ್ ರಾವ್​ರನ್ನು ಎರಡನೇ ಮದುವೆಯಾದರು. ಆಕೆಗೂ ಒಬ್ಬ ಮಗನಿದ್ದಾನೆ. ಈಗ ಆಕೆಯನ್ನೂ ಬಿಟ್ಟು ಮೂರನೇ ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದಾರೆ. ಹೀಗೆ ಒಬ್ಬೊಬ್ಬರು ಎರಡ್ಮೂರು ಮದುವೆಯಾಗಿ ಮಕ್ಕಳನ್ನು ಹುಟ್ಟಿಸುತ್ತಿರುವುದರಿಂದಲೇ ಭಾರತದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ’ ಎಂದು ಬಿಜೆಪಿ ಸಂಸದ ಸುಧೀರ್ ಗುಪ್ತಾ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಜನಸಂಖ್ಯಾ ದಿನಾಚರಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಸದ ಸುಧೀರ್ ಗುಪ್ತಾ ಅನಾವಶ್ಯಕವಾಗಿ ಈ ವಿಚಾರದಲ್ಲಿ ನಟ ಅಮೀರ್ ಖಾನ್ ಅವರನ್ನು ಎಳೆದುತಂದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೇ ನಟ ಅಮೀರ್ ಖಾನ್ ಮತ್ತು ಅವರ ಎರಡನೇ ಪತ್ನಿ ಕಿರಣ್ ರಾವ್ ಒಮ್ಮತದಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು. ತಮ್ಮ 15 ವರ್ಷಗಳ ದಾಂಪತ್ಯವನ್ನು ಮುರಿದುಕೊಂಡಿದ್ದ ಅವರು ಇನ್ನುಮುಂದೆ ಕೇವಲ ಸ್ನೇಹಿತರಂತೆ ಇರುವುದಾಗಿ ತಿಳಿಸಿದ್ದರು. ಹಾಗೇ, ಇಬ್ಬರೂ ಒಟ್ಟಾಗಿಯೇ ತಮ್ಮ ಮಗ ಆಜಾದ್ ರಾವ್ ಖಾನ್​ನನ್ನು ನೋಡಿಕೊಳ್ಳುವುದಾಗಿಯೂ ತಿಳಿಸಿದ್ದರು.

ಅಮೀರ್ ಖಾನ್ ಅವರ ರೀತಿಯದ್ದೇ ಮನಸ್ಥಿತಿ ಇರುವ ಸಾಕಷ್ಟು ಜನರಿಂದಲೇ ಭಾರತದಲ್ಲಿ ಜನಸಂಖ್ಯಾ ಸ್ಫೋಟವಾಗುತ್ತಿದೆ. ಅಮೀರ್ ಖಾನ್ ರೀತಿಯವರು ಮೊಟ್ಟೆ ಮಾರಾಟ ಮಾಡಲು ಮಾತ್ರ ಲಾಯಕ್. ಅವರಿಗೆ ಬುದ್ಧಿವಂತಿಕೆಯ ಕೆಲಸ ಮಾಡಲು ಬರುವುದಿಲ್ಲ ಎಂದು ಬಿಜೆಪಿ ಸಂಸದ ಸುಧೀರ್ ಗುಪ್ತಾ ನಾಲಿಗೆ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: Aamir Khan: ಆಮಿರ್​​ ಖಾನ್​-ಕಿರಣ್​ ರಾವ್​ ವಿಚ್ಛೇದನ; 15 ವರ್ಷದ ದಾಂಪತ್ಯ ಜೀವನ ಅಂತ್ಯ

Published On - 3:59 pm, Mon, 12 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್