ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​

ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್​ ಮನೆ ಮೇಲೆ ದಾಳಿ ನಡೆದಿದೆ. ಅಲ್ಲಿನ ವಸ್ತುಗಳನ್ನು ನಾಶ ಮಾಡಲಾಗಿದೆ. ಸಿಸಿಟಿವಿಗಳನ್ನು ಒಡೆದು ಹಾಕಲಾಗಿದೆ ಎಂದು ಆಪ್​ ನಾಯಕರು ಆರೋಪಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​
ಸೂರತ್ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ 27 ಸ್ಥಾನಗಳಲ್ಲಿ ಆಮ್​ಆದ್ಮಿ ಪಕ್ಷ ಗೆಲುವು ಸಾಧಿಸಿದೆ.
Rajesh Duggumane

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 13, 2020 | 10:14 PM

ನವದೆಹಲಿ: ದೆಹಲಿಯಲ್ಲಿ ಆಡಳಿತಾರೂಢ ಆಪ್​ ಹಾಗೂ ಬಿಜೆಪಿ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ನಗರಾಡಳಿತ ಸಂಸ್ಥೆಯಲ್ಲಿ ದೊಡ್ಡಮಟ್ಟದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದ್ದ ಆಪ್​ ನಾಯಕರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆನ್ನಲ್ಲೇ, ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಆಪ್​ ಆರೋಪಿಸಿದೆ.

ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್​ ಮನೆ ಮೇಲೆ ದಾಳಿ ನಡೆದಿದೆ. ಅಲ್ಲಿನ ವಸ್ತುಗಳನ್ನು ನಾಶ ಮಾಡಲಾಗಿದೆ. ಸಿಸಿಟಿವಿಗಳನ್ನು ಒಡೆದು ಹಾಕಲಾಗಿದೆ ಎಂದು ಆಪ್​ ನಾಯಕರು ಆರೋಪಿಸಿದ್ದಾರೆ. ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಗುರುವಾರ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದರು. ಈಗ ಅರವಿಂದ್​ ಕೇಜ್ರಿವಾಲ್​ ಮನೆಯ ಮೇಲೆ ದಾಳಿ ಆಗಿದೆ ಎಂದು ಆಪ್​ ನಾಯಕರು ಹೇಳಿದ್ದಾರೆ.

ಆಪ್​ ನಡೆಸಿತ್ತು ಪ್ರತಿಭಟನೆ ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ₹2,457 ಕೋಟಿ ಅವ್ಯವಹಾರ ನಡೆದಿದೆ ಎಂದು ಆಪ್​ ಆರೋಪಿಸಿತ್ತು. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಅಮಿತ್​ ಶಾ ಹಾಗೂ ಅನಿಲ್​ ಬಾಲಾಜಿ ಮನೆ ಎದುರು ಭಾರೀ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು. ಇದಕ್ಕೆ ಪೊಲೀಸರ ಬಳಿ ಒಪ್ಪಿಗೆ ಕೇಳಿದಾಗ, ಕೊರೊನಾ ​ ನೆಪ ಹೇಳಿ ಅವರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಅಮಿತ್​ ಶಾ ಮನೆ ಎದುರು ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದರು. ಆದಾಗ್ಯೂ ಆಪ್​ ನಾಯಕರು ಇಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada