ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​

ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್​ ಮನೆ ಮೇಲೆ ದಾಳಿ ನಡೆದಿದೆ. ಅಲ್ಲಿನ ವಸ್ತುಗಳನ್ನು ನಾಶ ಮಾಡಲಾಗಿದೆ. ಸಿಸಿಟಿವಿಗಳನ್ನು ಒಡೆದು ಹಾಕಲಾಗಿದೆ ಎಂದು ಆಪ್​ ನಾಯಕರು ಆರೋಪಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​
ಸೂರತ್ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ 27 ಸ್ಥಾನಗಳಲ್ಲಿ ಆಮ್​ಆದ್ಮಿ ಪಕ್ಷ ಗೆಲುವು ಸಾಧಿಸಿದೆ.
Edited By:

Updated on: Dec 13, 2020 | 10:14 PM

ನವದೆಹಲಿ: ದೆಹಲಿಯಲ್ಲಿ ಆಡಳಿತಾರೂಢ ಆಪ್​ ಹಾಗೂ ಬಿಜೆಪಿ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ನಗರಾಡಳಿತ ಸಂಸ್ಥೆಯಲ್ಲಿ ದೊಡ್ಡಮಟ್ಟದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದ್ದ ಆಪ್​ ನಾಯಕರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆನ್ನಲ್ಲೇ, ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಆಪ್​ ಆರೋಪಿಸಿದೆ.

ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್​ ಮನೆ ಮೇಲೆ ದಾಳಿ ನಡೆದಿದೆ. ಅಲ್ಲಿನ ವಸ್ತುಗಳನ್ನು ನಾಶ ಮಾಡಲಾಗಿದೆ. ಸಿಸಿಟಿವಿಗಳನ್ನು ಒಡೆದು ಹಾಕಲಾಗಿದೆ ಎಂದು ಆಪ್​ ನಾಯಕರು ಆರೋಪಿಸಿದ್ದಾರೆ. ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಗುರುವಾರ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದರು. ಈಗ ಅರವಿಂದ್​ ಕೇಜ್ರಿವಾಲ್​ ಮನೆಯ ಮೇಲೆ ದಾಳಿ ಆಗಿದೆ ಎಂದು ಆಪ್​ ನಾಯಕರು ಹೇಳಿದ್ದಾರೆ.

ಆಪ್​ ನಡೆಸಿತ್ತು ಪ್ರತಿಭಟನೆ
ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ₹2,457 ಕೋಟಿ ಅವ್ಯವಹಾರ ನಡೆದಿದೆ ಎಂದು ಆಪ್​ ಆರೋಪಿಸಿತ್ತು. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಅಮಿತ್​ ಶಾ ಹಾಗೂ ಅನಿಲ್​ ಬಾಲಾಜಿ ಮನೆ ಎದುರು ಭಾರೀ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು. ಇದಕ್ಕೆ ಪೊಲೀಸರ ಬಳಿ ಒಪ್ಪಿಗೆ ಕೇಳಿದಾಗ, ಕೊರೊನಾ ​ ನೆಪ ಹೇಳಿ ಅವರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಅಮಿತ್​ ಶಾ ಮನೆ ಎದುರು ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದರು. ಆದಾಗ್ಯೂ ಆಪ್​ ನಾಯಕರು ಇಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ

Published On - 10:08 pm, Sun, 13 December 20

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us