ಸಾಂವಿಧಾನಿಕ ಪೀಠದ ಆದೇಶವನ್ನು ಕೇಂದ್ರ ಸರ್ಕಾರ ಧಿಕ್ಕರಿಸುತ್ತಿದೆ ಎಂದು ಆರೋಪಿಸಿ ಸುಪ್ರೀಂ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ಸುಪ್ರೀಂಕೋರ್ಟ್‌ನಮಹತ್ವದ ತೀರ್ಪಿನ ನಂತರ ತಾವು ಆದೇಶಿಸಿದ ಅಧಿಕಾರಿಯ ವರ್ಗಾವಣೆಗೆ ಕೇಂದ್ರವು ಅಡ್ಡಿಪಡಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸಿದೆ.

ಸಾಂವಿಧಾನಿಕ ಪೀಠದ ಆದೇಶವನ್ನು ಕೇಂದ್ರ ಸರ್ಕಾರ ಧಿಕ್ಕರಿಸುತ್ತಿದೆ ಎಂದು ಆರೋಪಿಸಿ ಸುಪ್ರೀಂ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Follow us
|

Updated on: May 12, 2023 | 1:49 PM

ದೆಹಲಿ: ಅಧಿಕಾರಿಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಸಾಂವಿಧಾನಿಕ ಪೀಠದ ಆದೇಶವನ್ನು ಕೇಂದ್ರ ಸರ್ಕಾರ ಧಿಕ್ಕರಿಸುತ್ತಿದೆ ಎಂದು ಆರೋಪಿಸಿ ದೆಹಲಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸುಪ್ರೀಂಕೋರ್ಟ್‌ನ (Supreme Court) ಮಹತ್ವದ ತೀರ್ಪಿನ ನಂತರ ತಾವು ಆದೇಶಿಸಿದ ಅಧಿಕಾರಿಯ ವರ್ಗಾವಣೆಗೆ ಕೇಂದ್ರವು ಅಡ್ಡಿಪಡಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸಿದೆ. ಅರವಿಂದ ಕೇಜ್ರಿವಾಲ್ (Aravind Kejriwal) ನೇತೃತ್ವದ ಆಮ್ ಆದ್ಮಿ ಪಾರ್ಟಿ (AAP) ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ದೆಹಲಿ ವಿಧಾನಸಭೆಗೆ ಜನರ ಇಚ್ಛೆಯನ್ನು ಪ್ರತಿನಿಧಿಸಲು ಶಾಸನ ಮಾಡುವ ಅಧಿಕಾರವನ್ನು ನೀಡಿದೆ.

ಪ್ರಜಾಸತ್ತಾತ್ಮಕ ಸ್ವರೂಪದ ಆಡಳಿತದಲ್ಲಿ, ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ್ದು ಆಗಿರಬೇಕು ಎಂದು ಪೀಠವು ಹೇಳಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಕಾನೂನು ಮಾಡಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರದ ಅಧಿಕಾರವು ಆಡಳಿತವನ್ನು ಕೇಂದ್ರ ಸರ್ಕಾರವು ವಹಿಸಿಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸೀಮಿತವಾಗಿದೆ ಎಂದು ಪೀಠ ಹೇಳಿದೆ.

ನ್ಯಾಯಾಲಯದ ತೀರ್ಪಿನ ಮೊದಲು, ಸೇವಾ ಇಲಾಖೆಯು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಿಯಂತ್ರಣದಲ್ಲಿತ್ತು.

ಇದನ್ನೂ ಓದಿ: ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಸೇವಾ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದುಹಾಕಿದ ಕೇಜ್ರಿವಾಲ್ ಸರ್ಕಾರ

ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿಗೆ ಸಂಬಂಧಿಸಿದ ವಿಷಯಗಳನ್ನು ಹೊರತುಪಡಿಸಿ ಸೇವೆಗಳ ಆಡಳಿತದ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಸುಪ್ರೀಂಕೋರ್ಟ್ ಘೋಷಿಸಿತು. ನ್ಯಾಯಾಲಯದ ತೀರ್ಪಿನ ಮೊದಲು, ಸೇವೆಗಳ ಇಲಾಖೆಯು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ನಿಯಂತ್ರಣದಲ್ಲಿತ್ತು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್,  ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ಮೇಲೆ ನಿಯಂತ್ರಣವನ್ನು ಪ್ರತಿಪಾದಿಸುವ ಕೇಂದ್ರ ಗೃಹ ಸಚಿವಾಲಯದ 2015 ರ ಅಧಿಸೂಚನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ್ದು, ಕೇಂದ್ರ ಸರ್ಕಾರ ಕೈ ಕಟ್ಟಿ ನೀರಿನಲ್ಲಿ ಎಸೆದರೂ ದೆಹಲಿ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. ದೆಹಲಿ ಸರ್ಕಾರದ ಪರವಾಗಿ ಸರ್ವಾನುಮತದ ತೀರ್ಪು ನೀಡಿದ್ದಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ದೆಹಲಿ ಸಿಎಂ ಧನ್ಯವಾದ ಅರ್ಪಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗವು ಹಲವಾರು ಪಟ್ಟು ಹೆಚ್ಚಾಗುತ್ತದೆ ಎಂದು ಭರವಸೆ ನೀಡಿದರು.

ತೀರ್ಪಿನ ಕೆಲವೇ ಗಂಟೆಗಳ ನಂತರ, ಕೇಜ್ರಿವಾಲ್ ಸರ್ಕಾರವು ದೆಹಲಿ ಸರ್ಕಾರದ ಸೇವಾ ಇಲಾಖೆಯ ಕಾರ್ಯದರ್ಶಿ ಆಶಿಶ್ ಮೋರ್ ಅವರನ್ನು ತೆಗೆದುಹಾಕಿತು. 1995ರ ಬ್ಯಾಚ್‌ನ (ಎಜಿಎಂಯುಟಿ ಕೇಡರ್) ಐಎಎಸ್ ಅಧಿಕಾರಿಯಾಗಿರುವ ದಿಲ್ಲಿ ಜಲ ಮಂಡಳಿಯ ಮಾಜಿ ಸಿಇಒ ಎ ಕೆ ಸಿಂಗ್ ಅವರನ್ನು ಮೋರ್ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಇದಕ್ಕಿಂತ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಸರ್ಕಾರದಲ್ಲಿ ಪ್ರಮುಖ ಆಡಳಿತ ಪುನರ್ರಚನೆ ನಡೆಯಲಿದೆ, ಸಾರ್ವಜನಿಕ ಕೆಲಸಕ್ಕೆ ಅಡಚಣೆ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ