ದೆಹಲಿ: ಮುನ್ಸಿಪಲ್ ಚುನಾವಣೆಯ ರಾಜಕೀಯ ಗದ್ದಲದ ನಡುವೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (Aam Aadmi Party) ಕೌನ್ಸಿಲರ್ ಹಸೀಬ್-ಉಲ್-ಹಸನ್ (Haseeb-ul-Hasan), ಶಾಸ್ತ್ರಿ ಪಾರ್ಕ್‌ನಲ್ಲಿ ತುಂಬಿ ಹರಿಯುವ ಚರಂಡಿಗೆ ಹಾರಿ ಅದನ್ನು ಸ್ವಚ್ಛಗೊಳಿಸಿದ ಘಟನೆ ಮಂಗಳವಾರ ನಡೆದಿದೆ. ಪೂರ್ವ ದೆಹಲಿಯ ಕೌನ್ಸಿಲರ್ ಆಗಿದ್ದಾರೆ ಹಸನ್. ಬಿಳಿ ಕುರ್ತಾ ಧರಿಸಿ ಎದೆವರೆಗೆ ಕೊಳಚೆ ನೀರಿನಲ್ಲಿ ನಿಂತು ಅದರಲ್ಲಿ ತೇಲುತ್ತಿದ್ದ ತ್ಯಾಜ್ಯವಸ್ತುಗಳನ್ನು ಹಸನ್ ತೆಗೆದು ಹಾಕುತ್ತಿರುವುದು ಮೊಬೈಲ್ನಲ್ಲಿ ಚಿತ್ರೀಕರಿಸಿದ ವಿಡಿಯೊದಲ್ಲಿದೆ. ಅವರ ಸಹಾಯಕರು ಪಕ್ಕದಲ್ಲಿ ನಿಂತು ವಿವಿಧ ಉಪಕರಣಗಳನ್ನು ಕೊಡುತ್ತಿರುವುದು ಕಂಡುಬರುತ್ತದೆ. ಚರಂಡಿ ಸ್ವಚ್ಛ ಮಾಡಿದ ನಂತರ ಹಾಸನ್ ಅವರ ಬೆಂಬಲಿಗರು ಅವರಿಗೆ ಹಾಲಿನಲ್ಲಿ ಸ್ನಾನ ಮಾಡಿಸಿದರು . ಇದು ಬಾಲಿವುಡ್ ಬ್ಲಾಕ್ ಬಸ್ಟರ್ “ನಾಯಕ್” ಸಿನಿಮಾದಲ್ಲಿ ನಟ ಅನಿಲ್ ಕಪೂರ್ ಅವರ ರೀತಿಯಲ್ಲಿತ್ತು . ಕ್ಷೀರ ಸ್ನಾನ ಮಾಡುತ್ತಿರುವ ವಿಡಿಯೊಗಳು ವೈರಲ್ ಆಗಿವೆ. ಎಎಪಿಯ ನಾಮನಿರ್ದೇಶಿತ ಕೌನ್ಸಿಲರ್ ಹಾಸನ್ ಅವರು, ಚರಂಡಿ ತುಂಬಿ ಹರಿಯುತ್ತಿದೆ. ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ, ಬಿಜೆಪಿ ಕೌನ್ಸಿಲರ್ ಮತ್ತು ಸ್ಥಳೀಯ ಶಾಸಕರು ಸಹಾಯ ಮಾಡಿಲ್ಲ. ಆದ್ದರಿಂದ ನಾನೇ ಈ ಕೆಲಸ ಮಾಡಲು ಮುಂದಾದೆ ಎಂದು ಹೇಳಿದ್ದಾರೆ. ಸ್ಥಳೀಯ ಶಾಸಕ ಅನಿಲ್ ಕುಮಾರ್ ಬಾಜಪೇಯಿ ಬಿಜೆಪಿ ಸದಸ್ಯರಾಗಿದ್ದಾರೆ. ಪೂರ್ವ ದೆಹಲಿಯ ಗಾಂಧಿ ನಗರ ವಿಧಾನಸಭೆಯಲ್ಲೂ ಈ ವಿಷಯ ಚರ್ಚೆಯಾಗಿದೆ.
एमसीडी चुनावी ड्रामा !
पूर्वी दिल्ली से आप पार्षद हसीब उल हसन नाले की सफाई के लिए नाले में उतरे ,फिर उन्हें दूध से नहलाया गया pic.twitter.com/NAIjgdHpnH— Mukesh singh sengar मुकेश सिंह सेंगर (@mukeshmukeshs) March 22, 2022
ರಾಷ್ಟ್ರ ರಾಜಧಾನಿಯ ಮೂರು ನಾಗರಿಕ ಸಂಸ್ಥೆಗಳನ್ನು ವಿಲೀನಗೊಳಿಸುವ ಕೇಂದ್ರದ ಯೋಜನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಎಎಪಿ ಮತ್ತು ಬಿಜೆಪಿ ವಾರಗಳಿಂದ ಘರ್ಷಣೆಯಲ್ಲಿ ತೊಡಗಿವೆ. ಮಂಗಳವಾರ, ಕೇಂದ್ರ ಸಚಿವ ಸಂಪುಟದಿಂದ ಈ ಮಸೂದೆ ಒಪ್ಪಿಗೆ ನೀಡಿದೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಮಸೂದೆಯು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್, ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ವಿಲೀನಗೊಳಿಸುತ್ತದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ನಿರೀಕ್ಷೆಯಿದೆ.
ಎಎಪಿ ಮಸೂದೆಯ ಸಮಯವನ್ನು ಪ್ರಶ್ನಿಸಿದೆ, ಇದು ನಾಗರಿಕ ಚುನಾವಣೆಯನ್ನು ಹಳಿತಪ್ಪಿಸುವ ಸಾಧ್ಯತೆಯಿದೆ. ಪೌರ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಬೇಡಿ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
“ಪ್ರಧಾನಿ, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ನೀವು ಇರುವುದಿಲ್ಲ, ನಾನು ಕೂಡ ಇರುವುದಿಲ್ಲ. ಆದರೆ ದೇಶದ ಸಂಸ್ಥೆಗಳನ್ನು ದುರ್ಬಲಗೊಳಿಸಬೇಡಿ. ಎಂಸಿಡಿ ಚುನಾವಣೆಗಳನ್ನು ಮುಂದೂಡಬೇಡಿ” ಎಂದು ಕೇಜ್ರಿವಾಲ್ ಈ ಹಿಂದೆ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಈ ತಿಂಗಳು, ಇದನ್ನು ಎಎಪಿ ಈ ವಿಡಿಯೊವನ್ನು ತನ್ನ ಅಧಿಕೃತ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದೆ.
ಇದನ್ನೂ ಓದಿ: ದೆಹಲಿಯ ಮೂರು ಕಾರ್ಪೊರೇಷನ್‌ಗಳನ್ನು ವಿಲೀನಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
Published On - 2:54 pm, Wed, 23 March 22