ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ; ರಾಜ್ಯ ತಲುಪಿದ ಇಬ್ಬರು ಮುಖ್ಯಮಂತ್ರಿಗಳು

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ; ರಾಜ್ಯ ತಲುಪಿದ ಇಬ್ಬರು ಮುಖ್ಯಮಂತ್ರಿಗಳು
ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್​
Follow us
TV9 Web
| Updated By: Digi Tech Desk

Updated on:Sep 02, 2022 | 12:51 PM

ದೆಹಲಿ: ಅರವಿಂದ್​ ಕೇಜ್ರಿವಾಲ್ (Arvind Kejriwal)​ ಅವರ ಆಮ್​ ಆದ್ಮಿ ಪಕ್ಷ (Aam Aadmy Party)  ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಪಂಜಾಬ್​ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್​​ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು ಸಿದ್ಧತೆ ನಡೆಸುತ್ತಿದೆ. ಗುಜರಾತ್​​ನಲ್ಲಿ ಇಂದಿನಿಂದ (ಏಪ್ರಿಲ್​ 2) ಆಪ್​ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಲ್ಲಿನ ಜನರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿದೆ. ಗುಜರಾತ್​​ನಲ್ಲಿ  1995ರಿಂದ  ಇಲ್ಲಿಯವರೆಗೆ ಬಿಜೆಪಿ ಪಕ್ಷವೇ ಆಡಳಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ರಾಜ್ಯವರು. ಕಾಂಗ್ರೆಸ್​​ ಕೈಯಲ್ಲಿದ್ದ ಪಂಜಾಬ್​​ನಲ್ಲಿ ಸರ್ಕಾರ ರಚನೆ ಮಾಡಿದ ಆಪ್​ ಇದೀಗ ಪ್ರಧಾನಿ ಮೋದಿ ತವರು ರಾಜ್ಯಕ್ಕೇ ಪ್ರವೇಶ ಮಾಡಿದೆ.  ಅಷ್ಟೇ ಅಲ್ಲ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮತ್ತು ಪಂಜಾಬ್​ ಸಿಎಂ ಭಗವಂತ್ ಮಾನ್​ ಇಬ್ಬರೂ ಈಗಾಗಲೇ ಅಹ್ಮದಾಬಾದ್​ಗೆ ತೆರಳಿದ್ದಾರೆ.

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ. ಬಳಿಕ ಭಾನುವಾರ ಇವರಿಬ್ಬರೂ ಅಹ್ಮದಾಬಾದ್​​ನ ಸ್ವಾಮಿನಾರಾಯಣ್​ ದೇಗುಲಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ಗುಜರಾತ್​ನಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿಯೂ ಆಪ್​ ಪಕ್ಷ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಲೂ ವಿಫಲವಾಗಿತ್ತು. ಒಟ್ಟು 29 ಕ್ಷೇತ್ರಗಳು ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಎಲ್ಲರೂ ಸೋತಿದ್ದರು. ಆದರೆ ಈ ಬಾರಿ ಅರವಿಂದ್ ಕೇಜ್ರಿವಾಲ್​ ತುಂಬ ಮುಂಚಿನಿಂದಲೇ ಪಕ್ಷವನ್ನು ಪ್ರಬಲ ಗೊಳಿಸಲು ಪ್ರಾರಂಭಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್​ ಅವರು ದಿ ಕಾಶ್ಮೀರ್​ ಫೈಲ್ಸ್​ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರ ದೆಹಲಿಯ ನಿವಾಸದ ಎದುರು ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಇಂದು ಗುಜರಾತ್​​ನಲ್ಲಿ ಅವರಿಗೆ ಬಿಗಿ ಭದ್ರತೆ ಕಲ್ಪಿಸುವಂತೆ ಆಪ್​ ಗುಜರಾತ್​ ಘಟಕ ಅಹ್ಮದಾಬಾದ್ ಪೊಲೀಸರಲ್ಲಿ ಮನವಿ ಮಾಡಿತ್ತು. ಆಪ್​ ಈ ಬಾರಿ ಗುಜರಾತ್​ನಲ್ಲಿ ಎಲ್ಲ 182 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಅರವಿಂದ್ ಕೇಜ್ರಿವಾಲ್​ ಕಳೆದವರ್ಷವೇ ಘೋಷಣೆ ಮಾಡಿದ್ದಾರೆ. ಈ ಪಕ್ಷ ಗುಜರಾತ್​​ನಲ್ಲಿ ಹಿಂದೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೂಡ ಒಳ್ಳೆಯ ಸಾಧನೆಯನ್ನೇ ಮಾಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್​​ಗಿಂತಲೂ ಆಮ್ ಆದ್ಮಿ ಪಕ್ಷವೇ ಬಿಜೆಪಿಗೆ ಪ್ರಬಲ ಪ್ರತಿಸ್ಫರ್ಧಿ ಎಂಬುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ

Published On - 8:16 am, Sat, 2 April 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್