AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ಕೇಂದ್ರವೇ ರಾಜ್ಯಗಳ ಮೇಲೆ ಯುದ್ಧಕ್ಕೆ ಬಂದರೆ ದೇಶ ಉದ್ಧಾರ ಆಗೋದು ಹೇಗೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ಹಣದುಬ್ಬರ, ನಿರುದ್ಯೋಗದ ಬಿಸಿಗೆ ಸಾಮಾನ್ಯ ಜನರು ತತ್ತರಿಸಿದ್ದಾರೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗೂಡಿ ಜನಹಿತಕ್ಕಾಗಿ ಶ್ರಮಿಸಬೇಕಿತ್ತು. ಆದರೆ ಇಲ್ಲಿ ಆಗುತ್ತಿರುವುದೇ ಬೇರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Arvind Kejriwal: ಕೇಂದ್ರವೇ ರಾಜ್ಯಗಳ ಮೇಲೆ ಯುದ್ಧಕ್ಕೆ ಬಂದರೆ ದೇಶ ಉದ್ಧಾರ ಆಗೋದು ಹೇಗೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾImage Credit source: India Today
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 21, 2022 | 12:51 PM

Share

ದೆಹಲಿ: ಕೇಂದ್ರ ಸರ್ಕಾರವೇ ಸದಾ ರಾಜ್ಯಗಳ ವಿರುದ್ಧ ಸಂಘರ್ಷಕ್ಕೆ ಇಳಿದರೆ ದೇಶ ಅಭಿವೃದ್ಧಿಯಾಗುವುದು ಹೇಗೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿ (Aam Aadmi Party – AAP) ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಪ್ರಶ್ನಿಸಿದರು. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೊಂದರೆ ಕೊಡುತ್ತಿದೆ ಎಂದು ನೇರ ಆರೋಪ ಮಾಡಿದ ಅವರು, ಹಣದುಬ್ಬರ, ನಿರುದ್ಯೋಗದ ಬಿಸಿಗೆ ಸಾಮಾನ್ಯ ಜನರು ತತ್ತರಿಸಿದ್ದಾರೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗೂಡಿ ಜನಹಿತಕ್ಕಾಗಿ ಶ್ರಮಿಸಬೇಕಿತ್ತು. ಆದರೆ ಇಲ್ಲಿ ಆಗುತ್ತಿರುವುದೇ ಬೇರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ದೆಹಲಿಯ ಉಪಮುಖ್ಯಮಂತ್ರಿ ಮತ್ತು ಆಪ್ ನಾಯಕ ಮನೀಶ್ ಸಿಸೊಡಿಯಾ ವಿರುದ್ಧ ಸಿಬಿಐ ಲುಕ್​ಔಟ್ ನೊಟೀಸ್ ಜಾರಿ ಮಾಡಿದ ನಂತರ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಸಿಬಿಐ ಲುಕ್​ಔಟ್ ನೊಟೀಸ್ ಜಾರಿ ಮಾಡಿರುವುದರಿಂದ ಮನೀಶ್ ಸಿಸೋಡಿಯಾ ವಿದೇಶಕ್ಕೆ ಹೋಗುವುದಕ್ಕೆ ನಿರ್ಬಂಧ ಬಂದಿದೆ. ‘ಕೇಂದ್ರ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ದೇಶ ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಡುತ್ತಿಲ್ಲ. ಬದಲಿಗೆ ದೇಶದ ವಿರುದ್ಧವೇ ಹೋರಾಡುತ್ತಿದ್ದಾರೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಜಾರಿ ನಿರ್ದೇಶನಾಲಯವನ್ನು (ಇಡಿ) ಈ ರೀತಿ ಹೆದರಿಸಲು ಬಳಸಿಕೊಂಡರೆ ದೇಶ ಉದ್ಧಾರವಾಗುವುದು ಹೇಗೆ’ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ನೀತಿಯು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳ ನಡುವಣ ಸಂಘರ್ಷಕ್ಕೆ ಕಾರಣವಾಗಿದೆ. ಈ ನೀತಿ ಜಾರಿಯಿಂದ ಯಾರಿಗೆಲ್ಲ ಲಾಭವಾಗಿದೆ ಎಂಬ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂದು ಶುಕ್ರವಾರ ದೆಹಲಿಯ ಲೆಫ್ಟಿನೆಂಟ್ ಜನರಲ್ ವಿನಯ್ ಕುಮಾರ್ ಸಕ್ಸೆನಾ ಶಿಫಾರಸು ಮಾಡಿದ್ದರು. ಕಳೆದ ಶುಕ್ರವಾರ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳು ದೇಶದ ಹಲವೆಡೆ ಹಿರಿಯ ನಾಯಕರ ಮೇಲೆ ದಾಳಿ ನಡೆಸಿದ್ದವು. ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ಸುಮಾರು 14 ಗಂಟೆ ತಪಾಸಣೆ ನಡೆದಿತ್ತು. ನಂತರ ಮನಸೀಶ್ ಸಿಸೋಡಿಯಾ ಸೇರಿದಂತೆ 10ಕ್ಕೂ ಹೆಚ್ಚು ನಾಯಕರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿತು.

‘ನನ್ನ ಮನೆಯಲ್ಲಿ ದಾಳಿ ವೇಳೆ ಯಾವುದೇ ಆಕ್ಷೇಪಾರ್ಹ ದಾಖಲೆಗಳು ಪತ್ತೆಯಾಗಿಲ್ಲ. ನಾನು ಎಲ್ಲರ ಕಣ್ಣಿಗೂ ಕಾಣಿಸಿಕೊಳ್ಳುವಂತೆಯೇ ಇದ್ದೇನೆ. ಆದರೂ ನನ್ನ ವಿರುದ್ಧ ಲುಕ್​ಔಟ್ ನೊಟೀಸ್ ಜಾರಿ ಮಾಡಲಾಗಿದೆ. ಇದೇನು ಗಿಮಿಕ್ ಮೋದಿಜಿ’ ಎಂದು ಸಿಸೋಡಿಯಾ ಪ್ರಶ್ನಿಸಿದ್ದರು. ‘ನಾನು ದೆಹಲಿಯಲ್ಲಿ ಮುಕ್ತವಾಗಿ ಓಡಾಡುತ್ತಿದ್ದೇನೆ. ಎಲ್ಲಿಗೆ ಬರಬೇಕು ತಿಳಿಸಿ’ ಎಂದು ಸವಾಲು ಹಾಕಿದ್ದರು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?