ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ಗೆ ಸಮನ್ಸ್ ಜಾರಿ
ಹರಿಯಾಣದಿಂದ ದೆಹಲಿಗೆ ಬಿಡುತ್ತಿರುವ ಯಮುನಾ ನದಿ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಫೆಬ್ರವರಿ 17ರಂದು ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಹರಿಯಾಣ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವುದರಿಂದ ನ್ಯಾಯಾಲಯವು ಈಗ ಔಪಚಾರಿಕವಾಗಿ ದೆಹಲಿ ನಾಯಕನನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
![ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ಗೆ ಸಮನ್ಸ್ ಜಾರಿ](https://images.tv9kannada.com/wp-content/uploads/2025/01/aap-kejriwal.jpg?w=1280)
ನವದೆಹಲಿ: ಹರಿಯಾಣ ಸರ್ಕಾರ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಫೆಬ್ರವರಿ 17ರಂದು ತನ್ನ ಮುಂದೆ ಹಾಜರಾಗುವಂತೆ ಹರಿಯಾಣ ನ್ಯಾಯಾಲಯ ನಿರ್ದೇಶಿಸಿದೆ. ದೆಹಲಿಗೆ ಸರಬರಾಜು ಮಾಡುವ ನೀರಿನ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶ ನೀಡಿದೆ. ದೆಹಲಿಗೆ ನೀರು ಸರಬರಾಜು ಮಾಡುವ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗಾಗಿ ಹರಿಯಾಣ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದೆ. ಹರಿಯಾಣದ ಕಂದಾಯ ಸಚಿವ ವಿಪುಲ್ ಗೋಯಲ್ ಅವರು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ಬೇಜವಾಬ್ದಾರಿತನದ ಹೇಳಿಕೆ ಎಂದು ಟೀಕಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳು ದಾರಿತಪ್ಪಿಸುವಂತಿದೆ ಎಂದು ಹರಿಯಾಣ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಅರವಿಂದ್ ಕೇಜ್ರಿವಾಲ್ ಹರಿಯಾಣದ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರಿಯಾಣ ಸರ್ಕಾರ ಯಮುನಾ ನದಿಗೆ ವಿಷ ಬೆರೆಸಿದೆ. ಈ ಮೂಲಕ ಸಾಮೂಹಿಕ ನರಮೇಧಕ್ಕೆ ಮುಂದಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.
ಇದನ್ನೂ ಓದಿ: ನಾನೂ ಅದೇ ನೀರು ಕುಡಿದಿದ್ದೇನೆ; ಯಮುನಾ ನದಿ ಕುರಿತ ಕೇಜ್ರಿವಾಲ್ ಆರೋಪಕ್ಕೆ ಪ್ರಧಾನಿ ಮೋದಿ ಆಕ್ರೋಶ
ದೆಹಲಿಗೆ ಸರಬರಾಜು ಮಾಡುವ ನೀರನ್ನು ವಿಷಪೂರಿತಗೊಳಿಸಲಾಗಿದೆ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗೆ ಈ ಪ್ರಕರಣ ಸಂಬಂಧಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:04 pm, Wed, 29 January 25