Gujarat: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ, ಎಎಪಿ ನಾಯಕ ಗೋಪಾಲ್ ಇಟಾಲಿಯಾ ಬಂಧನ

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಆಮ್​ ಆದ್ಮಿ ಪಕ್ಷನ ನಾಯಕ ಗೋಪಾಲ್ ಇಟಾಲಿಯಾ ಅವರನ್ನು ಸೂರತ್ ಪೊಲೀಸರು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Gujarat: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ, ಎಎಪಿ ನಾಯಕ ಗೋಪಾಲ್ ಇಟಾಲಿಯಾ ಬಂಧನ
ಗೋಪಾಲ್ ಇಟಾಲಿಯಾImage Credit source: India Today
Follow us
ನಯನಾ ರಾಜೀವ್
|

Updated on: Apr 17, 2023 | 7:08 PM

ಬಿಜೆಪಿ(BJP) ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಆಮ್​ ಆದ್ಮಿ ಪಕ್ಷದ ನಾಯಕ ಗೋಪಾಲ್ ಇಟಾಲಿಯಾ ಅವರನ್ನು ಸೂರತ್ ಪೊಲೀಸರು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮತ್ತು ರಾಜ್ಯ ಸಚಿವ ಮತ್ತು ಬಿಜೆಪಿಯ ರಾಜ್ಯ ಮುಖ್ಯಸ್ಥರ ವಿರುದ್ಧ ಕೆಲವು ಅವಹೇಳನಕಾರಿ ಹೇಳಿಕೆಗಳ ಮೇಲೆ ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದಿದ್ದರು, ಇದೀಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ರಾಜ್ಯದ ಗೃಹ ಸಚಿವ ಹರ್ಷ ಸಾಂಘವಿ ಮತ್ತು ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಇಟಾಲಿಯಾ ವಿರುದ್ಧ ಸೂರತ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಿಜೆಪಿ ಕಾರ್ಯಕರ್ತ ಪ್ರತಾಪ್ ಚೋಡ್ವಾಡಿಯಾ ಅವರು ದೂರು ದಾಖಲಿಸಿದ್ದಾರೆ.

ಕಳೆದ ವರ್ಷ, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಇಟಾಲಿಯಾ ಅವರನ್ನು ಬಂಧಿಸಿ ಸರಿತಾ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು.

ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಅವರು ಇಟಾಲಿಯಾ ವೀಡಿಯೊವನ್ನು ಹಂಚಿಕೊಂಡಿದ್ದರು. ಪ್ರಧಾನಿ ಮೋದಿಯವರನ್ನೂ ಅವಮಾನಿಸಿದ್ದರು. ಈ ವೀಡಿಯೊ 2019 ರ ಮತ್ತು ಸಾರ್ವತ್ರಿಕ ಚುನಾವಣೆಯ ಪೂರ್ವದ್ದು ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ