AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAP vs BJP: ಬಿಜೆಪಿಗೆ ಸೇರಲು 20 ಕೋಟಿ, ಇತರರನ್ನು ಕರೆತರಲು 25 ಕೋಟಿ; ಬಿಜೆಪಿ ವಿರುದ್ಧ ಆಪ್ ಆರೋಪ

ದೆಹಲಿಯಲ್ಲಿ ಬಿಜೆಪಿ ನಡೆಸಲು ಯತ್ನಿಸುತ್ತಿರುವ ಆಪರೇಷನ್ ಲೋಟಸ್ ಈಗ ಆಪರೇಷನ್ ಬೋಗಸ್ ಆಗಿದೆ. ಆಪ್ ಶಾಸಕರು ಸಿಸೊಡಿಯಾ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಸೋಮನಾಥ ಭಾರತಿ ಹೇಳಿದರು.

AAP vs BJP: ಬಿಜೆಪಿಗೆ ಸೇರಲು 20 ಕೋಟಿ, ಇತರರನ್ನು ಕರೆತರಲು 25 ಕೋಟಿ; ಬಿಜೆಪಿ ವಿರುದ್ಧ ಆಪ್ ಆರೋಪ
ಆಪ್ ನಾಯಕ ಅರವಿಂದ ಕೇಜ್ರಿವಾಲ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 24, 2022 | 3:22 PM

Share

ದೆಹಲಿ: ಕೇಂದ್ರ ಸರ್ಕಾರವು ದೆಹಲಿಯಲ್ಲಿ ಅಧಿಕಾರದಲ್ಲಿರುವ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (Aam Aadmi Party – AAP) ಸರ್ಕಾರವನ್ನು ಶತಾಯಗತಾಯ ಉರುಳಿಸಬೇಕೆಂದು ಪ್ರಯತ್ನ ಮಾಡುತ್ತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆಪ್ ನಾಯಕರು ಗಂಭೀರ ಆರೋಪ ಮಾಡಿದರು. ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವರು ಆಪ್ ನಾಯಕರು ಹಣದ ಪ್ರಲೋಭನೆ ಒಡ್ಡಿ ಶಾಸಕರನ್ನು ಕೊಳ್ಳಲು ಮತ್ತು ಬೆದರಿಕೆ ಒಡ್ಡಿ ಹೆದರಿಸಲು ಮುಂದಾಗಿದೆ ಎಂದು ದೂರಿದರು. ಈ ಆರೋಪಗಳನ್ನು ಬಿಜೆಪಿ ಸಾರಾಸಗಟಾಗಿ ನಿರಾಕರಿಸಿದೆ. ‘ಅಬಕಾರಿ ನೀತಿಯ ಲೋಪಗಳ ಮೂಲಕ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಡೆಸಿರುವ ಅವ್ಯವಹಾರ ಕುರಿತಂತೆ ನಡೆಯುತ್ತಿರುವ ತನಿಖೆಯನ್ನು ದಾರಿತಪ್ಪಿಸಲು ಆಪ್ ನಾಯಕರು ಇಂಥ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಬಿಜೆಪಿ ದೂರಿದೆ.

ಆಪ್ ಪಕ್ಷದ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿ ಸರ್ಕಾರವನ್ನು ಕೆಡವಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಮಾಹಿತಿಯನ್ನು ಬಹಿರಂಗ ಪಡಿಸುತ್ತೇವೆ’ ಹೇಳಿದ್ದಾರೆ. ‘ದೆಹಲಿ ಶಾಸಕರ ಒಗ್ಗಟ್ಟು ಒಡೆಯುವ ಪ್ರಯತ್ನಗಳು ಆರಂಭವಾಗಿವೆ. ಮಹಾರಾಷ್ಟ್ರ ಏಕನಾಥ್ ಶಿಂದೆ ಅವರಂತೆ ಮನೀಶ್ ಸಿಸೋಡಿಯಾ ಅವರನ್ನು ತಮ್ಮತ್ತ ಸೆಳೆಯಲು ಬಿಜೆಪಿ ನಾಯಕರು ಯತ್ನಿಸಿದರು. ಬಿಜೆಪಿ ಕಡೆಗೆ ಬಂದರೆ ₹ 20 ಸಿಗುತ್ತದೆ. ಇಲ್ಲದಿದ್ದರೆ ಸಿಸೋಡಿಯಾ ರೀತಿಯಲ್ಲಿ ಸಿಬಿಐ ತನಿಖೆ ಎದುರಿಸಬೇಕಾಗುತ್ತದೆ’ ಎಂದು ಬಿಜೆಪಿ ಬೆದರಿಕೆ ಹಾಕಿದೆ ಎಂದು ಹೇಳಿದರು.

ಆಪ್ ಶಾಸಕರಾದ ಅಜಯ್ ದತ್, ಸಂಜೀವ್ ಝಾ, ಸೋಮನಾಥ್ ಭಾರತಿ ಮತ್ತು ಕುಲದೀಪ್ ಕುಮಾರ್ ಅವರೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ಕೆಲ ಬಿಜೆಪಿಯ ಮಿತ್ರರು ₹ 20 ಕೋಟಿ ಆಮಿಷ ಒಡ್ಡಿದರು. ತಮ್ಮೊಂದಿಗೆ ಇತರ ಶಾಸಕರನ್ನು ಕರೆತಂದರೆ ₹ 25 ಕೋಟಿ ನೀಡುವುದಾಗಿ ಹೇಳಿದ್ದರು ಎಂದು ಸಿಂಗ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಇತರ ನಾಲ್ವರು ಆಪ್ ಶಾಸಕರು ತಮ್ಮನ್ನು ಓಲೈಸಲು ಬಿಜೆಪಿ ನಾಯಕರು ಹೇಗೆ ಪ್ರಯತ್ನಿಸಿದರು ಎಂದು ವಿವರಿಸಿದರು. ‘ಸಿಸೋಡಿಯಾ ವಿರುದ್ಧದ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎನ್ನುವುದು ಬಿಜೆಪಿ ನಾಯಕರಿಗೂ ಗೊತ್ತಿದೆ. ಆದರೆ ಆಪ್ ಸರ್ಕಾರ ಕೆಡವವೇಕು ಎನ್ನುವ ಉದ್ದೇಶದಿಂದ ಅವರು ಇಂತ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಆಪ್ ನಾಯಕರನ್ನು ಸೆಳೆಯುವ ಜವಾಬ್ದಾರಿಯನ್ನು ಬಿಜೆಪಿ ನಾಯಕರಿಗೆ ನೀಡಲಾಗಿದೆ’ ಎಂದು ಸೋಮನಾಥ ಭಾರತಿ ಹೇಳಿದರು.

ದೆಹಲಿಯಲ್ಲಿ ಬಿಜೆಪಿ ನಡೆಸಲು ಯತ್ನಿಸುತ್ತಿರುವ ಆಪರೇಷನ್ ಲೋಟಸ್ ಈಗ ಆಪರೇಷನ್ ಬೋಗಸ್ ಆಗಿದೆ. ಆಪ್ ಶಾಸಕರು ಸಿಸೊಡಿಯಾ ಅವರಿಗೆ ಬೆಂಬಲ ಸೂಚಿಸಿದ್ದಾರೆ. ‘ಮೋದಿ ಅವರೇ, ನೀವು ಹಲವು ರಾಜ್ಯಗಳಲ್ಲಿ ಈಗಾಗಲೇ ಸರ್ಕಾರ ಕೆಡವಿದ್ದರೆ ಬಿಜೆಪಿಯನ್ನು ಪ್ರತಿಷ್ಠಾಪಿಸಿದ್ದೀರಿ. ಆದರೆ ನೆನಪಿಟ್ಟುಕೊಳ್ಳಿ, ಇದು ದೆಹಲಿ. ಇಲ್ಲಿನ ಜನರು ಮೂರು ಬಾರಿ ಆಪ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ’ ಎಂದು ಹೇಳಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ