Parliament Monsoon Session:ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್​ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅಮಾನತು

|

Updated on: Jul 24, 2023 | 2:28 PM

ಮುಂಗಾರು ಸಂಸತ್ ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ಅವರು ಅಮಾನತುಗೊಂಡಿದ್ದಾರೆ.

Parliament Monsoon Session:ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್​ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅಮಾನತು
ಸಂಜಯ್ ಸಿಂಗ್
Image Credit source: ANI
Follow us on

ಮುಂಗಾರು ಸಂಸತ್ ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್(Sanjay Singh) ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ಅವರು ಅಮಾನತುಗೊಂಡಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ, ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯನ್ನು ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ . ಮಣಿಪುರ ವಿಚಾರವಾಗಿ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸಿದ್ದವು.

ಸದನದ ನಾಯಕ ಪಿಯೂಷ್ ಗೋಯಲ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು, ಇದನ್ನು ಸದನವು ಧ್ವನಿ ಮತದ ಮೂಲಕ ಅಂಗೀಕರಿಸಿತು. ಅವರ “ಅಶಿಸ್ತಿನ ವರ್ತನೆ” ಗಾಗಿ ಅವರನ್ನು ಉಳಿದ ಅಧಿವೇಶನಕ್ಕೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಯಿತು.

ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ, ಪ್ರತಿಪಕ್ಷ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದ್ದರಿಂದ ಸಭಾಪತಿ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಮಧ್ಯಾಹ್ನ 12 ಗಂಟೆಗೆ ಸದನ ಸಭೆ ಸೇರಿದಾಗ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು .

ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಸಭಾಪತಿ ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದರು.
ಗದ್ದಲದ ನಡುವೆ ಕೆಲವು ನಿಮಿಷಗಳ ಕಾಲ ಪ್ರಶ್ನೋತ್ತರ ಅವಧಿ ಮುಂದುವರೆಯಿತು.

ಮತ್ತಷ್ಟು ಓದಿ: Parliament Monsoon Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ, ಆಡಳಿತ ಪಕ್ಷಕ್ಕೆ ಟಕ್ಕರ್​ ಕೊಡಲು ವಿಪಕ್ಷಗಳು ರಣತಂತ್ರ

ಅವರನ್ನು ಮೊದಲು ತಮ್ಮ ಆಸನಕ್ಕೆ ಹಿಂತಿರುಗುವಂತೆ ಕೇಳಲಾಯಿತು. ಆದರೆ ಅವರು ಹೋಗದಿದ್ದಾಗ ಅಮಾನತುಗೊಳಿಸಲಾಯಿತು. ತಕ್ಷಣವೇ  ಪಿಯೂಷ್ ಗೋಯಲ್ ಎದ್ದು, ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಲು ಬಯಸುವುದಾಗಿ ಹೇಳಿದರು.

ಈ ಬಗೆಯ ನಡವಳಿಕೆ ಮತ್ತು ಸದನವನ್ನು ಗೊಂದಲಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾದದ್ದು ಎಂದು ಹೇಳಲಾಗಿದೆ. ಸರ್ಕಾರವು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸಿದೆ ಎಂದು ಹೇಳಿದ ಗೋಯಲ್, ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿಗಳನ್ನು ಒತ್ತಾಯಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ