ಮದ್ಯ ನೀತಿ ಪ್ರಕರಣದಲ್ಲಿ ಎಎಪಿಯನ್ನು ಆರೋಪಿ ಮಾಡಬೇಕೇ? ಕಾನೂನು ಸಲಹೆ ಪಡೆಯಲಿದೆ ತನಿಖಾ ಸಂಸ್ಥೆ

Liquor Policy Case: ಪಿಎಂಎಲ್‌ಎಗೆ ಸಂಬಂಧಿಸಿದಂತೆ, ನಿಮ್ಮ ಸಂಪೂರ್ಣ ಪ್ರಕರಣದ ಲಾಭವು ರಾಜಕೀಯ ಪಕ್ಷಕ್ಕೆ ಹೋಯಿತು. ಆ ರಾಜಕೀಯ ಪಕ್ಷವನ್ನು ಇನ್ನೂ ಆರೋಪಿಯನ್ನಾಗಿ ಮಾಡಲಾಗಿಲ್ಲ. ಅದಕ್ಕೆ ನೀವು ಹೇಗೆ ಉತ್ತರಿಸುತ್ತೀರಿ? ರಾಜಕೀಯ ಪಕ್ಷವು ನಿಮ್ಮ ಪ್ರಕಾರ ಫಲಾನುಭವಿ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಎಸ್‌ವಿ ಭಟ್ಟಿ ಅವರ ಪೀಠ ಹೇಳಿದೆ.

ಮದ್ಯ ನೀತಿ ಪ್ರಕರಣದಲ್ಲಿ ಎಎಪಿಯನ್ನು ಆರೋಪಿ ಮಾಡಬೇಕೇ? ಕಾನೂನು ಸಲಹೆ ಪಡೆಯಲಿದೆ ತನಿಖಾ ಸಂಸ್ಥೆ
ಅರವಿಂದ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:Oct 05, 2023 | 1:23 PM

ದೆಹಲಿ ಅಕ್ಟೋಬರ್  05: ಈಗ ರದ್ದಾದ ದೆಹಲಿ ಮದ್ಯ ನೀತಿಗೆ (Liquor Policy Case) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ (money laundering) ಆರೋಪದಡಿ ಆಮ್ ಆದ್ಮಿ ಪಕ್ಷವನ್ನು (AAP) ಆರೋಪಿ ಎಂದು ಹೆಸರಿಸಬಹುದೇ ಎಂಬ ಬಗ್ಗೆ ಜಾರಿ ನಿರ್ದೇಶನಾಲಯ (ED) ಕಾನೂನು ಅಭಿಪ್ರಾಯ ಕೇಳುತ್ತಿದೆ. ಎಎಪಿಯ ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಆಲಿಸಿದ ಸುಪ್ರೀಂಕೋರ್ಟ್, ಮದ್ಯ ನೀತಿಯಿಂದ ಪಕ್ಷಕ್ಕೆ ಲಾಭವಾಗಿದೆ ಎಂದು ಇಡಿ ಪ್ರಕರಣದಲ್ಲಿ ಎಎಪಿಯನ್ನು ಏಕೆ ಆರೋಪಿ ಎಂದು ಹೆಸರಿಸಲಾಗಿಲ್ಲ ಎಂದು ಕೇಂದ್ರ ಏಜೆನ್ಸಿಯನ್ನು ಸುಪ್ರೀಂಕೋರ್ಟ್ ಬುಧವಾರ ಕೇಳಿತ್ತು.

ಪಿಎಂಎಲ್‌ಎಗೆ ಸಂಬಂಧಿಸಿದಂತೆ, ನಿಮ್ಮ ಸಂಪೂರ್ಣ ಪ್ರಕರಣದ ಲಾಭವು ರಾಜಕೀಯ ಪಕ್ಷಕ್ಕೆ ಹೋಯಿತು. ಆ ರಾಜಕೀಯ ಪಕ್ಷವನ್ನು ಇನ್ನೂ ಆರೋಪಿಯನ್ನಾಗಿ ಮಾಡಲಾಗಿಲ್ಲ. ಅದಕ್ಕೆ ನೀವು ಹೇಗೆ ಉತ್ತರಿಸುತ್ತೀರಿ? ರಾಜಕೀಯ ಪಕ್ಷವು ನಿಮ್ಮ ಪ್ರಕಾರ ಫಲಾನುಭವಿ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಎಸ್‌ವಿ ಭಟ್ಟಿ ಅವರ ಪೀಠ ಹೇಳಿದೆ.

ಕ್ಯಾಬಿನೆಟ್ ಟಿಪ್ಪಣಿಯನ್ನು ನ್ಯಾಯಾಲಯವು ಪರಿಶೀಲಿಸಬಹುದೇ ಎಂದು ನ್ಯಾಯಾಲಯ ಕೇಳಿದೆ. ಕ್ಯಾಬಿನೆಟ್ ಟಿಪ್ಪಣಿಗಳನ್ನು ಪರಿಶೀಲಿಸುವುದನ್ನು ತಡೆಯುವ ನಿರ್ದಿಷ್ಟ ಸಂವಿಧಾನ ಪೀಠದ ತೀರ್ಪುಗಳಿವೆ ಎಂದು ನಾನು ನಂಬುತ್ತೇನೆ. ಇದು ದೆಹಲಿಗೆ ಅನ್ವಯಿಸುತ್ತದೆಯೇ ಎಂದು ನನಗೆ ತಿಳಿದಿಲ್ಲ, ಏಕೆಂದರೆ ಅದು ಕೇಂದ್ರಾಡಳಿತವಾಗಿದೆ. ಅವರು ಅದನ್ನು ಇನ್ನೂ ಹೇಳಲಿಲ್ಲ. ಸಂಸತ್​​​ನಲ್ಲಿ ಹೇಳಿದ್ದನ್ನು ನಾವು ಹೇಗೆ ಪ್ರವೇಶಿಸಬಾರದು ಎಂಬ ವಿಷಯದಂತೆ, ಈಗ ಅದನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದೇವೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಇದನ್ನೂ ಓದಿ: ಕೇಂದ್ರ ತನಿಖಾ ಸಂಸ್ಥೆಯಿಂದ ಬಂಧನಕ್ಕೊಳಗಾದ ಆಮ್ ಆದ್ಮಿ ಪಕ್ಷದ ನಾಯಕರಿವರು

ಇಡಿಯನ್ನು ಪ್ರತಿನಿಧಿಸುತ್ತಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಗುರುವಾರ ಎರಡೂ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಸಂಜಯ್ ಸಿಂಗ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ಬಂಧನವನ್ನು ವಿರೋಧಿಸಿ ಎಎಪಿ ಕಾರ್ಯಕರ್ತರು ಗುರುವಾರ ಕೇಂದ್ರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯಲ್ಲಿ ಪಕ್ಷದ ಹಲವಾರು ಕಾರ್ಯಕರ್ತರು ಜಮಾಯಿಸಿ, ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಸಿಂಗ್ ಬಿಡುಗಡೆಗೆ ಒತ್ತಾಯಿಸಿದರು.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದ್ದರಿಂದ ಜಾರಿ ನಿರ್ದೇಶನಾಲಯ ಸಿಂಗ್ ಅವರನ್ನು ಬಂಧಿಸಿದೆ ಎಂದು ಪಕ್ಷ ಆರೋಪಿಸಿದೆ.  2021-22ರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಪಾದಿತ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಂಗ್ ಅವರನ್ನು ಬುಧವಾರ ಬಂಧಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Thu, 5 October 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ