ಪಂಜಾಬ್​ ನಂತರ ಛತ್ತೀಸಗಡದ ಮೇಲೆ ಕಣ್ಣಿಟ್ಟ ಆಮ್ ಆದ್ಮಿ ಪಕ್ಷ: ಸಂಘಟನೆಯ ಬಲವೃದ್ಧಿಗೆ ಕೇಜ್ರಿವಾಲ್ ಕ್ರಮ

ಛತ್ತೀಸಗಡದಲ್ಲಿ ಪ್ರಸ್ತುತ ಕಾಂಗ್ರೆಸ್​ ಆಡಳಿತವಿದೆ. ಆಪ್​ ಪಕ್ಷದ ಪೂರ್ವಾಂಚಲ ಘಟಕದ ಉಸ್ತುವಾರಿ ಮತ್ತು ಬುರಾರಿ ಕ್ಷೇತ್ರದ ಶಾಸಕ ಸಂಜೀವ್ ಝಾ ಛತ್ತೀಸಗಡದ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ಪಂಜಾಬ್​ ನಂತರ ಛತ್ತೀಸಗಡದ ಮೇಲೆ ಕಣ್ಣಿಟ್ಟ ಆಮ್ ಆದ್ಮಿ ಪಕ್ಷ: ಸಂಘಟನೆಯ ಬಲವೃದ್ಧಿಗೆ ಕೇಜ್ರಿವಾಲ್ ಕ್ರಮ
ಅರವಿಂದ ಕೇಜ್ರಿವಾಲ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 20, 2022 | 7:32 AM

ದೆಹಲಿ: ಪಂಜಾಬ್​ನಲ್ಲಿ ನಿರ್ಣಾಯಕ ಜಯಗಳಿಸಿ ದೇಶದ ಗಮನ ಸೆಳೆದ ಆಮ್ ಆದ್ಮಿ ಪಕ್ಷ (Aam Admi Party – AAP) ಇದೀಗ ಛತ್ತೀಸಗಡದಲ್ಲಿಯೂ ಹೆಜ್ಜೆಗುರುತು ಮೂಡಿಸಲು ಪರಿಶ್ರಮ ಹಾಕುತ್ತಿದೆ. ಬುಡಕಟ್ಟು ಜನರೇ ಬಹುಸಂಖ್ಯೆಯಲ್ಲಿರುವ ಛತ್ತೀಸಗಡದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಪ್ ನಾಯಕ ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಆಪ್ ಪಕ್ಷದ ಉನ್ನತ ನಾಯಕ ಮತ್ತು ದೆಹಲಿ ಸರ್ಕಾರದಲ್ಲಿ ಪರಿಸರ ಖಾತೆ ಸಚಿವರಾಗಿರುವ ಗೋಪಾಲ್ ರೈ ಭಾನುವಾರ ಛತ್ತೀಸಗಡಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಚುನಾವಣೆ ಸಿದ್ಧತೆ ಪ್ರಯತ್ನಗಳಿಗೆ ಈ ಭೇಟಿ ಚಾಲನೆ ನೀಡಲಿದೆ. ಛತ್ತೀಸಗಡದಲ್ಲಿ ಪ್ರಸ್ತುತ ಕಾಂಗ್ರೆಸ್​ ಆಡಳಿತವಿದೆ. ಆಪ್​ ಪಕ್ಷದ ಪೂರ್ವಾಂಚಲ ಘಟಕದ ಉಸ್ತುವಾರಿ ಮತ್ತು ಬುರಾರಿ ಕ್ಷೇತ್ರದ ಶಾಸಕ ಸಂಜೀವ್ ಝಾ ಛತ್ತೀಸಗಡದ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಅವರೂ ಸಹ ಗೋಪಾಲ್ ರೈ ಅವರೊಂದಿಗೆ ಛತ್ತೀಸಗಡಕ್ಕೆ ಭೇಟಿ ನೀಡುತ್ತಿದ್ದಾರೆ.

ಛತ್ತೀಸಗಡ ಭೇಟಿಯ ವೇಳೆ ಗೋಪಾರ್ ರೈ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸುದೀರ್ಘ ಸಮಾಲೋಚನ ಸಭೆಗಳನ್ನು ನಡೆಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗಾಗಿ ಪಕ್ಷದ ಕಾರ್ಯಯೋಜನೆ ಸಿದ್ಧಪಡಿಸಲು ಮತ್ತು ದೊಡ್ಡಮಟ್ಟದಲ್ಲಿ ಸದಸ್ಯತ್ವ ಆಂದೋಲನಕ್ಕೆ ಹೊಸ ವೇಗ ನೀಡಲು ಅವರು ಕಾರ್ಯಕರ್ತರಿಗೆ ಉತ್ಸಾಹ ತುಂಬಲಿದ್ದಾರೆ. ಆಪ್ ಪಕ್ಷದ ರಾಜ್ಯ ಘಟಕದ ಕಚೇರಿಯನ್ನೂ ಛತ್ತೀಸಗಡದ ರಾಜಧಾನಿ ರಾಯಪುರದಲ್ಲಿ ಭಾನುವಾರ ಉದ್ಘಾಟಿಸಲಿದ್ದಾರೆ. ಪಂಜಾಬ್​ನಲ್ಲಿ ಆಪ್ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಸೋಮವಾರ ರಾಯಪುರದಲ್ಲಿ ನಡೆಯಲಿರುವ ವಿಜಯಯಾತ್ರೆಯಲ್ಲಿಯೂ ಅವರು ಪಾಲ್ಗೊಳ್ಳಲಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಆಪ್ ಪಕ್ಷವು ಗಂಭೀರವಾಗಿ ತೆಗೆದುಕೊಂಡಿದೆ. ವಿಜಯಯಾತ್ರೆಯ ಮೂಲಕ ನಮ್ಮ ಸಂದೇಶವನ್ನು ನಾವು ಜನರಿಗೆ ಕಳುಹಿಸಿಕೊಡುತ್ತಿದ್ದೇವೆ ಎಂದು ರೈ ಹೇಳಿದರು. ‘ಛತ್ತೀಸಗಡ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷವು ನಿರ್ಧರಿಸಿದೆ. ಕಾಂಗ್ರೆಸ್ ಪಕ್ಷದ ಆಡಳಿತವು ಯುವಜನರು ಮತ್ತು ಮಹಿಳೆಯರಿಗೆ ಅಸಮಾಧಾನ ತಂದೊಂಡ್ಡಿದೆ. ಭ್ರಮನಿರಸನಗೊಂಡಿರುವ ರಾಜ್ಯದ ಜನರು ಬದಲಾವಣೆಗೆ ನಿರ್ಧರಿಸಿದ್ದಾರೆ’ ಎಂದು ಆಪ್ ಪಕ್ಷದ ದೆಹಲಿ ಘಟಕದ ಸಂಯೋಜಕರಾಗಿರುವ ಗೋಪಾಲ್ ರೈ ಅಭಿಪ್ರಾಯಪಟ್ಟರು.

‘ಕಳೆದ 15 ವರ್ಷಗಳಿಂದ ಛತ್ತೀಸಘಡದಲ್ಲಿ ಬಿಜೆಪಿ ಆಡಳಿತವಿತ್ತು. ಆದರೆ ಅದು ಎಂದಿಗೂ ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿ ಆಗಿರಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರು ಬದಲಾವಣೆಗಾಗಿ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಮೂರೂವರೆ ವರ್ಷಗಳ ತನ್ನ ಆಡಳಿತದಲ್ಲಿ ಕಾಂಗ್ರೆಸ್ ಸಹ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ’ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಜನರು ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯವಾಗಿ ಯುವಜನರು, ಮಹಿಳೆಯರು ಮತ್ತು ಬುಡಕಟ್ಟು ಜನರಿಗೆ ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ಹೆಚ್ಚಾಗಿದೆ. ಛತ್ತೀಸಗಡದ ಜನರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಆಡಳಿತ ವೈಖರಿ ಕಂಡಿದ್ದಾರೆ. ಅವರಿಗೆ ಬದಲಾವಣೆ ಬೇಕಿದೆ ಎಂದು ರೈ ನುಡಿದರು. 2018ರ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷವು ಛತ್ತೀಸಗಡದಲ್ಲಿ ಸ್ಪರ್ಧಿಸಿತ್ತು. ರಾಜ್ಯದ 90 ಸ್ಥಾನಗಳ ಪೈಕಿ 85ರಲ್ಲಿ ಆಪ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಇನ್ನೂ ಸ್ವೀಪರ್ ಆಗಿಯೇ ಕೆಲಸ ಮಾಡುತ್ತಿದ್ದಾರೆ ಪಂಜಾಬ್ ಮುಖ್ಯಮಂತ್ರಿಯನ್ನು ಸೋಲಿಸಿದ ಆಪ್ ಶಾಸಕನ ಅಮ್ಮ

ಇದನ್ನೂ ಓದಿ: ಆಪ್​ ಟಾರ್ಗೆಟ್​: ಪಂಜಾಬ್​ ಆಯ್ತು ಈಗ ಇನ್ನೆರಡು ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದೇವೆ ಎಂದ ಆಮ್​ ಆದ್ಮಿ ಪಾರ್ಟಿ ಮುಖಂಡ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್