AAP Protest: ದೇಶದಾದ್ಯಂತ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ ಎಎಪಿ

ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ ಉರ್ದು, ಪಂಜಾಬಿ, ಗುಜರಾತಿ, ತೆಲುಗು, ಬೆಂಗಾಲಿ, ಒಡಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿ ಭಾಷೆಗಳಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ.

AAP Protest: ದೇಶದಾದ್ಯಂತ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ ಎಎಪಿ
ಪೋಸ್ಟರ್​​ನೊಂದಿಗೆ ಎಎಪಿ ನಾಯಕರು
Follow us
ರಶ್ಮಿ ಕಲ್ಲಕಟ್ಟ
|

Updated on: Mar 30, 2023 | 8:00 AM

ದೆಹಲಿ: ಆಮ್ ಆದ್ಮಿ ಪಕ್ಷ  (Aam Aadmi Party) ಇಂದು (ಮಾರ್ಚ್ 30ರಂದು) ದೇಶದಾದ್ಯಂತ 11 ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಗೋಪಾಲ್ ರಾಯ್ (Gopal Rai) ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಮಾರ್ಚ್ 30 ರಂದು ದೇಶಾದ್ಯಂತ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಪ್ರದರ್ಶಿಸುತ್ತದೆ. ಪಕ್ಷದ ಎಲ್ಲಾ ರಾಜ್ಯ ಘಟಕಗಳಲ್ಲಿ ತಮ್ಮ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಅಂಟಿಸಲು ಕೇಳಲಾಗಿದೆ. ಪೋಸ್ಟರ್‌ಗಳನ್ನು 11 ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ದೆಹಲಿ ಎಎಪಿ ಮುಖ್ಯಸ್ಥ ಮತ್ತು ಪರಿಸರ ಸಚಿವ ರಾಯ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ ಉರ್ದು, ಪಂಜಾಬಿ, ಗುಜರಾತಿ, ತೆಲುಗು, ಬೆಂಗಾಲಿ, ಒಡಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿ ಭಾಷೆಗಳಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ಕಳೆದ ವಾರ ದೆಹಲಿಯ ಗೋಡೆ ಮತ್ತು ವಿದ್ಯುತ್ ಕಂಬಗಳ ಮೇಲೆ “ಮೋದಿ ಹಠಾವೋ, ದೇಶ್ ಬಚಾವೋ” (ಮೋದಿ ತೆಗೆದುಹಾಕಿ, ಭಾರತವನ್ನು ಉಳಿಸಿ) ಎಂಬ ಪೋಸ್ಟರ್‌ಗಳು ಕಾಣಿಸಿಕೊಂಡಿತ್ತು. ನಂತರ ಪೊಲೀಸರು ಆರು ಜನರನ್ನು ಬಂಧಿಸಿ 49 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ರಾಷ್ಟ್ರ ರಾಜಧಾನಿಯಾದ್ಯಂತ “ಕೇಜ್ರಿವಾಲ್ ಹಠಾವೋ, ದೆಹಲಿ ಬಚಾವೋ” (ಕೇಜ್ರಿವಾಲ್ ತೆಗೆದುಹಾಕಿ, ದೆಹಲಿಯನ್ನು ಉಳಿಸಿ) ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಬಿಜೆಪಿ ಪ್ರತೀಕಾರ ತೀರಿಸಿತ್ತು.

ಪೋಸ್ಟರ್ ಅಂಟಿಸಿದ್ದಕ್ಕೆ ಆರು ಮಂದಿಯನ್ನು ಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಧಾನಿ ಮೋದಿ ನೇತೃತ್ವದ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. “ಏನಾಗುತ್ತಿದೆ ಇಲ್ಲಿ? ಕಳೆದ 24 ಗಂಟೆಗಳಲ್ಲಿ ಆರು ಜನರನ್ನು ಬಂಧಿಸಲಾಗಿದೆ. ಒಬ್ಬ ಪ್ರಿಂಟರ್ ಮತ್ತು ಇತರ ಆರು ಬಡವರು ಪೋಸ್ಟರ್ ಹಾಕುತ್ತಿದ್ದರು. ಒಬ್ಬ ಪ್ರಿಂಟರ್ ಮತ್ತು ಇತರ ಆರು ಜನರ ಬಂಧನದ ಹಿಂದೆ ನಮ್ಮ ದೇಶದ ಪ್ರಧಾನಿ ಇದ್ದಾರೆ. ಪ್ರಧಾನಿ ಆರೋಗ್ಯ ಸರಿ ಇದೆಯೇ ಎಂದು ಕೇಳಿದ್ದರು.

ಇದನ್ನೂ ಓದಿ:ದೀದಿ ಓ ದೀದಿ ಎಂದು ಕರೆದ ಮೋದಿಯನ್ನೇಕೆ ಅನರ್ಹ ಮಾಡಿಲ್ಲ?, ಅವರಿಗೇನು ಬೇರೆ ಕಾನೂನು ಇದೆಯೇ?: ಟಿಎಂಸಿ

ಅದೇ ವೇಳೆ ತಮ್ಮ ವಿರುದ್ಧದ ಪೋಸ್ಟರ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಇದರಲ್ಲಿ ನನಗೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಾರ್ವಜನಿಕರಿಗೆ ತಮ್ಮ ನಾಯಕನ ಪರವಾಗಿ ಅಥವಾ ವಿರುದ್ಧವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಎಲ್ಲಾ ಹಕ್ಕುಗಳಿವೆ. ನನ್ನ ವಿರುದ್ಧ ಪೋಸ್ಟರ್ ಹಾಕುವವರನ್ನು ಬಂಧಿಸಬಾರದು ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ