ಎಎಪಿಯ ಏಕೈಕ ಲೋಕಸಭಾ ಸಂಸದ ಸುಶೀಲ್ ಕುಮಾರ್ ರಿಂಕು ಬಿಜೆಪಿಗೆ ಸೇರ್ಪಡೆ

|

Updated on: Mar 27, 2024 | 7:54 PM

ಪಂಜಾಬ್‌ನ ಜಲಂಧರ್‌ನ ಸಂಸದ ಸುಶೀಲ್ ಕುಮಾರ್ ರಿಂಕು ಮತ್ತು ಜಲಂಧರ್ ಪಶ್ಚಿಮದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಶೀತನ್ ಅಂಗುರಾಲ್ ಅವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಅದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಎಎಪಿಯ ಏಕೈಕ ಲೋಕಸಭಾ ಸಂಸದ ಸುಶೀಲ್ ಕುಮಾರ್ ರಿಂಕು ಬಿಜೆಪಿಗೆ ಸೇರ್ಪಡೆ
ಸುಶೀಲ್ ಕುಮಾರ್ ರಿಂಕು
Follow us on

ದೆಹಲಿ ಮಾರ್ಚ್ 27: ಆಮ್ ಆದ್ಮಿ ಪಕ್ಷಕ್ಕೆ (AAP) ಮತ್ತೊಂದು ಹೊಡೆತ. ಲೋಕಸಭೆಯಲ್ಲಿ ಎಎಪಿಯ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು (Sushil Kumar Rinku) ಅವರು ಬುಧವಾರ ಬಿಜೆಪಿಗೆ ಸೇರಿದ್ದಾರೆ. ಪಂಜಾಬ್‌ನ ಜಲಂಧರ್‌ನಿಂದ ಸಂಸದರಾಗಿರುವ ರಿಂಕು ಅವರು ಆಪ್ ಶಾಸಕ ಶೀತನ್ ಅಂಗುರಾಲ್ (Sheetan Angural) ಅವರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ದೆಹಲಿಯಲ್ಲಿನ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವಾಗಲೇ ಪಕ್ಷಕ್ಕೆ ಈ ಹೊಡೆತ ಬಿದ್ದಿದೆ.

ಪಂಜಾಬ್‌ನ ಜಲಂಧರ್‌ನ ಸಂಸದ ರಿಂಕು ಮತ್ತು ಜಲಂಧರ್ ಪಶ್ಚಿಮದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಅಂಗುರಾಲ್ ಅವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಅದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿಗೆ ಸೇರ್ಪಡೆಯಾದ ನಂತರ, ಲೋಕಸಭೆಯ ಸಂಸದರು ಪಂಜಾಬ್‌ನ ಎಎಪಿ ಸರ್ಕಾರವು ರಾಜ್ಯದ ಅಭಿವೃದ್ಧಿ ಯೋಜನೆಗಳಲ್ಲಿ ತನಗೆ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದು, ಪಂಜಾಬ್‌ನ ಒಳಿತಿಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು.
ನನ್ನ ಪಕ್ಷ (ಎಎಪಿ) ನನ್ನನ್ನು ಬೆಂಬಲಿಸದ ಕಾರಣ ಜಲಂಧರ್ ಜನರಿಗೆ ನಾನು ನೀಡಿದ ಭರವಸೆಗಳನ್ನು ಈಡೇರಿಸಲಾಗಿಲ್ಲ ಎಂಬುದು ನಿಜ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಶೈಲಿಯಿಂದ ನಾನು ಪ್ರಭಾವಿತನಾಗಿದ್ದೇನೆ ಎಂದು ರಿಂಕು ಹೇಳಿದ್ದಾರೆ.

“ಜಲಂಧರ್ ಅಭಿವೃದ್ಧಿಗಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಾವು ಜಲಂಧರ್ ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ. ನಾವು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಜಲಂಧರ್‌ಗೆ ತರುತ್ತೇವೆ ಎಂದು ಅವರು ಹೇಳಿದರು.

ಸಂಸದ ರಿಂಕು ಕಳೆದ ವರ್ಷ ಜಲಂಧರ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ತೊರೆದು ಎಎಪಿ ಸೇರಿದ್ದರು. ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ರಿಂಕು ಅವರ ಅಶಿಸ್ತಿನ ಪ್ರತಿಭಟನೆಗಾಗಿ ಸದನದಿಂದ ಅಮಾನತುಗೊಂಡಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಈ ಬೆಳವಣಿಗೆ ನಡೆದಿರುವುದರಿಂದ ಬಿಜೆಪಿಯು ಪಂಜಾಬ್‌ನಿಂದ ರಿಂಕು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ; ಏಪ್ರಿಲ್ 3ರಂದು ಮುಂದಿನ ವಿಚಾರಣೆ

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ನಂತರ ಏಕೈಕ ಲೋಕಸಭಾ ಸಂಸದರ ನಷ್ಟವು ಪಂಜಾಬ್‌ನಲ್ಲಿ ಆಪ್ ಸರ್ಕಾರಕ್ಕೆ ದೊಡ್ಡ ಹೊಡೆತವನ್ನು ನೀಡಲಿದೆ.

ಕೇಜ್ರಿವಾಲ್ ಅವರು ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮತ್ತು ಸಂಜಯ್ ಸಿಂಗ್ ನಂತರ ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ಕನೇ ಎಎಪಿ ನಾಯಕರಾಗಿದ್ದಾರೆ. ಇದೇ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Wed, 27 March 24