AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆಯಲ್ಲಿ ರಾಘವ್ ಚಡ್ಡಾರನ್ನು ಪಕ್ಷದ ಹಂಗಾಮಿ ನಾಯಕರನ್ನಾಗಿ ನೇಮಿಸುವಂತೆ ಎಎಪಿ ಮನವಿ ತಿರಸ್ಕೃತ

ಈ ತಿಂಗಳ ಆರಂಭದಲ್ಲಿ, ಎಎಪಿ ನಾಯಕ ಸಂಜಯ್ ಸಿಂಗ್ ನ್ಯಾಯಾಂಗ ಬಂಧನದಲ್ಲಿರುವುದರಿಂದ ರಾಜ್ಯಸಭೆಯಲ್ಲಿ ಎಎಪಿಯ ಹಂಗಾಮಿ ನಾಯಕರಾಗಿ ಚಡ್ಡಾ ಅವರನ್ನು ನೇಮಿಸುವಂತೆ ಕೇಜ್ರಿವಾಲ್ ಅವರು ಧನ್ಖರ್ ಅವರಿಗೆ ಮನವಿ ಮಾಡಿದ್ದರು. ಈ ಮನವಿಯಲ್ಲಿ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ ತಿರಸ್ಕರಿಸಿದ್ದಾರೆ.

ರಾಜ್ಯಸಭೆಯಲ್ಲಿ ರಾಘವ್ ಚಡ್ಡಾರನ್ನು ಪಕ್ಷದ ಹಂಗಾಮಿ ನಾಯಕರನ್ನಾಗಿ ನೇಮಿಸುವಂತೆ ಎಎಪಿ ಮನವಿ ತಿರಸ್ಕೃತ
ರಾಘವ್ ಚಡ್ಡಾ
ರಶ್ಮಿ ಕಲ್ಲಕಟ್ಟ
|

Updated on:Dec 29, 2023 | 4:31 PM

Share

ದೆಹಲಿ ಡಿಸೆಂಬರ್ 29: ರಾಜ್ಯಸಭೆಯಲ್ಲಿ (Rajya sabha) ಪಕ್ಷದ ಹಂಗಾಮಿ ನಾಯಕರಾಗಿ ರಾಘವ್ ಚಡ್ಡಾ (Raghav Chadha) ಅವರನ್ನು ನೇಮಿಸುವಂತೆ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್  (Arvind Kejriwal)ಅವರ ಮನವಿಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ತಿರಸ್ಕರಿಸಿದ್ದಾರೆ. ಮೂಲಗಳ ಪ್ರಕಾರ, ಧನ್ಖರ್ ಅವರು ಕೇಜ್ರಿವಾಲ್‌ಗೆ ಬರೆದ ಪತ್ರದಲ್ಲಿ, ” ಈ ಅಂಶವು ‘ಸಂಸತ್ತಿನ (ಸೌಲಭ್ಯಗಳು) ಕಾಯಿದೆ 1998ನಲ್ಲಿ ಮಾನ್ಯತೆ ಪಡೆದ ಪಕ್ಷಗಳು ಮತ್ತು ಗುಂಪುಗಳ ನಾಯಕರು ಮತ್ತು ಮುಖ್ಯ ಸಚೇತಕರಿಗೆ ಮತ್ತು ಅದರ ಅಡಿಯಲ್ಲಿ ಮಾಡಿದ ನಿಯಮಗಳಿಗೆ ಒಳಪಟ್ಟಿರುತ್ತದೆ. ವಿನಂತಿಯು ಅನ್ವಯವಾಗುವ ಕಾನೂನು ಆಡಳಿತಕ್ಕೆ ಅನುಗುಣವಾಗಿಲ್ಲದಿದ್ದರೂ, ಅದನ್ನು ಅಂಗೀಕರಿಸಲಾಗುವುದಿಲ್ಲ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಎಎಪಿ ನಾಯಕ ಸಂಜಯ್ ಸಿಂಗ್ ನ್ಯಾಯಾಂಗ ಬಂಧನದಲ್ಲಿರುವುದರಿಂದ ರಾಜ್ಯಸಭೆಯಲ್ಲಿ ಎಎಪಿಯ ಹಂಗಾಮಿ ನಾಯಕರಾಗಿ ಚಡ್ಡಾ ಅವರನ್ನು ನೇಮಿಸುವಂತೆ ಕೇಜ್ರಿವಾಲ್ ಅವರು ಧನ್ಖರ್ ಅವರಿಗೆ ಮನವಿ ಮಾಡಿದ್ದರು. ನಿಯಮಗಳನ್ನು ಉಲ್ಲೇಖಿಸಿ ಕೇಜ್ರಿವಾಲ್ ಅವರ ಮನವಿಯನ್ನು ಧನ್ಖರ್ ತಿರಸ್ಕರಿಸಿರುವುದರಿಂದ, ಸಿಂಗ್ ಅವರು ರಾಜ್ಯಸಭೆಯಲ್ಲಿ ಎಎಪಿ ನಾಯಕರಾಗಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: ನಾಗ್ಪುರದಿಂದ ದೆಹಲಿಗೆ ಬರುತ್ತಿದ್ದ ರಾಹುಲ್ ಗಾಂಧಿಯಿದ್ದ ವಿಮಾನ ಜೈಪುರಕ್ಕೆ ಡೈವರ್ಟ್​

ಕೇಜ್ರಿವಾಲ್ ಅವರು ತಮ್ಮ ಹಿಂದಿನ ಸಂವಹನದಲ್ಲಿ, “ಮುಂದಿನ ಬದಲಾವಣೆಗಳು ಅಗತ್ಯವೆಂದು ಪರಿಗಣಿಸುವವರೆಗೆ ರಾಜ್ಯಸಭೆಯಲ್ಲಿ ಹಂಗಾಮಿ ಪಕ್ಷದ ನಾಯಕರಾಗಿ ರಾಘವ್ ಚಡ್ಡಾ ಅವರ ಹೆಸರನ್ನು ಪ್ರಸ್ತಾಪಿಸಲು ನಾನು ಬಯಸುತ್ತೇನೆ. ರಾಜ್ಯಸಭೆಯ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ಈ ಬದಲಾವಣೆಯನ್ನು ಅನುಮತಿಸಬೇಕೆಂದು ನಾವು ವಿನಂತಿಸುತ್ತೇವೆ ಎಂದಿದ್ದರು.

ಆದಾಗ್ಯೂ, ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಲು ಕೋರಿಕೆಯನ್ನು ತಿರಸ್ಕರಿಸಲಾಗಿಲ್ಲ “ಕೆಲವು ತಿದ್ದುಪಡಿಗಳನ್ನು ಕೋರಲಾಗಿದೆ, ಅದನ್ನು ಪರಿಹರಿಸಲಾಗುವುದು” ಎಂದು ಎಎಪಿ ಮೂಲಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Fri, 29 December 23

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ