AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಷೀಲ್ಡ್​ ಸರಬರಾಜು ವಿಳಂಬ, ಸೀರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾಗೆ ಆಸ್ಟ್ರಾಜೆನೆಕಾ ನೋಟಿಸ್

ಕೋವಿಷೀಲ್ಡ್​ ದಾಸ್ತಾನನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದರ ಮೇಲೆ ಭಾರತ ಸರ್ಕಾರ ಅಂಕುಶ ಒಡ್ಡಿರುವುದು ಸಹ ತಮ್ಮ ಸಂಸ್ಥೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ ಎಂದು ಪೂನಾವಾಲಾ ಹೇಳಿದ್ದಾರೆ.

ಕೊವಿಷೀಲ್ಡ್​ ಸರಬರಾಜು ವಿಳಂಬ, ಸೀರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾಗೆ ಆಸ್ಟ್ರಾಜೆನೆಕಾ ನೋಟಿಸ್
ಆಸ್ಟ್ರಾಜೆನಿಕಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Apr 08, 2021 | 11:33 PM

Share

ಇಂಗ್ಲೆಂಡ್​ನ ಆಸ್ಟ್ರಾಜೆನೆಕಾ ಸಂಸ್ಥೆಯ ಸಹಯೋಗದೊಂದಿಗೆ ಭಾರತದಲ್ಲಿ ಕೊವಿಷೀಲ್ಡ್​ ಹೆಸರಲ್ಲಿ ಕೊವಿಡ್​ ಲಸಿಕೆಯನ್ನು ತಯಾರಿಸುವ ಸೀರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾದ (ಎಸ್​ಐಐ) ಮಾಲೀಕ ಅದಾರ್ ಪೂನಾವಾಲಾ ಕೊಂಚ ಅತಂಕದಲ್ಲರುವಂತಿದೆ. ಅವರ ಸಂಸ್ಥೆಯಿಂದ ಲಸಿಕೆ ಸರಬರಾಜಿನಲ್ಲಿ ವಿಳಂಬವಾಗುತ್ತಿರುವ ಸುದ್ದಿ ಹರಡಿದ ನಂತರ ಆಸ್ಟ್ರಾಜೆನೆಕಾ ಸಂಸ್ಥೆಯು ಪೂನಾವಾಲಾ ಅವರಿಗೆ ಲೀಗಲ್ ನೋಟಿಸೊಂದನ್ನು ಕಳಿಸಿದೆ.

ಪೂನಾವಾಲಾ ಅವರು ತಮ್ಮ ಸಂಸ್ಥೆಯಲ್ಲಿ ಕೋವಿಷೀಲ್ಡ್​ ಲಸಿಕೆಯ ತಯಾರಿಕಾ ಸಾಮರ್ಥ್ಯ ಒತ್ತಡದಲ್ಲಿದೆ ಅಂತ ಹೇಳಿದ ಒಂದು ದಿನದ ನಂತರ ಆಸ್ಟ್ರಾಜೆನೆಕಾ ಸಂಸ್ಥೆಯು ಅವರಿಗೆ ನೋಟಿಸ್ ಕಳಿಸಿದೆ. ಭಾರತದಲ್ಲಿ ಕೊವಿಡ್ ವಿರುದ್ಧ ಜಾರಿಯಲ್ಲಿರುವ ಲಸಿಕಾ ಅಭಿಯಾನದಲ್ಲಿ ಬಳಸಲಾಗುತ್ತಿರುವ ಎರಡು ಲಸಿಕೆಗಳಲ್ಲಿ ಕೋವಿಷೀಲ್ಡ್​ ಒಂದಾಗಿದೆ, ಮತ್ತೊಂದು ಕೋವ್ಯಾಕ್ಸಿನ್.

ಹಾಗೆಯೇ, ಕೋವಿಷೀಲ್ಡ್​ ದಾಸ್ತಾನನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದರ ಮೇಲೆ ಭಾರತ ಸರ್ಕಾರ ಅಂಕುಶ ಒಡ್ಡಿರುವುದು ಸಹ ತಮ್ಮ ಸಂಸ್ಥೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ ಎಂದು ಪೂನಾವಾಲಾ ಹೇಳಿದ್ದಾರೆ. ಎಸ್​ಐಐ ಸಂಸ್ಥೆಯ ತನ್ನ ಉತ್ಪಾದನೆಯನ್ನು ರಫ್ತು ಮಾಡುವ ದೇಶಗಳಲ್ಲಿ ಪ್ರತಿ ಡೋಸ್​ಗೆ ಭಾರತಕ್ಕಿಂತ ಬಹಳ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ.

Adar Poonawalla

‘ವಿಶ್ವಕ್ಕೆ ಈಗ ನಮ್ಮ ವ್ಯಾಕ್ಸಿನ್​ ಅವಶ್ಯಕತೆಯಿದೆ. ಆದರೆ ನಾವು ಭಾರತದಲ್ಲಿನ ಅಗತ್ಯಗಳಿಗೆ ಪ್ರಾಧಾನ್ಯತೆ ನೀಡುತ್ತಿದ್ದೇವೆ, ಆದಗ್ಯೂ, ಭಾರತದ ಬೇಡಿಕೆಗೆ ಸ್ಫಂದಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಪ್ರತಿಯೊಬ್ಬ ಭಾರತೀಯನಿಗೆ ಲಸಿಕೆಯ ಅವಶ್ಯಕತೆಯಿದೆ,’ ಎಂದು ಪೂನಾವಾಲಾ ಹೇಳಿದ್ದಾರೆ. ಆದರೆ, ಕಳೆದ ವಾರ ಹೇಳಿಕೆಯೊಂದನ್ನು ನೀಡಿದ ಕೇಂದ್ರ ಸರ್ಕಾರ ಲಸಿಕೆಗಳ ರಫ್ತಿನ ಮೇಲೆ ನಿಚ್ಚಳವಾದ ನಿಷೇಧ ಹೇರಿಲ್ಲ ಎಂದು ಹೇಳಿತ್ತು.

ಎಸ್​ಐಐ ಲಸಿಕೆ ಉತ್ಪಾದನೆಯ ಸಾಮರ್ಥ್ಯವನ್ನು 100 ದಕ್ಷಲಕ್ಷ ಡೋಸ್​​ಗಳಿಗೆ ಹೆಚ್ಚಿಸಿದರೂ, ಭಾರತದಲ್ಲಿ ಲಸಿಕೆಯನ್ನು ತಯಾರಿಸುತ್ತಿರುವ ಇತರ ಫಾರ್ಮಾಸ್ಯೂಟಿಕಲ್ ಕಂಪನಿನಗಳು ಸಹ ಉತ್ಪಾದನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಬೇಕೆಂದು ಪೂನಾವಾಲಾ ಹೇಳಿದ್ದಾರೆ.

ಏತನ್ಮಧ್ಯೆ, ಮಹಾರಾಷ್ಟ್ರ ಮತ್ತು ದೆಹಲಿ ರಾಜ್ಯಗಳಲ್ಲಿ ಕೊವಿಡ್​ ಲಸಿಕೆಯ ತೀವ್ರ ಆಭಾವ ಎದುರಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಸರ್ಕಾರವು ಲಸಿಕೆಗಳ ತೀವ್ರ ಕೊರತೆಯ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳನ್ನು ಮುಚ್ಚುತ್ತಿರುವುದಾಗಿ ಹೇಳಿತ್ತು. ಆದರೆ, ಆ ಸರ್ಕಾರದ ವಾದವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸರ್ಕಾರವು ಮಹಾರಾಷ್ಟ್ರ ಸರ್ಕಾರ ಸೋಂಕಿತರ ಸಂಖ್ಯೆಯನ್ನು ತಗ್ಗಿಸಲಾಗದ ವೈಫಲ್ಯವನ್ನು ಬೇರೆಯವರ ಮೇಲೆ ಜಾರಿಸಲು ಪ್ರಯತ್ನ ಮಾಡುತ್ತಿದೆ ಎಂದು ಹೇಳಿತ್ತು.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇವೆ. ಕಳೆದ 24 ಗಂಟೆಗಳಲ್ಲಿ 56,286 ಹೊಸ ಪ್ರಕರಣಗಳು ವರದಿಯಾಗಿದ್ದು, 376 ಜನ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲೀಗ ಒಟ್ಟು 5,21,315 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: Corona Vaccine: ಆಕ್ಸ್​ಫರ್ಡ್-ಆಸ್ಟ್ರಾಜೆನೆಕಾ ಲಸಿಕೆಗೆ ಇಂಗ್ಲೆಂಡ್​ ಸರ್ಕಾರದ ಅನುಮತಿ.. ರೂಪಾಂತರ ಕೊರೊನಾ ವಿರುದ್ಧವೂ ಈ ವ್ಯಾಕ್ಸಿನ್ ಪರಿಣಾಮಕಾರಿ

ಇದನ್ನೂ ಓದಿ: AstraZeneca Side Effects: ಆಸ್ಟ್ರಾಜೆನಿಕಾ ಲಸಿಕೆಯ ಅಡ್ಡಪರಿಣಾಮಗಳನ್ನು ಪರಿಶೀಲನೆ ನಡೆಸಲು ನಿರ್ಧರಿಸಿದ ಭಾರತ

Published On - 10:31 pm, Thu, 8 April 21

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್