1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಖುಲಾಸೆ

1993ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಸಾಕ್ಷ್ಯಾಧಾರಗಳ ಕೊರತೆ ಉಲ್ಲೇಖಿಸಿ ನ್ಯಾಯಾಲಯ ಖುಲಾಸೆಗೊಳಿಸಿದೆ.

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಖುಲಾಸೆ
ಅಬ್ದುಲ್​
Follow us
|

Updated on:Feb 29, 2024 | 2:27 PM

1993ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಸಾಕ್ಷ್ಯಾಧಾರಗಳ ಕೊರತೆ ಉಲ್ಲೇಖಿಸಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ವಕೀಲ ಶಫ್ಕತ್ ಸುಲ್ತಾನಿ ಮಾತನಾಡಿ, ಅಬ್ದುಲ್ ಕರೀಂ ತುಂಡಾ ಸಂಪೂರ್ಣವಾಗಿ ನಿರಪರಾಧಿ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಬ್ದುಲ್ ಕರೀಂ ತುಂಡಾ ಅವರನ್ನು ಪ್ರತಿ ಸೆಕ್ಷನ್ ಮತ್ತು ಪ್ರತಿಯೊಂದು ಕಾಯ್ದೆಯಿಂದ ಖುಲಾಸೆಗೊಳಿಸಿದೆ ಎಂದು ಅವರು ಹೇಳಿದರು.

ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಟಾಡಾ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ. ಡಿಸೆಂಬರ್ 1993 ರಂದು, ಬಾಬರಿ ಮಸೀದಿ ಧ್ವಂಸದ ಮೊದಲ ವಾರ್ಷಿಕೋತ್ಸವದಂದು, ದೇಶದಾದ್ಯಂತ ಅನೇಕ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದವು. ದೇಶದ ಕೋಟಾ, ಸೂರತ್, ಕಾನ್ಪುರ, ಸಿಕಂದರಾಬಾದ್, ಮುಂಬೈ ಮತ್ತು ಲಕ್ನೋ ರೈಲುಗಳಲ್ಲಿ ಈ ಸ್ಫೋಟಗಳು ಸಂಭವಿಸಿವೆ.

ಮತ್ತಷ್ಟು ಓದಿ: ಬಾಟಲಿಗಳ ಬಳಸಿ ಟೈಂ ಬಾಂಬ್​ ತಯಾರಿಸಲು ವ್ಯಕ್ತಿಗೆ ಹಣ ನೀಡಿದ್ದ ಮಹಿಳೆಯ ಬಂಧನ

ಅಬ್ದುಲ್ ಕರೀಂ ತುಂಡಾ ಯಾರು?

ಸೈಯದ್ ಅಬ್ದುಲ್ ಕರೀಂ ತುಂಡಾ ಅವರು 1941 ರಲ್ಲಿ ಜನಿಸಿದರು. ಅವರು ಗಾಜಿಯಾಬಾದ್‌ನ ಪಿಲ್ಖುವಾದಲ್ಲಿ ಬೆಳೆದರು. ಅವರು 11 ವರ್ಷದವರಾಗಿದ್ದಾಗ ಅವರ ತಂದೆ ನಿಧನರಾದರು. ಇದರ ನಂತರ ಅವರು ಬಡಗಿ, ಕ್ಷೌರಿಕ, ಮತ್ತು ಬಳೆ ತಯಾರಕರಾಗಿ ಕೆಲಸ ಮಾಡಿದರು.

ಅವರು ಈ ಕೆಲಸವನ್ನು ಒಂದೇ ಸ್ಥಳದಲ್ಲಿ ಪಡೆಯಲು ಸಾಧ್ಯವಾಗಲಿಲ್ಲ. ಅವರು ದೇಶದ ವಿವಿಧ ಭಾಗಗಳಲ್ಲಿ ವಲಸೆ ಹೋಗುತ್ತಿದ್ದರು. ಈ ಸಮಯದಲ್ಲಿ, ಅವರು ಜರೀನಾ ಯೂಸುಫ್ ಎಂಬ ಮಹಿಳೆಯನ್ನು ವಿವಾಹವಾದರು ಮತ್ತು ಇಮ್ರಾನ್, ರಶೀದಾ ಮತ್ತು ಇರ್ಫಾನ್ ಎಂಬ ಮೂರು ಮಕ್ಕಳಿದ್ದಾರೆ.

ಅಬ್ದುಲ್ ಕರೀಂ ತುಂಡಾ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಲು ಪ್ರಾರಂಭಿಸಿದವು ಮತ್ತು ಅವರು ಹಲವಾರು ದಿನಗಳವರೆಗೆ ಮನೆಯಿಂದ ನಾಪತ್ತೆಯಾಗಲು ಪ್ರಾರಂಭಿಸಿದರು. 1981 ರಲ್ಲಿ, ಅವರು ತಮ್ಮ ಮೊದಲ ಪತ್ನಿ ಜರೀನಾ ಅವರನ್ನು ಬಿಟ್ಟು ಕಣ್ಮರೆಯಾದರು.

ಇದಾದ ಬಳಿಕ ವಾಪಸ್ ಬಂದಾಗ ಎರಡನೇ ಪತ್ನಿ ಮುಮ್ತಾಜ್ ಜತೆಗಿದ್ದಳು. ಮುಮ್ತಾಜ್ ಗುಜರಾತ್‌ನ ಅಹಮದಾಬಾದ್ ನಿವಾಸಿಯಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:17 pm, Thu, 29 February 24

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ