AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರಂಗ ಯಾತ್ರೆ ವಿವಾದ; ದೆಹಲಿ ಕೋರ್ಟ್‌ನಿಂದ ಸಿಜೆಪಿ ನಾಯಕ ಅಭಿಜೀತ್ ದಿಪ್ಕೆಗೆ ಷರತ್ತುಬದ್ಧ ಜಾಮೀನು

ದೆಹಲಿಯಲ್ಲಿ ನಡೆದ 'ಲೆಹ್ರಾ ದೋ ತಿರಂಗ' ಪ್ರತಿಭಟನೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಮತ್ತು ವಿವಾದಾತ್ಮಕ ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಕನ್ನಾಟ್ ಪ್ಲೇಸ್‌ನಲ್ಲಿ ರ‍್ಯಾಲಿ ಹಮ್ಮಿಕೊಳ್ಳಲು ಯತ್ನಿಸಿದ್ದ ಅಭಿಜಿತ್ ದಿಪ್ಕೆ ಅವರನ್ನು ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದರು.

ತಿರಂಗ ಯಾತ್ರೆ ವಿವಾದ; ದೆಹಲಿ ಕೋರ್ಟ್‌ನಿಂದ ಸಿಜೆಪಿ ನಾಯಕ ಅಭಿಜೀತ್ ದಿಪ್ಕೆಗೆ ಷರತ್ತುಬದ್ಧ ಜಾಮೀನು
Abhijeet Dipke (2)
ಸುಷ್ಮಾ ಚಕ್ರೆ
|

Updated on: Oct 17, 2026 | 5:36 PM

Share

ನವದೆಹಲಿ, ಅಕ್ಟೋಬರ್ 17: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರಿಗೆ ಇಂದು ದೆಹಲಿ ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ. ಶಾಂತಿ ಮುಚ್ಚಳಿಕೆ ಹಾಗೂ 50,000 ರೂ.ಗಳ ಶ್ಯೂರಿಟಿ ಬಾಂಡ್ ನೀಡಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಕನ್ನಾಟ್ ಪ್ಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಲೆಹ್ರಾ ದೋ ತಿರಂಗ’ ಪ್ರತಿಭಟನಾ ರ‍್ಯಾಲಿಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷೆ ನೇಹಾ ಬೋರಾ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇಂದು ಬೆಳಿಗ್ಗೆ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅಭಿಜಿತ್ ದಿಪ್ಕೆ ಅವರನ್ನು ಎಸ್‌ಇಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ: ‘ಕೆನ್ನೆಗೆ ಹೊಡೆದು, ಅಸಭ್ಯ ವರ್ತನೆ’; ಸಿಜೆಪಿ ರ‍್ಯಾಲಿ ವೇಳೆ ಸಿಆರ್‌ಪಿಎಫ್ ಕಾನ್​ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್

ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ 65ರ ಅಡಿಯಲ್ಲಿ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಅಭಿಜಿತ್ ದಿಪ್ಕೆ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 126 ಮತ್ತು 170ರಡಿ ಸಾರ್ವಜನಿಕ ಶಾಂತಿಭಂಗದ ಆರೋಪದ ಮೇಲೆ ಹೊಸ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದಕ್ಕೂ ಮೊದಲು ಅಕ್ಟೋಬರ್ 10ರಂದು ದೆಹಲಿ ವಿಮಾನ ನಿಲ್ದಾಣದಲ್ಲೂ ಇವರನ್ನು ಇಂತಹದ್ದೇ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿತ್ತು.

ಇಂದು ಬೆಳಗ್ಗೆ ಬಿಡುಗಡೆಯ ಬಳಿಕ ಮಾತನಾಡಿದ ನೇಹಾ ಬೋರಾ, ದೆಹಲಿ ಪೊಲೀಸರು ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಮುನ್ನೆಚ್ಚರಿಕೆ ಬಂಧನಗಳು ಸಂಪೂರ್ಣ ಅಕ್ರಮ ಎಂದು ಟೀಕಿಸಿದ್ದರು. ಅಲ್ಲದೆ, ವಿವಾದಾತ್ಮಕ ಎಸ್‌ಐಆರ್ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಿ ಜೈಲಿಗೆ ಹೋಗಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ಬಿಗುವಿನ ವಾತಾವರಣ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

150ಕ್ಕೂ ಹೆಚ್ಚು ಜನ ವಶಕ್ಕೆ:

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಂಚಾರ ದಟ್ಟಣೆಯನ್ನು ತಡೆಯಲು ಪೊಲೀಸರು ಸುಮಾರು 150 ಜನರನ್ನು ವಶಕ್ಕೆ ಪಡೆದಿದ್ದರು. ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ತ್ವರಿತ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್ ಆಪರೇಷನ್​: ಡಿಜಿ ಕಚೇರಿಗೆ ಹೊರಟಿದ್ದ ಹೆಡಿಕೆಯನ್ನ ತಡೆದ ಪೊಲೀಸ್​​
ಸ್ಟಿಂಗ್ ಆಪರೇಷನ್​: ಡಿಜಿ ಕಚೇರಿಗೆ ಹೊರಟಿದ್ದ ಹೆಡಿಕೆಯನ್ನ ತಡೆದ ಪೊಲೀಸ್​​
2 ನಿಮಿಷದಲ್ಲಿ 12 ಇಡ್ಲಿ ತಿಂದು ಕಮಾಲ್ ಮಾಡಿದ ಸಂಚಾರಿ ಪೊಲೀಸ್ ಪ್ರವೀಣ್
2 ನಿಮಿಷದಲ್ಲಿ 12 ಇಡ್ಲಿ ತಿಂದು ಕಮಾಲ್ ಮಾಡಿದ ಸಂಚಾರಿ ಪೊಲೀಸ್ ಪ್ರವೀಣ್
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ