ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದುಗೊಳಿಸಿ ಎಂದ ಬಿಜೆಪಿ ಸಂಸದ
ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿಯೇ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಿದೆ. ಹಾಗಾಗಿ ಕೂಡಲೇ ಅವರ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಕಾನ್ಪುರ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಉನ್ನಾವೋ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಪಾಕಿಸ್ತಾನಕ್ಕಿಂತಲೂ ಭಾರತದಲ್ಲೇ ಮುಸ್ಲಿಮರ ಸಂಖ್ಯೆ ಜಾಸ್ತಿ ಇರುವ ಕಾರಣ, ಅವರಿಗೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಉನ್ನಾವೋದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿಯೇ ಮುಸ್ಲಿಮರ ಜನಸಂಖ್ಯೆ ಜಾಸ್ತಿಯಿದೆ. ಹಾಗಾಗಿ ಕೂಡಲೇ ಅವರ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದುಗಳ ಕಿರಿಯ ಸಹೋದರರು ಎಂದು ಪರಿಗಣಿಸಿಕೊಂಡು ಈ ದೇಶದಲ್ಲಿ ವಾಸಿಸಬೇಕು ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ದೇಶದಲ್ಲಿ ಜನಸಂಖ್ಯೆ ಏರಿಕೆ ಆಗುತ್ತಿರುವ ಬಗ್ಗೆ ಮಾತನಾಡಿದ ಸಾಕ್ಷಿ ಮಹಾರಾಜ್, ಜನಸಂಖ್ಯೆ ನಿಯಂತ್ರಣ ಸಂಬಂಧ ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡನೆ ಮಾಡಲಾಗುವುದು. ಇನ್ನು ಮುಂದೆ ಇಬ್ಬರಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ ಎಂದರು. ಹಾಗೇ, ಕೃಷಿ ಕಾಯ್ದೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ. ಪ್ರತಿಪಕ್ಷಗಳು ರೈತರ ದಾರಿತಪ್ಪಿಸುತ್ತಿವೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಶೌರ್ಯ ಪದಕ ಹಿಂತಿರುಗಿಸಿದ ಮಣಿಪುರದ ASP ತೋನೌಜಮ್ ಬೃಂದಾ