ಎಬಿಪಿ-ಸಿ ವೋಟರ್ ಸಮೀಕ್ಷೆ: ವಿಧಾನಸಭಾ ಚುನಾವಣೆಯಲ್ಲಿ ಸಂಸದರನ್ನು ಕಣಕ್ಕಿಳಿಸುವ ಬಿಜೆಪಿಯ ತಂತ್ರ ವರ್ಕ್​ ಆಗುತ್ತಾ?

ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ(Assembly Elections)ಯ ದಿನಾಂಕಗಳು ಪ್ರಕಟಗೊಂಡಿದ್ದು,  ಎಲ್ಲ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಈ ನಡುವೆ ಎಬಿಪಿ ನ್ಯೂಸ್ ಸಿ ವೋಟರ್ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಯಲ್ಲಿ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಬಿಜೆಪಿಯ ಸಂಸದರಿಗೆ ಟಿಕೆಟ್ ನೀಡುವ ತಂತ್ರ ಬಿಜೆಪಿಗೆ ವರವೋ ಶಾಪವೋ ಎನ್ನುವ ಪ್ರಶ್ನೆಯನ್ನು ಮತದಾರರಲ್ಲಿ ಕೇಳಲಾಯಿತು. ವಿಧಾನಸಭೆ ಚುನಾವಣೆಗೆ ಸಂಸದರು ಮತ್ತು ಸಚಿವರನ್ನು ಕಣಕ್ಕಿಳಿಸುವ ತಂತ್ರವನ್ನು ಬಿಜೆಪಿ ಅಳವಡಿಸಿಕೊಂಡಿದೆ.

ಎಬಿಪಿ-ಸಿ ವೋಟರ್ ಸಮೀಕ್ಷೆ: ವಿಧಾನಸಭಾ ಚುನಾವಣೆಯಲ್ಲಿ ಸಂಸದರನ್ನು ಕಣಕ್ಕಿಳಿಸುವ ಬಿಜೆಪಿಯ ತಂತ್ರ ವರ್ಕ್​ ಆಗುತ್ತಾ?
ನರೇಂದ್ರ ಮೋದಿImage Credit source: ABP Live
Follow us
ನಯನಾ ರಾಜೀವ್
|

Updated on:Oct 16, 2023 | 11:12 AM

ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ(Assembly Elections)ಯ ದಿನಾಂಕಗಳು ಪ್ರಕಟಗೊಂಡಿದ್ದು,  ಎಲ್ಲ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಈ ನಡುವೆ ಎಬಿಪಿ ನ್ಯೂಸ್ ಸಿ ವೋಟರ್ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಯಲ್ಲಿ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಬಿಜೆಪಿಯ ಸಂಸದರಿಗೆ ಟಿಕೆಟ್ ನೀಡುವ ತಂತ್ರ ಬಿಜೆಪಿಗೆ ವರವೋ ಶಾಪವೋ ಎನ್ನುವ ಪ್ರಶ್ನೆಯನ್ನು ಮತದಾರರಲ್ಲಿ ಕೇಳಲಾಯಿತು. ವಿಧಾನಸಭೆ ಚುನಾವಣೆಗೆ ಸಂಸದರು ಮತ್ತು ಸಚಿವರನ್ನು ಕಣಕ್ಕಿಳಿಸುವ ತಂತ್ರವನ್ನು ಬಿಜೆಪಿ ಅಳವಡಿಸಿಕೊಂಡಿದೆ.

ಇದಕ್ಕಾಗಿ ಹಲವು ಕೇಂದ್ರ ಸಚಿವರು, ಸಂಸದರಿಗೆ ಟಿಕೆಟ್ ನೀಡಿದ್ದಾರೆ. ಏತನ್ಮಧ್ಯೆ, ಭಾನುವಾರ (ಅಕ್ಟೋಬರ್ 15) ಕಾಂಗ್ರೆಸ್ ಛತ್ತೀಸ್‌ಗಢ, ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಎಬಿಪಿ-ಸಿ ವೋಟರ್ ಸಮೀಕ್ಷೆ ಏನು ಹೇಳುತ್ತೆ ಎಂಬುದನ್ನು ನೋಡೋಣ.

ಯಾವ್ಯಾವ ರಾಜ್ಯಗಳಲ್ಲಿ ಏನೇನು ಪ್ರತಿಕ್ರಿಯೆ?

ಮಧ್ಯಪ್ರದೇಶದ ಶೇಕಡಾ 42 ರಷ್ಟು ಜನರು ವಿಧಾನಸಭೆಯಲ್ಲಿ ಸಂಸದರಿಗೆ ಟಿಕೆಟ್ ನೀಡುವ ಬಿಜೆಪಿಯ ತಂತ್ರವನ್ನು ಬೆಸ್ಟ್​ ಎಂದು ಸಾರ್ವಜನಿಕರು ಪ್ರತಿಕ್ರಿಯಿಸಿದ್ದಾರೆ. ಅದೇ ಸಮಯದಲ್ಲಿ, ಶೇ. 48 ಜನರು ಇದನ್ನು ಉತ್ತಮ ಎಂದು ಪರಿಗಣಿಸುವುದಿಲ್ಲ, ಹಾಗೆಯೇ ಶೇ.10 ಜನರು ಈ ಬಗ್ಗೆ ಯಾವುದೇ ಉತ್ತರವನ್ನು ನೀಡದೇ ತಟಸ್ಥವಾಗಿದ್ದರು.

ಅದೇ ಸಮಯದಲ್ಲಿ, ರಾಜಸ್ಥಾನದಲ್ಲಿ, ಶೇ.50 ಜನರು ಇದನ್ನು ಬೆಸ್ಟ್​ ಎಂದು ಕರೆದರು, ಆದರೆ ಶೇ.39 ಜನರು ಇದನ್ನು ಒಪ್ಪಲಿಲ್ಲ. 11 ರಷ್ಟು ಜನರು ಈ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ.

ಛತ್ತೀಸ್‌ಗಢದ ಶೇಕಡಾ 46 ರಷ್ಟು ಜನರು ವಿಧಾನಸಭೆಯಿಂದ ಸಂಸದರನ್ನು ಕಣಕ್ಕಿಳಿಸುವ ಬಿಜೆಪಿಯ ನಿರ್ಧಾರವನ್ನು ಮಾಸ್ಟರ್‌ಸ್ಟ್ರೋಕ್ ಎಂದು ಹೇಳಿದ್ದಾರೆ.

ಅದೇ ಸಮಯದಲ್ಲಿ, ಶೇ. 40 ಜನರು ಇದನ್ನು ಒಪ್ಪುವುದಿಲ್ಲ, ಆದರೆ ಶೇ.14 ಜನರು ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಲು ಸಾಧ್ಯವಾಗಲಿಲ್ಲ.

ಈ ಸಂಸದರಿಗೆ ವಿಧಾನಸಭೆ ಟಿಕೆಟ್ ಸಿಕ್ಕಿದೆ

ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಗಣೇಶ್ ಸಿಂಗ್,ರೀತಿ ಪಾಠಕ್,ರಾಕೇಶ್ ಸಿಂಗ್,ಉದಯ್ ಪ್ರತಾಪ್ ಸಿಂಗ್,ಫಗ್ಗನ್ ಸಿಂಗ್ ಕುಲಸ್ತೆ ಮುಂತಾದ ಸಂಸದರಿಗೆ ಟಿಕೆಟ್ ನೀಡಿದೆ.

ಮತ್ತಷ್ಟು ಓದಿ: Assembly Elections 2023: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ

ಅದೇ ಸಮಯದಲ್ಲಿ ರಾಜಸ್ಥಾನದಲ್ಲಿ ಸಂಸದರಾದ ದಿಯಾ ಕುಮಾರಿ, ಬಾಬಾ ಬಾಲಕನಾಥ್, ಹಂಸರಾಜ್ ಮೀನಾ, ಕಿರೋಡಿಲಾಲ್ ಮೀನಾ, ಭಾಗೀರಥ್ ಚೌಧರಿ ಮತ್ತು ನರೇಂದ್ರ ಕುಮಾರ್ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದ್ದು, ರೇಣುಕಾ ಸಿಂಗ್, ಗೋಮತಿ ಸಾಯಿ, ಅರುಣ್ ಸಾವೋ ಮತ್ತು ವಿಜಯ್ ಬಾಘೇಲ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ

ತೆಲಂಗಾಣ, ಛತ್ತೀಸ್​ಗಢ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಿಜೋರಾಂ ಈ ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್​ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

ಐದು ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳಲ್ಲಿ ಪುರುಷ ಮತದಾರರ ಸಂಖ್ಯೆ 8.24 ಕೋಟಿ ಮಹಿಳಾ ಮತದಾರರ ಸಂಖ್ಯೆ 7.88 ಕೋಟಿಯಷ್ಟಿದೆ. ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರ ಸಂಖ್ಯೆ 60 ಲಕ್ಷವಿದೆ. ಅವರ ವಯಸ್ಸು 18 ರಿಂದ 19 ವರ್ಷಗಳು. 18 ವರ್ಷ ಪೂರ್ಣಗೊಳ್ಳಲಿರುವ 15.39 ಲಕ್ಷ ಮತದಾರರಿದ್ದು, ಮುಂಗಡ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:06 am, Mon, 16 October 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್