Abu Salem: ಅಬು ಸಲೇಂ ಜೀವಾವಧಿ ಶಿಕ್ಷೆಯಲ್ಲಿ ಕಡಿತ ಸಾಧ್ಯವಿಲ್ಲ; ಸುಪ್ರೀಂಕೋರ್ಟ್ ತೀರ್ಪು

1993 Mumbai Blasts: ಭೂಗತ ಪಾತಕಿ ಅಬು ಸಲೇಂಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಸ್ಪಷ್ಟಪಡಿಸಿದೆ.

Abu Salem: ಅಬು ಸಲೇಂ ಜೀವಾವಧಿ ಶಿಕ್ಷೆಯಲ್ಲಿ ಕಡಿತ ಸಾಧ್ಯವಿಲ್ಲ; ಸುಪ್ರೀಂಕೋರ್ಟ್ ತೀರ್ಪು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 11, 2022 | 12:21 PM

ನವದೆಹಲಿ: ಮುಂಬೈ ಬಾಂಬ್ ಸ್ಫೋಟ (Mumbai Blast) ಸೇರಿದಂತೆ ಹಲವು ದುಷ್ಕೃತ್ಯಗಳಲ್ಲಿ ಶಾಮೀಲಾಗಿರುವ ಆರೋಪ ಹೊತ್ತಿರುವ ಭೂಗತ ಪಾತಕಿ ಅಬು ಸಲೇಂಗೆ (Abu Salem) ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು (Life Sentence) ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಸ್ಪಷ್ಟಪಡಿಸಿದೆ. ಪೋರ್ಚುಗಲ್ ಜೈಲಿನಲ್ಲಿ ಅಬು ಸಲೇಂ ಕಳೆದ ಅವಧಿಯನ್ನು ಶಿಕ್ಷಯ ಭಾಗ ಎಂದು ಪರಿಗಣಿಸಲು ಆಗುವುದಿಲ್ಲ. ಕೇಂದ್ರ ಸರ್ಕಾರವು ಪೋರ್ಚುಗಲ್ ಸರ್ಕಾರಕ್ಕೆ ನೀಡಿದ್ದ ಭರವಸೆಯನ್ನು ಈಡೇರಿಸಬೇಕಾಗುತ್ತದೆ ಎಂದು ಹೇಳಿತು.

1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಗ್ಯಾಂಗ್​ಸ್ಟರ್​ ಅಬು ಸಲೇಂ ದಲ್ಲಿ ತನ್ನ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಆತನ ಶಿಕ್ಷೆಯ ಅವಧಿಯನ್ನು ತಗ್ಗಿಸಲು ಸಾಧ್ಯವಿಲ್ಲ ಎಂದು ಘೋಷಿಸಿದೆ. ತನ್ನ ಹಸ್ತಾಂತರಕ್ಕಾಗಿ 2002ರಲ್ಲಿ ಪೋರ್ಚುಗಲ್‌ಗೆ ಭಾರತ ನೀಡಿದ ಭರವಸೆಯ ಅಡಿಯಲ್ಲಿ 25 ವರ್ಷಕ್ಕೂ ಹೆಚ್ಚು ಕಾಲ ತನಗೆ ಶಿಕ್ಷೆಯನ್ನು ನೀಡಬಾರದು ಎಂಬ ಆಧಾರದ ಮೇಲೆ ಅಬು ಸಲೇಂ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುಂಬೈ ಸರಣಿ ಸ್ಫೋಟದ ಆರೋಪಿ, ದಾವೂದ್ ಇಬ್ರಾಹಿಂ ಆಪ್ತ ಅಬು ಬಕರ್​ ಯುಎಇಯಲ್ಲಿ ಬಂಧನ; ಶೀಘ್ರವೇ ಭಾರತಕ್ಕೆ ಕರೆತಂದು ವಿಚಾರಣೆ

ಪೋರ್ಚುಗಲ್‌ಗೆ ನೀಡಿದ ಭರವಸೆಯನ್ನು ಗೌರವಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ 25 ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಗ್ಯಾಂಗ್‌ಸ್ಟರ್ ಅಬು ಸಲೇಂನನ್ನು ಬಿಡುಗಡೆ ಮಾಡಲು ಕೇಂದ್ರವು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಈ ಬಗ್ಗೆ ತೀರ್ಪು ನೀಡಿದ್ದು, “ಅಬು ಸಲೇಂ ಶಿಕ್ಷೆ 25 ವರ್ಷಗಳು ಪೂರ್ಣಗೊಂಡ ಒಂದು ತಿಂಗಳೊಳಗೆ ಅಗತ್ಯ ದಾಖಲೆಗಳನ್ನು ರವಾನಿಸಲಾಗುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ದಾವೂದ್ ಇಬ್ರಾಹಿಂ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮುಂಬೈ ಸ್ಫೋಟದ ಪ್ರಮುಖ ಆರೋಪಿ

1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಅಬು ಸಲೇಂನನ್ನು ಸುದೀರ್ಘ ಕಾನೂನು ಹೋರಾಟದ ನಂತರ 2005ರ ನವೆಂಬರ್ 11ರಂದು ಪೋರ್ಚುಗಲ್‌ನಿಂದ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. 2017ರ ಜೂನ್ ತಿಂಗಳಲ್ಲಿ ಮುಂಬೈನಲ್ಲಿ 1993ರ ಸರಣಿ ಸ್ಫೋಟದ ಪ್ರಕರಣದಲ್ಲಿ 257 ಮಂದಿ ಸಾವನ್ನಪ್ಪಿದ್ದರು, 713 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ಅಬು ಸಲೇಂ ಅಪರಾಧಿ ಎಂದು ಆದೇಶಿಸಲಾಗಿತ್ತು. ನಂತರ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

Published On - 11:52 am, Mon, 11 July 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ