AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ ​. ಐಆರ್​ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ.

ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು
ಚಂದ್ರಬಾಬು ನಾಯ್ಡು
ಅಕ್ಷಯ್​ ಪಲ್ಲಮಜಲು​​
|

Updated on:Oct 11, 2023 | 4:21 PM

Share

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.

ಇನ್ನು ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ನಾಳೆಯವರೆಗೆ ಯಾರನ್ನೂ ಬಂಧಿಸದಂತೆ ಸಿಐಡಿಗೆ ನ್ಯಾಯಾಲಯ ಸೂಚನೆ ನೀಡಿದೆ. ಸಿಐಡಿ ವಿಜಯವಾಡ ಎಸಿಬಿ ನ್ಯಾಯಾಲಯ ಸಲ್ಲಿಸಿದ್ದ ಇನ್ನರ್ ರಿಂಗ್ ರೋಡ್ ಅರ್ಜಿಗೆ ಹೈಕೋರ್ಟ್ ತಡೆ ನೀಡಿದೆ. 2014-19ರ ಅವರ ಅವಧಿಯಲ್ಲಿ ಇವರು ನೇತೃತ್ವದಲ್ಲಿ ಸರ್ಕಾರ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ನಡೆಸಿದೆ ಎಂದು ಆರೋಪಿಸಿ, ಸೆಪ್ಟೆಂಬರ್ 9 ರಂದು ನಂದ್ಯಾಲ್‌ನಿಂದ ರಾಜ್ಯ ಸಿಐಡಿ ಬಂದಿಸಿತ್ತು. ನಂತರ ಚಂದ್ರಬಾಬು ನಾಯ್ಡು ಅಮರಾವತಿ ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು ಹಿಂಸಾಚಾರ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಗೃಹ ಬಂಧನ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಈ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯನ್ನು ಡೀಮ್ಡ್ ಕಸ್ಟಡಿ ಆಧಾರದ ಮೇಲೆ ತಿರಸ್ಕರಿಸಿತು. ಇನ್ನು ಇನ್ನರ್ ರಿಂಗ್ ರೋಡ್ ಪ್ರಕರಣದಲ್ಲಿ, ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Wed, 11 October 23