AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Access: ಬಡ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದಲ್ಲಿ ಗಮನಾರ್ಹ ಸಾಧನೆ; ಇಲ್ಲಿದೆ ನೋಡಿ ವಿವರ

ಹೆಚ್ಚು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ದೊರೆತ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಬಡ ಕುಟುಂಬಗಳ ವಿದ್ಯುತ್ ಲಭ್ಯತೆ ಪ್ರಮಾಣ ಶೇ 91ರಿಂದ 95ಕ್ಕೆ ತಲುಪಿದೆ.

Electricity Access: ಬಡ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದಲ್ಲಿ ಗಮನಾರ್ಹ ಸಾಧನೆ; ಇಲ್ಲಿದೆ ನೋಡಿ ವಿವರ
ಸಾಂದರ್ಭಿಕ ಚಿತ್ರImage Credit source: PTI
TV9 Web
| Updated By: Ganapathi Sharma|

Updated on: Jan 16, 2023 | 9:26 PM

Share

ಬೆಂಗಳೂರು: ದೇಶದ ಬಡ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ (Electricity) ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶವು ಮಹತ್ತರ ಸಾಧನೆ ಮಾಡಿದೆ. ದೇಶದ ಬಡ ಕುಟುಂಬಗಳ ವಿದ್ಯುತ್ ಲಭ್ಯತೆ ಪ್ರಮಾಣ ಕಳೆದ ಐದು ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಾಗಿದೆ ಎಂದು ‘ಒಆರ್​ಎಫ್​ ಆನ್​ಲೈನ್ (ORF Online)’ ಪ್ರಾಧ್ಯಾಪಕಿ, ಅರ್ಥಶಾಸ್ತ್ರಜ್ಞೆ ಪ್ರೊ. ಶಮಿಕಾ ರವಿ (Prof. Shamika Ravi) ಅಂಕಿಅಂಶ ಸಹಿತ ಟ್ವೀಟ್ ಮಾಡಿದ್ದಾರೆ. ಭಾರತದ ನೈಜ ಆರ್ಥಿಕತೆ ಕಳೆದ 5 ವರ್ಷಗಳಲ್ಲಿ ಕ್ರಾಂತಿ ಮಾಡಿದೆ. ಬಡ ಜನರ ವಿದ್ಯುತ್ ಲಭ್ಯತೆ ಪ್ರಮಾಣ ಶೇ 53ರಿಂದ 86ಕ್ಕೆ ತಲುಪಿದೆ. 19 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದು ಶೇ 95ಕ್ಕೆ ತಲುಪಿದೆ. ಬಡ ರಾಜ್ಯಗಳಲ್ಲೇ ಹೆಚ್ಚಿನ ಪ್ರಗತಿಯಾಗಿದೆ ಎಂದು ಅವರು ಅಂಕಿಅಂಶದ ಗ್ರಾಫ್​ ಸಹಿತ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷಾ ವರದಿಯಿಂದ ಕಲೆಹಾಕಿದ ಅಂಕಿಅಂಶಗಳ ಆಧಾರದಲ್ಲಿ ಶಮಿಕಾ ರವಿ ಗ್ರಾಫ್ ಸಿದ್ಧಪಡಿಸಿದ್ದಾರೆ.

ವಿದ್ಯುತ್ ಸಂಪರ್ಕ; ಮುಂಚೂಣಿಯಲ್ಲಿದೆ ಕರ್ನಾಟಕ

ಹೆಚ್ಚು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ದೊರೆತ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಬಡ ಕುಟುಂಬಗಳ ವಿದ್ಯುತ್ ಲಭ್ಯತೆ ಪ್ರಮಾಣ ಶೇ 91ರಿಂದ 95ಕ್ಕೆ ತಲುಪಿದೆ. ದೆಹಲಿ, ಪಂಜಾಬ್, ಹರಿಯಾಣ, ಕೇರಳ ಮತ್ತು ತೆಲಂಗಾಣಗಳಲ್ಲಿ ಶೇ 98ಕ್ಕೆ ತಲುಪಿದೆ. ಆಂಧ್ರ ಪ್ರದೇಶದಲ್ಲಿ ಶೇ 97ಕ್ಕೆ ತಲುಪಿದ್ದರೆ ತಮಿಳುನಾಡಿನಲ್ಲಿ ಶೇ 96ಕ್ಕೆ ತಲುಪಿದೆ.

ಜಾರ್ಖಂಡ್, ಅಸ್ಸಾಂ ಮತ್ತು ಉತ್ತರ ಪ್ರದೇಶಗಳಲ್ಲಿ ಬಡ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕ್ರಮವಾಗಿ ಶೇ 77, 69 ಮತ್ತು 63 ಆಗಿದೆ.

ಸಣ್ಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಉತ್ತಮ ಸಾಧನೆ

ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಡ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ಗಮನಾರ್ಹ ಸಾಧನೆ ಮಾಡಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಗೋವಾದಲ್ಲಿ ಶೇ 100 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಸಿಕ್ಕಿಂ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಶೇ 98 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ದೊರೆತಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಲಕ್ಷದ್ವೀಪದಲ್ಲಿ ಶೇ 100 ಮನೆಗಳಿಗೆ ಸಂಪರ್ಕ ದೊರೆತಿದೆ. ಉಳಿದಂತೆ ಪುದುಚೇರಿ, ಲಡಾಖ್, ಚಂಡೀಗಢಗಳಲ್ಲಿ ಶೇ 99, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ 97, ಅಂಡಮಾನ್, ನಿಕೋಬಾರ್ ದ್ವೀಪಸಮೂಹಗಳಲ್ಲಿ ಶೇ 88ರಷ್ಟು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ