ಮಧ್ಯಪ್ರದೇಶ: ಕುಂಭ ಮೇಳದಿಂದ ಹಿಂದಿರುಗುವಾಗ ಅಪಘಾತ, ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವು

ಕುಂಭ ಮೇಳದಿಂದ ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಘಟನೆ ನಡೆದಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಘಟನೆ ಬೆಳಗಿನ ಜಾವ 2:30 ಕ್ಕೆ ನಡೆದಿದೆ. ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ನಿವಾಸಿಗಳು. ಮಾನ್ಪುರ ಭೈರವ ಘಾಟ್‌ನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಮುಂದೆ ಚಲಿಸುತ್ತಿದ್ದ ಟ್ಯಾಂಕರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.

ಮಧ್ಯಪ್ರದೇಶ: ಕುಂಭ ಮೇಳದಿಂದ ಹಿಂದಿರುಗುವಾಗ ಅಪಘಾತ, ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವು
ಆಸ್ಪತ್ರೆ
Image Credit source: ANI

Updated on: Feb 07, 2025 | 2:33 PM

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಹಿಂದಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್​ ಬಳಿ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಮೂಲದ ನಾಲ್ವರು ಸೇರಿ ಒಟ್ಟು 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ.ಟಿಟಿ ವಾಹನದಲ್ಲಿ 19 ಮಂದಿ ವಾಪಸಾಗುತ್ತಿದ್ದರು ಆಗ ಲಾರಿಗೆ ವಾಹನ ಡಿಕ್ಕಿ ಹೊಡೆದಿದೆ.

ಬೆಳಗಾವಿಯ ನಾಲ್ವರು ಇಂದೋರ್​ನ ಇಬ್ಬರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಘಟನೆ ಬೆಳಗಿನ ಜಾವ 2:30 ಕ್ಕೆ ನಡೆದಿದೆ. ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ನಿವಾಸಿಗಳು. ಮಾನ್ಪುರ ಭೈರವ ಘಾಟ್‌ನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಮುಂದೆ ಚಲಿಸುತ್ತಿದ್ದ ಟ್ಯಾಂಕರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ:
Uttar Pradesh Accident : ಮಹಾಕುಂಭಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತ, ಮೂವರು ಸಾವು, 40 ಮಂದಿಗೆ ಗಾಯ

ಆ ಮೂಲಕ ಹಾದುಹೋಗುತ್ತಿದ್ದ ಇಬ್ಬರು ಬೈಕ್ ಸವಾರರು ಸಹ ಡಿಕ್ಕಿ ಹೊಡೆದು ಸಾವನ್ನಪ್ಪಿದರು, ನಾಲ್ವರು ಮೃತರನ್ನು ಇನ್ನೂ ಗುರುತಿಸಲಾಗಿಲ್ಲ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಪ್ರಯಾಣಿಕರ ವಾಹನವು ಚೂರುಚೂರಾಗಿತ್ತು. ಮೃತ ಬೈಕ್ ಸವಾರರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರನ್ನು ಬೆಳಗಾವಿಯ ಶಹಾಪುರ ನಿವಾಸಿ ಡ್ರೈವರ್ ಸಾಗರ್(55), ಗಣೇಶಪುರ ನಿವಾಸಿ ನಿತಿ ಪಾಟೀಲ್(50) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಇಂದೋರ್‌ನ ಎಂವೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸಂಪೂರ್ಣ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಉಜ್ಜಯಿನಿಯ ಪ್ರಸಿದ್ಧ ಮಹಾಕಾಳ ದೇವಸ್ಥಾನಕ್ಕೆ ಭೇಟಿ ನೀಡಿ ಕರ್ನಾಟಕದ ಬೆಳಗಾವಿಗೆ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:58 pm, Fri, 7 February 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us