ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು, 7 ಜನರ ಸ್ಥಿತಿ ಗಂಭೀರ

ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು.

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು, 7 ಜನರ ಸ್ಥಿತಿ ಗಂಭೀರ
ಒಡಿಶಾ ಅಪಘಾತ
Follow us
ನಯನಾ ರಾಜೀವ್
|

Updated on: Dec 01, 2023 | 10:39 AM

ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ(Accident)ದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು.

ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್‌ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಆರಂಭದಲ್ಲಿ ಗಾಯಾಳುಗಳನ್ನು ಘಾಟ್‌ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ನಂತರ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ಈ ಅವಘಡ ಎಷ್ಟು ಭೀಕರವಾಗಿತ್ತೆಂದರೆ ವ್ಯಾನ್ ಹಾರಿ ಹೋಗಿದೆ.

ಮಾಹಿತಿ ಪಡೆದ ಬಲಿಜೋಡಿ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮತ್ತಷ್ಟು ಓದಿ: ಕಲಬುರಗಿ: ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕಿಯೋಂಜಾರ್ ಎಸ್ಪಿ ಕುಸಲ್ಕರ್ ನಿತಿನ್ ದಗುಡು ಮಾತನಾಡಿ, 20 ಮಂದಿ ತುಂಬಿದ್ದ ವ್ಯಾನ್ ಅತಿವೇಗದಲ್ಲಿ ಹೋಗುತ್ತಿದ್ದು, ಈ ವೇಳೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ಮಂಜು ಇದ್ದ ಕಾರಣ ವ್ಯಾನ್ ಅಪಘಾತಕ್ಕೆ ಈಡಾಗಿರಬಹುದು ಎಂದು ಅಂದಾಜಿಸಲಾಗಿದೆ.

ಪೊಲೀಸರ ಪ್ರಕಾರ, ಈ ವ್ಯಾನ್‌ನಲ್ಲಿದ್ದ ಎರಡು ಕುಟುಂಬಗಳು ಮತ್ತು ಅಕ್ಕಪಕ್ಕದ ಮನೆಯವರೆಲ್ಲಾ ಸೇರಿ ಮಾ ತಾರಿಣಿಯ ದರ್ಶನಕ್ಕಾಗಿ ಹೊರಟಿದ್ದರು. ಶುಕ್ರವಾರ (ಡಿಸೆಂಬರ್ 01) ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ