AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಶಿವಗಂಗಾದಲ್ಲಿ ಬಸ್ ಅಪಘಾತ; 11ಕ್ಕೂ ಹೆಚ್ಚು ಸಾವು; 19 ಮಂದಿಗೆ ಗಾಯ

2 buses collide near Pillaiyarpatti, Sivaganga district in Tamil Nadu: ತಮಿಳುನಾಡಿನಲ್ಲಿ ಒಂದು ವಾರದ ಅಂತರದಲ್ಲಿ ಎರಡು ಭೀಕರ ಬಸ್ ಅಪಘಾತ ಘಟನೆಗಳು ಸಂಭವಿಸಿವೆ. ಕಳೆದ ವಾರ ತೇಂಕಾಸಿಯಲ್ಲಿ ಎರಡು ಖಾಸಗಿ ಬಸ್ಸುಗಳು ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ್ದರು. ಇವತ್ತು ಭಾನುವಾರ ಶಿವಗಂಗಾ ಜಿಲ್ಲೆಯ ಪಿಳ್ಳೈಯಾರ್​ಪಟ್ಟಿ ಸಮೀಪ ಎರಡು ಸರ್ಕಾರಿ ಬಸ್ಸುಗಳು ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ಶಿವಗಂಗಾದಲ್ಲಿ ಬಸ್ ಅಪಘಾತ; 11ಕ್ಕೂ ಹೆಚ್ಚು ಸಾವು; 19 ಮಂದಿಗೆ ಗಾಯ
ಅಪಘಾತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 30, 2025 | 7:26 PM

Share

ಚೆನ್ನೈ, ನವೆಂಬರ್ 30: ಕಳೆದ ವಾರ ತೇಂಕಾಸಿಯಲ್ಲಿ ಬಸ್ ಅಪಘಾತ ಘಟನೆಯ ನೆನಪು ಮಾಸುವ ಮೊದಲೇ ತಮಿಳುನಾಡಿನಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಘಟನೆ ಸಂಭವಿಸಿದೆ. ಶಿವಗಂಗಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಪಿಳ್ಳೈಯಾರ್​ಪಟ್ಟಿ ಸಮೀಪದ ಕುಮ್ಮನಗುಡಿ ಎಂಬಲ್ಲಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಈ ದುರ್ಘಟನೆಯಲ್ಲಿ 19 ಮಂದಿಗೆ ಗಾಯಗಳೂ ಆಗಿವೆ.

ಎರಡೂ ಕೂಡ ಸರ್ಕಾರಿ ಬಸ್ಸುಗಳೇ ಆಗಿದ್ದು, ಒಂದು ಬಸ್ಸು ತಿರುಪ್ಪೂರ್​ನಿಂದ ಕಾರೈಕ್ಕುಡಿಯತ್ತ ಸಾಗುತ್ತಿತ್ತು. ಮತ್ತೊಂದು ಬಸ್ಸು ಕಾರೈಕ್ಕುಡಿಯಿಂದ ದಿಂಡಿಗಲ್, ಮದುರೈ ಕಡೆಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಅಪಘಾತದ ತೀವ್ರತೆ ಬಹಳ ಭಯಾನಕವಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿರುವ ಒಂದು ಚಿತ್ರದಲ್ಲಿ, ಒಂದು ಬಸ್ಸಿನ ಬಲಬದಿ ಬಹುತೇಕ ನಾಶವಾಗಿರುವುದು ಕಂಡುಬರುತ್ತದೆ. ಅಪಘಾತ ಸ್ಥಳದಲ್ಲಿ ಶವಗಳು ಸಾಲಾಗಿ ಬಿದ್ದಿರುವ ದೃಶ್ಯ ಕಾಣುತ್ತದೆ.

ಇದನ್ನೂ ಓದಿ: ದಾಂತೆವಾಡದಲ್ಲಿ 37 ನಕ್ಸರು ಶರಣು; ಹಿಂಸಾಮಾರ್ಗ ಬಿಟ್ಟು ಮುಖ್ಯವಾಹಿನಿಗೆ ಬಂದ ಮಾವೋವಾದಿಗಳು

ಒಂದು ಬಸ್ಸಿನ ಮುಂಬದಿಯ ವಿಂಡ್​ಶೀಲ್ಡ್ ಕಿತ್ತು ಹೋಗಿ, ಮಹಿಳೆಯೊಬ್ಬಳು ಅದರಿಂದ ಹೊರಗೆ ಜಿಗಿಯುವ ದೃಶ್ಯವೂ ವಿಡಿಯೋದಲ್ಲಿ ಕಾಣುತ್ತದೆ. ಮತ್ತೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡು ಕೆಳಗೆ ಕುಳಿತಿದ್ದು, ಆಕೆಯ ಹಣೆಯ ಮೇಲೆ ರಕ್ತ ಸೋರುತ್ತಿರುವ ದೃಶ್ಯವೂ ಕಂಡು ಬಂದಿದೆ.

Accident at Tamil Nadu kills many, 2 govt busses collide near Pillaiyarpatti, Sivaganga district

ಬಸ್ ಅಪಘಾತದ ದೃಶ್ಯ

ಅಪಘಾತವಾದ ಕೂಡಲೇ ಸ್ಥಳೀಯರು ಆಗಮಿಸಿ ರಕ್ಷಣಾ ಕಾರ್ಯದಲ್ಲಿ ಸಹಾಯವಾಗಿದ್ದಾರೆ. ತುರ್ತು ತಂಡಗಳೂ ಕೂಡ ಆಗಮಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸುವ ಕೆಲಸ ಮಾಡಿದ್ದಾರೆ. ಎರಡು ಬಸ್ಸುಗಳಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಈ ಪೈಕಿ 19 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ 11ಕ್ಕಿಂತ ಹೆಚ್ಚಾಗುವ ಭೀತಿ ಇದೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್​

ತೇಂಕಾಸಿ ಅಪಘಾತ ಘಟನೆ

ಕಳೆದ ವಾರವಷ್ಟೇ ತಮಿಳುನಾಡಿನ ತೇಂಕಾಸಿ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಒಂದು ಬಸ್ಸಿನ ಚಾಲಕನ ಅಜಾಗರೂಕ ಚಾಲನೆಯು ಅಪಘಾತಕ್ಕೆ ಕಾರಣವಾಗಿತ್ತು. ಈಗ ಒಂದು ವಾರದ ಅಂತರದಲ್ಲೇ ಅಂಥದ್ದೇ ಅಪಘಾತವು ತಮಿಳುನಾಡಿನಲ್ಲಿ ಮರುಕಳಿಸಿದೆ. ಶಿವಗಂಗಾ ಜಿಲ್ಲೆಯಲ್ಲಿ ಸಂಭವಿಸಿದ ಈ ಅಪಘಾತಕ್ಕೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್