AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದಾಗ.. ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ನಡುವೆ ಅಪಘಾತ

ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ ಸಾವಿಗೀಡಾದ ರೈತನ ಕುಟುಂಬಕ್ಕೆ ಸಾಂತ್ವನ ಹೇಳುಲು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ರಾಂಪುರ್​ಗೆ ಹೋಗುತ್ತಿದ್ದಾಗ ಹಾಪುರ್​ನಲ್ಲಿ ಅಪಘಾತ ಸಂಭವಿಸಿದೆ.

ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದಾಗ.. ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳ ನಡುವೆ ಅಪಘಾತ
ಪ್ರಿಯಾಂಕಾ ಗಾಂಧಿ
sandhya thejappa
| Updated By: ಸಾಧು ಶ್ರೀನಾಥ್​|

Updated on:Feb 04, 2021 | 11:51 AM

Share

ದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳ ಮಧ್ಯೆ ಪರಸ್ಪರ ಅಪಘಾತ ನಡೆದಿದ್ದು, ಅದೃಷ್ಟವಶಾತ್ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದೆ.

ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ ರೈತರೊಬ್ಬರು ಮೃತಪಟ್ಟಿದ್ದರು. ಸಾವಿಗೀಡಾದ ಆ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ಇಂದು ಉತ್ತರ ಪ್ರದೇಶದ ರಾಂಪುರ್​ಗೆ ಹೋಗುತ್ತಿದ್ದಾಗ ಹಾಪುರ್​ನಲ್ಲಿ ಅಪಘಾತ ಸಂಭವಿಸಿದೆ.

ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನವನೀತ್ ಎಂಬ ರೈತ ಜನವರಿ 26ರಂದು ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದರು. ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿಯ ಭದ್ರತಾ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಪ್ರಿಯಾಂಕಾ ಗಾಂಧಿ ಮೃತ ರೈತನ ಕುಟುಂಬಕ್ಕೆ ಇಂದು ಭೇಟಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್​ ಹಿರಿಯ ಮುಖಂಡ ಅಜಯ್ ಕುಮಾರ್ ಲಲ್ಲು ತಿಳಿಸಿದ್ದಾರೆ.

Joe Biden led USA Govt Backs India Farm Laws ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ ಅಮೆರಿಕ

Published On - 11:50 am, Thu, 4 February 21