ದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳ ಮಧ್ಯೆ ಪರಸ್ಪರ ಅಪಘಾತ ನಡೆದಿದ್ದು, ಅದೃಷ್ಟವಶಾತ್ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದೆ.
ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ ರೈತರೊಬ್ಬರು ಮೃತಪಟ್ಟಿದ್ದರು. ಸಾವಿಗೀಡಾದ ಆ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ಇಂದು ಉತ್ತರ ಪ್ರದೇಶದ ರಾಂಪುರ್ಗೆ ಹೋಗುತ್ತಿದ್ದಾಗ ಹಾಪುರ್ನಲ್ಲಿ ಅಪಘಾತ ಸಂಭವಿಸಿದೆ.
ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನವನೀತ್ ಎಂಬ ರೈತ ಜನವರಿ 26ರಂದು ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದರು. ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿಯ ಭದ್ರತಾ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಪ್ರಿಯಾಂಕಾ ಗಾಂಧಿ ಮೃತ ರೈತನ ಕುಟುಂಬಕ್ಕೆ ಇಂದು ಭೇಟಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಹಿರಿಯ ಮುಖಂಡ ಅಜಯ್ ಕುಮಾರ್ ಲಲ್ಲು ತಿಳಿಸಿದ್ದಾರೆ.
Joe Biden led USA Govt Backs India Farm Laws ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗೆ ಬೆಂಬಲ ಸೂಚಿಸಿದ ಅಮೆರಿಕ
Published On - 11:50 am, Thu, 4 February 21