ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, 8 ಮಂದಿ ಸಾವು
ಹಿಸಾರ್-ಚಂಡೀಗಢ ಹೆದ್ದಾರಿಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಗೋಗಾ ಮೇಡಿಧಾಮಕ್ಕೆ ಹೋಗುತ್ತಿದ್ದ ಭಕ್ತರು ತುಂಬಿದ್ದ ಪಿಕಪ್ ವ್ಯಾನ್‌ಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದಿದೆ.ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಒಟ್ಟು 8 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ.
ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಗೋಗಾ ಮೇಡಿಧಾಮಕ್ಕೆ ಹೋಗುತ್ತಿದ್ದ ಭಕ್ತರು ತುಂಬಿದ್ದ ಪಿಕಪ್ ವ್ಯಾನ್‌ಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದಿದೆ.ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ.
ಪೊಲೀಸರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇಂಡಿಯಾ ಟುಡೇ ವರದಿಯ ಪ್ರಕಾರ, ಸೆಪ್ಟೆಂಬರ್ 2-3 ರ ಮಧ್ಯರಾತ್ರಿ ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ರಾಜಸ್ಥಾನದ ಮರ್ಚೇಡಿ ಗ್ರಾಮದಿಂದ ಗೋಗಮೇಡಿಗೆ ಹೋಗುತ್ತಿದ್ದ ಪಿಕಪ್ ವ್ಯಾನ್‌ಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವ್ಯಾನ್ ಹಳ್ಳಕ್ಕೆ ಪಲ್ಟಿ ಹೊಡೆದಿತ್ತು.
ಮತ್ತಷ್ಟು ಓದಿ:ಗುಜರಾತ್ನಲ್ಲಿ ಭೀಕರ ಅಪಘಾತ: ಬಸ್ಗೆ ಲಾರಿ ಡಿಕ್ಕಿ, 6 ಮಂದಿ ಸಾವು, ಹಲವರಿಗೆ ಗಾಯ
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕೆಲ ಚಾಲಕರು ಗಾಯಾಳುಗಳಿಗೆ ನೆರವಾದರು. ಸ್ಥಳೀಯರಿಂದ ಮಾಹಿತಿ ಪಡೆದ ನರವಾಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ನಂತರ ಎಲ್ಲ ಜನರನ್ನು ಆಂಬ್ಯುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಂಬಾಲದಲ್ಲಿಯೂ ಅಪಘಾತ ಸಂಭವಿಸಿದೆ ವೈಷ್ಣೋ ದೇವಿಗೆ ತೆರಳುತ್ತಿದ್ದ ಭಕ್ತರ ಮಿನಿ ಬಸ್ ಹರ್ಯಾಣದ ಅಂಬಾಲಾದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು. ಈ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಕನಿಷ್ಠ 25 ಪ್ರಯಾಣಿಕರು ಗಾಯಗೊಂಡಿದ್ದರು. ಸಾಕಷ್ಟು ಪ್ರಯತ್ನದ ನಂತರ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆಯಲಾಯಿತು. ವರದಿ ಪ್ರಕಾರ ಮೃತರೆಲ್ಲರೂ ಒಂದೇ ಕುಟುಂಬದವರು.
ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕ ಪಾನಮತ್ತನಾಗಿದ್ದ ಎಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ತಿಳಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ