ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 5 ಮಂದಿ ಸಾವು, ಮೃತಪಟ್ಟವರಲ್ಲಿ ಒಬ್ಬರು ಕರ್ನಾಟಕದವರು

Yamuna Expressway Accident ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು,  ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಗೌತಮ್ ಬುದ್ಧ ನಗರ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 5 ಮಂದಿ ಸಾವು, ಮೃತಪಟ್ಟವರಲ್ಲಿ ಒಬ್ಬರು ಕರ್ನಾಟಕದವರು
ಅಪಘಾತಕ್ಕೊಳಗಾದ ವಾಹನ
Image Credit source: Twitter
Edited By:

Updated on: May 12, 2022 | 12:29 PM

ನೋಯ್ಡಾ: ಉತ್ತರ ಪ್ರದೇಶದ (Uttar Pradesh) ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ(Yamuna Expressway) ಗುರುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ನಾಲ್ವರು ಮತ್ತು ಕರ್ನಾಟಕದ ಒಬ್ಬರು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಸ್‌ಯುವಿ (SUV) ಅಪಘಾತದಲ್ಲಿ ಗಾಯಗೊಂಡ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು,  ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಗೌತಮ್ ಬುದ್ಧ ನಗರ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಏಳು ಜನರು ಮಹೀಂದ್ರಾ ಬೊಲೆರೊದಲ್ಲಿ ಇದ್ದರು. ಅವರು ಆಗ್ರಾದಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಜೆವಾರ್ ಟೋಲ್ ಪ್ಲಾಜಾ ಬಳಿ ಅವರ ಕಾರು ಹಿಂಬದಿಯಿಂದ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ” ಎಂದು ಗೌತಮ್ ಬುದ್ಧ ನಗರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಡಂಪರ್ ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.


“ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಜೀವಹಾನಿಯ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ. ಅಗಲಿದ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

 

Published On - 12:07 pm, Thu, 12 May 22