Accident: ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
ಹರಿಯಾಣದ ನಿವಾಸಿಗಳಾದ ಐವರು ಹರಿದ್ವಾರದಿಂದ ರೋಹ್ಟಕ್‌ಗೆ ಪ್ರಯಾಣಿಸುತ್ತಿದ್ದರು. ಆ ಐವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ನವದೆಹಲಿ: ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್‌ಗೆ ಎಸ್‌ಯುವಿ (SUV) ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ (Accident) ಇನ್ನೊಬ್ಬರು ಗಾಯಗೊಂಡಿದ್ದಾರೆ. ಕುಶಾಲಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ಎಸ್‌ಯುವಿ ಕಾರಿನಲ್ಲಿ ಐವರಿದ್ದರು. ಆ ಐವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೊಲೀಸರ ಪ್ರಕಾರ, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹರಿಯಾಣದ ನಿವಾಸಿಗಳಾದ ಐವರು ಹರಿದ್ವಾರದಿಂದ ರೋಹ್ಟಕ್‌ಗೆ ಪ್ರಯಾಣಿಸುತ್ತಿದ್ದರು ಎಂದು ಎಸ್ಪಿ (ಗ್ರಾಮೀಣ) ಇರಾಜ್ ರಾಜಾ ತಿಳಿಸಿದ್ದಾರೆ.
ಇದನ್ನೂ ಓದಿ: Crime News: ಸಿರವಾರ- ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಸಾವು, ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ
ಮೃತರನ್ನು ಸುಮಿತ್ (34), ಯಾಗಿತ್ (7), ತೇಜ್‌ಪಾಲ್ (48) ಮತ್ತು ಅವರ ಪತ್ನಿ ಬಬ್ಲಿ (40) ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಜಿಯಾಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮುನಿರಾಜ್ ಜಿ ಮತ್ತು ಎಸ್‌ಪಿ (ಸಂಚಾರ) ರಮಾನಂದ್ ಕುಶ್ವಾಹ ಅವರು ಅಪಘಾತದ ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.