Maharashtra Accident: ಮುಂಬೈ-ಗೋವಾ ಹೆದ್ದಾರಿಯಲ್ಲಿ ಅಪಘಾತ: ಟ್ರಕ್-ಕಾರ್ ಮುಖಾಮುಖಿಯಲ್ಲಿ 9 ಮಂದಿ ದುರ್ಮರಣ
ಮುಂಬೈ ಅಪಘಾತ: ನಸುಕಿನ 5 ಗಂಟೆ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 4 ವರ್ಷದ ಮಗುವಿನ ಜೀವ ಪವಾಡಸದೃಢ ರೀತಿಯಲ್ಲಿ ಉಳಿದುಕೊಂಡಿದೆ.
ಮುಂಬೈ: ಗೋವಾ-ಮುಂಬೈ ಹೆದ್ದಾರಿಯಲ್ಲಿ (Mumbai-Goa Highway) ಟ್ರಕ್-ಕಾರು (Truck-Car Accidet) ಮುಖಾಮುಖಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿತು. ನಸುಕಿನ 5 ಗಂಟೆ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 4 ವರ್ಷದ ಮಗುವಿನ ಜೀವ ಪವಾಡಸದೃಢ ರೀತಿಯಲ್ಲಿ ಉಳಿದುಕೊಂಡಿದೆ. ಆಕೆಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈ-ಗೋವಾ ಹೆದ್ದಾರಿಯ ಮೂಲಕ ಇವರು ರತ್ನಗಿರಿಗೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ರಾಯಗಡ ಜಿಲ್ಲೆ ಮಂಗಾವ್ ತಾಲ್ಲೂಕಿನ ರೆಪೋಳಿ ಗ್ರಾಮದ ಸಮೀಪ ಅಪಘಾತ ಸಂಭವಿಸಿತು. ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಮತ್ತು ಐವರು ಪುರುಷರು ಸ್ಥಳದಲ್ಲಿಯೇ ಮೃತಪಟ್ಟರು. ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಕಣಿವೆಗೆ ಉರುಳಿ 20ಕ್ಕೂ ಹೆಚ್ಚು ಮಂದಿಗೆ ಗಾಯ
ಬಸ್ ಕಂದಕಕ್ಕೆ ಉರುಳಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ವರದಿಗಳ ಪ್ರಕಾರ, ಅಪಘಾತಕ್ಕೀಡಾದ ಬಸ್ (Bus Accident) ಪುಣೆಯಿಂದ ಲಾತೂರ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕಣಿವೆಗೆ ಉರುಳಿದೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಸೋಮವಾರ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಧರಮ್ತುಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-37ರಲ್ಲಿ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಕರ ಸಂಕ್ರಾಂತಿಯಂದು ಲೋಹಿತ್ ನದಿಯಲ್ಲಿ ಪುಣ್ಯಸ್ನಾನ ಮಾಡಿ ಯಾತ್ರಾರ್ಥಿಗಳು ಹಿಂತಿರುಗುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ದಿನಕ್ಕೆ 1 ಕೋಟಿ ಮೊಟ್ಟೆಗಳ ಕೊರತೆ ಎದುರಿಸುತ್ತಿದೆ ಮಹಾರಾಷ್ಟ್ರ!
ಮತ್ತಷ್ಟು ರಾಷ್ಟ್ರೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:58 am, Thu, 19 January 23