AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ

ನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ
ಬ್ರಹ್ಮೋಸ್ ಕ್ಷಿಪಣಿ
TV9 Web
| Edited By: |

Updated on:Aug 23, 2022 | 7:32 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನು (BrahMos missile) ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾ ಮಾಡಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. 2022 ಮಾರ್ಚ್ 09ರಂದು ಬ್ರಹ್ಮೋಸ್ ಕ್ಷಿಪಣಿಯನ್ನು ಆಕಸ್ಮಿಕವಾಗಿ ಉಡಾಯಿಸಲಾಗಿದೆ. ಘಟನೆಯ ಜವಾಬ್ದಾರಿಯನ್ನು ನಿಗದಿಪಡಿಸುವುದು ಸೇರಿದಂತೆ ಪ್ರಕರಣದ ಸತ್ಯಗಳನ್ನು ಹೊರತರಲು ಸ್ಥಾಪಿಸಲಾದ ನ್ಯಾಯಾಲಯವು (Court of Inquiry-Col), ಮೂವರು ಅಧಿಕಾರಿಗಳು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOP) ನಿಂದ ಮಾಡಿದ ವಿಚಲನವು ಕ್ಷಿಪಣಿಯ ಆಕಸ್ಮಿಕ ಉಡಾವಣೆಗೆ ಕಾರಣವಾಯಿತು ಎಂದು ಕಂಡುಹಿಡಿದಿರುವುದಾಗಿ ವಾಯುಪಡೆ ಹೇಳಿಕೆ ತಿಳಿಸಿದೆ. ಈ ಘಟನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಮಾರ್ಚ್‌ನಲ್ಲಿ ಪಾಕಿಸ್ತಾನದ ಪ್ರದೇಶಕ್ಕೆ ಭಾರತದ ಕಡೆಯಿಂದ ಆಕಸ್ಮಿಕವಾಗಿ ಕ್ಷಿಪಣಿಯನ್ನು ಹಾರಿತ್ತು. ಇದನ್ನು ರಕ್ಷಣಾ ಸಚಿವಾಲಯವು “ತೀವ್ರ ವಿಷಾದನೀಯ” ಎಂದು ಹೇಳಿದ್ದು “ತಾಂತ್ರಿಕ ದೋಷ” ಕಾರಣ ಎಂದಿತ್ತು.

ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ತನ್ನ ವಾಯುಪ್ರದೇಶದೊಳಗೆ 100 ಕಿ.ಮೀ.ಗೂ ಹೆಚ್ಚು ದೂರ, 40,000 ಅಡಿ ಎತ್ತರದಲ್ಲಿ ಹಾರಿದ್ದು, ಬೀಳುವ ಮುನ್ನ ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ.

ತನ್ನ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆ ಎಂದು ಕರೆದಿರುವುದನ್ನು ಪ್ರತಿಭಟಿಸಲು ಇಸ್ಲಾಮಾಬಾದ್‌ನಲ್ಲಿ ಭಾರತದ ಅಧಿಕಾರಿಗಳನ್ನು ಕರೆಸಲಾಗಿದೆ ಎಂದು ದೇಶದ ವಿದೇಶಾಂಗ ಕಚೇರಿ ತಿಳಿಸಿತ್ತು . ಈ ಘಟನೆಯ ಬಗ್ಗೆ ತನಿಖೆಗೆ ಪಾಕಿಸ್ತಾನವು ಕರೆ ನೀಡಿದ್ದು , ಇದು ಪ್ರಯಾಣಿಕರ ವಿಮಾನ ಮತ್ತು ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡುಬಲ್ಲುದಾಗಿತ್ತು ಎಂದು ಹೇಳಿಕೆ ನೀಡಿತ್ತು.

ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಿ ಮತ್ತು ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಮರುಕಳಿಸುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನವು ಭಾರತಕ್ಕೆ ಎಚ್ಚರಿಕೆ ನೀಡಿತ್ತು.

Published On - 7:31 pm, Tue, 23 August 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್