AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ

ಮನೆಯಲ್ಲಿ ಮಲಗಿರುವಾಗ ಬಿಜೆಪಿ ನಾಯಕನ ಪುತ್ರಿ ಮೇಲೆ ಅಪರಿಚತನೊಬ್ಬ ಕಿಡಕಿಯಿಂದ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಕ್ರಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಉಪಾಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಅವರ ಪುತ್ರಿ ಪಲ್ಲವಿ ರಾಥೋಡ್ ಮೇಲೆ ದಾಳಿ ನಡೆದಿದ್ದು, ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಕ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ರಿ ಬಜಾರ್‌ನಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಬಿಹಾರದಲ್ಲಿ ಬಿಜೆಪಿ ನಾಯಕನ ಪುತ್ರಿ ಮೇಲೆ ಆ್ಯಸಿಡ್ ದಾಳಿ
ಆ್ಯಸಿಡ್ ದಾಳಿ Image Credit source: The Leaflet
ನಯನಾ ರಾಜೀವ್
|

Updated on: Apr 07, 2025 | 7:50 AM

Share

ಪಾಟ್ನಾ, ಏಪ್ರಿಲ್ 07: ಬಿಹಾರದ ಬಿಜೆಪಿ ನಾಯಕರೊಬ್ಬರ ಪುತ್ರಿ ಮೇಲೆ ದುಷ್ಕರ್ಮಿ ಆ್ಯಸಿಡ್ ದಾಳಿ(Acid Attack) ನಡೆಸಿರುವ ಘಟನೆ ವರದಿಯಾಗಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 24 ವರ್ಷದ ಯುವತಿ ತನ್ನ ಮನೆಯಲ್ಲಿ ಮಲಗಿರುವಾಗ ಆಕೆಯ ಮೇಲೆ ಆ್ಯಸಿಡ್ ಎರೆಚಲಾಗಿದೆ. ದಾಳಿಯಲ್ಲಿ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಬಕ್ರಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಉಪಾಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಅವರ ಪುತ್ರಿ ಪಲ್ಲವಿ ರಾಥೋಡ್ ಮೇಲೆ ದಾಳಿ ನಡೆದಿದ್ದು, ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಕ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ರಿ ಬಜಾರ್‌ನಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ರಾಥೋಡ್ ಮಲಗಿದ್ದಾಗ ಅಪರಿಚಿತ ವ್ಯಕ್ತಿಗಳು ಮನೆಯ ಗೋಡೆಯನ್ನು ಹಾರಿ ಕಿಟಕಿಯ ಮೂಲಕ ಆಸಿಡ್ ಎಸೆದಿದ್ದಾರೆ. ದಾಳಿಯಲ್ಲಿ ಆಕೆಯ ಮುಖ ಮತ್ತು ದೇಹವು ತೀವ್ರ ಸುಟ್ಟ ಗಾಯಗಳಾಗಿವೆ.

ಆಕೆಯ ಕಿರುಚಾಟ ಕೇಳಿ ಮನೆಯವರು ರೂಮಿಗೆ ಓಡಿ ಬಂದಿದ್ದರು, ಮೊದಲಿಗೆ ಅದು ಹಲ್ಲಿ ಅಥವಾ ಇಲಿ ಇರಬಹುದು ಅದನ್ನು ನೋಡಿ ಆಕೆ ಕಿರುಚಿಕೊಂಡಿರಬಹುದು ಎಂದು ನಾವು ಭಾವಿಸಿದ್ದೆವು, ಆದರೆ ನಂತರ ಆ್ಯಸಿಡ್ ದಾಳಿ ನಡೆದಿದೆ ಎಂಬುದು ಅರಿವಾಯಿತು, ಆಕೆಯನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೋಷಕರು ಹೇಳಿದ್ದಾರೆ.

ಇದನ್ನೂ ಓದಿ
Image
19 ವರ್ಷದ ಯುವತಿ ಮೇಲೆ ಅತ್ಯಾಚಾರ; ದಿಗಂಬರ ಜೈನಮುನಿಗೆ 10 ವರ್ಷ ಜೈಲು
Image
ಬಾಲಕಿ ಮೇಲೆ ಅತ್ಯಾಚಾರವೆಸಗಿ ‘ಓಂ’ ಟ್ಯಾಟೂವನ್ನು ಆ್ಯಸಿಡ್ ಹಾಕಿ ಸುಟ್ರು
Image
ಮುಂಬೈ: ತಾಯಿ ಭೇಟಿಯಾಗದಂತೆ ತಡೆದಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿದ ವ್ಯಕ್ತಿ
Image
ನೀರೆಂದು ಮದ್ಯದಲ್ಲಿ ಆ್ಯಸಿಡ್ ಹಾಕಿಕೊಂಡು ಕುಡಿದು ವ್ಯಕ್ತಿ ಸಾವು

ಮತ್ತಷ್ಟು ಓದಿ: ಆ್ಯಸಿಡ್ ದಾಳಿಗೂ ಮುನ್ನಾ ಹೊಸ ಸಿಮ್ ಖರೀದಿಸಿದ್ದ ನಾಗೇಶ್; ಹಳೆ ಮೊಬೈಲ್​ನ ಹೊಸಕೋಟೆ ಬಳಿ ಎಸೆದಿರುವ ಆರೋಪಿ

ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ರಾಥೋಡ್ ಎರಡು ವರ್ಷಗಳ ಹಿಂದೆ ಬೇಗುಸರಾಯ್‌ನ ಕಾಲೇಜಿನಿಂದ ಪದವಿ ಮುಗಿಸಿದ್ದರು ಮತ್ತು ಮನೆಯಲ್ಲಿದ್ದುಕೊಂಡೇ ಸರ್ಕಾರಿ ಸೇವಾ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಆಕೆಯ ತಂದೆ ಬಿಹಾರ ಪೊಲೀಸರಿಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ.

ಘಟನೆಯ ಬಗ್ಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರಾಜ್ಯ ಸರ್ಕಾರವನ್ನು ಟೀಕಿಸಿದರು, ಕಾನೂನು ಮತ್ತು ಸುವ್ಯವಸ್ಥೆಯ ಕೊರತೆಯಿಂದಾಗಿ ಬಿಹಾರದಲ್ಲಿ ಜನರು ಅಸುರಕ್ಷಿತರಾಗಿದ್ದಾರೆ ಎಂದು ಹೇಳಿದರು. ಬಿಹಾರದ ಕಾನೂನು ಸುವ್ಯವಸ್ಥೆ ವಿಫಲವಾಗಿರುವುದು ಮತ್ತು ನಿರ್ಲಕ್ಷ್ಯ ಆಡಳಿತದಿಂದಾಗಿ, ಜನರು ಇನ್ನು ಮುಂದೆ ತಮ್ಮ ಮನೆಗಳಲ್ಲಿಯೂ ಸುರಕ್ಷಿತವಾಗಿಲ್ಲ. ಸರ್ಕಾರ ತನ್ನದೇ ಆದ ಜಗತ್ತಿನಲ್ಲಿ ಕಳೆದುಹೋಗಿದೆ, ಆದರೆ ಸಾರ್ವಜನಿಕರು ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿ ನಾಯಕನ ಮಗಳನ್ನು ಕೂಡ ಗುರಿಯಾಗಿಸಲಾಗಿದೆ, ಆದರೂ ಅಧಿಕಾರದಲ್ಲಿರುವವರು ಮೌನವಾಗಿದ್ದಾರೆ. ಈ ಘಟನೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಆಕೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ