AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Act East: ಭಾರತದ ಬೆಳವಣಿಗೆಯಲ್ಲಿ ಕೈ ಜೋಡಿಸಲು ಈಶಾನ್ಯ ರಾಜ್ಯಗಳಲ್ಲೂ ಸಾಮರ್ಥ್ಯವಿದೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಮತ

ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸ್ವತಃ ಸಸಿಗಳನ್ನು ನೆಟ್ಟು ನೀರೆದರು.

Act East: ಭಾರತದ ಬೆಳವಣಿಗೆಯಲ್ಲಿ ಕೈ ಜೋಡಿಸಲು ಈಶಾನ್ಯ ರಾಜ್ಯಗಳಲ್ಲೂ ಸಾಮರ್ಥ್ಯವಿದೆ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಮತ
Act East: Union Minister Pralhad Joshi feels North Eastern states have potential to contribute to India development
TV9 Web
| Updated By: ಸಾಧು ಶ್ರೀನಾಥ್​|

Updated on: Oct 31, 2022 | 7:09 PM

Share

ದೇಶದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು (North Eastern states) ತಮ್ಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi ) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶ ಉದ್ದೇಶಿಸಿ ಸಚಿವರು ಮಾತನಾಡಿದರು. ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ActEast ನೀತಿಯ ಅಡಿಯಲ್ಲಿ ಈಶಾನ್ಯ ರಾಜ್ಯಗಳು ಗಮನಾರ್ಹ ಕ್ರಮಗಳನ್ನು ತೆಗೆದುಕೊಂಡಿವೆ. ಎನ್‌ಇಆರ್‌ನಲ್ಲಿ ಖನಿಜ ಪರಿಶೋಧನೆಗೆ ಒತ್ತು ನೀಡಲಾಗಿದ್ದು, ಇದು ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶಕ್ಕೆ ಪ್ರಲ್ಹಾದ್ ಜೋಶಿ ಅವರನ್ನ ನಾಗಾಲ್ಯಾಂಡ್ ಮತ್ತು ಅಸ್ಸಾಂ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ಇನ್ನು ಇದೇ ವೇಳೆ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿ ಜಿಎಸ್‌ಐ ಅಧಿಕಾರಿಗಳಿಗೆ ಪ್ರತಿಜ್ಞೆ ಬೋಧಿಸಲಾಯಿತು.‌ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.

ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿರುವ ಜಿಎಸ್‌ಐ ಕಚೇರಿಗೆ ಭೇಟಿ ನೀಡಿದ ಅವರು, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಕುರಿತಂತೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು. ಅಧಿಕಾರಿಗಳು ತೆಗೆದುಕೊಳ್ಳುತ್ತಿರುವ ಉಪಕ್ರಮಗಳನ್ನು ಖುದ್ದಾಗಿ ಕೇಂದ್ರ ಸಚಿವರೇ ಪರಿಶೀಲಿಸಿದರು.

ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸ್ವತಃ ಸಸಿಗಳನ್ನು ನೆಟ್ಟು ನೀರೆದರು. ಒಟ್ಟಾರೆ ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶದ ಮೂಲಕ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ ದೃಷ್ಟಿಯಿಂದ ಮಹತ್ತರ ಹೆಜ್ಜೆಗೆ ಪ್ರಲ್ಹಾದ ಜೋಶಿಯವರು ಮುಂದಡಿ ಇಟ್ಟಿದ್ದಾರೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?