ದೇಶದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು (North Eastern states) ತಮ್ಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi ) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶ ಉದ್ದೇಶಿಸಿ ಸಚಿವರು ಮಾತನಾಡಿದರು. ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ActEast ನೀತಿಯ ಅಡಿಯಲ್ಲಿ ಈಶಾನ್ಯ ರಾಜ್ಯಗಳು ಗಮನಾರ್ಹ ಕ್ರಮಗಳನ್ನು ತೆಗೆದುಕೊಂಡಿವೆ. ಎನ್‌ಇಆರ್‌ನಲ್ಲಿ ಖನಿಜ ಪರಿಶೋಧನೆಗೆ ಒತ್ತು ನೀಡಲಾಗಿದ್ದು, ಇದು ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶಕ್ಕೆ ಪ್ರಲ್ಹಾದ್ ಜೋಶಿ ಅವರನ್ನ ನಾಗಾಲ್ಯಾಂಡ್ ಮತ್ತು ಅಸ್ಸಾಂ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ಇನ್ನು ಇದೇ ವೇಳೆ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿ ಜಿಎಸ್‌ಐ ಅಧಿಕಾರಿಗಳಿಗೆ ಪ್ರತಿಜ್ಞೆ ಬೋಧಿಸಲಾಯಿತು. ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.
ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿರುವ ಜಿಎಸ್‌ಐ ಕಚೇರಿಗೆ ಭೇಟಿ ನೀಡಿದ ಅವರು, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಕುರಿತಂತೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು. ಅಧಿಕಾರಿಗಳು ತೆಗೆದುಕೊಳ್ಳುತ್ತಿರುವ ಉಪಕ್ರಮಗಳನ್ನು ಖುದ್ದಾಗಿ ಕೇಂದ್ರ ಸಚಿವರೇ ಪರಿಶೀಲಿಸಿದರು.
ವಿಶೇಷ ಅಭಿಯಾನ 2.0 ಅಡಿಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸ್ವತಃ ಸಸಿಗಳನ್ನು ನೆಟ್ಟು ನೀರೆದರು. ಒಟ್ಟಾರೆ ಈಶಾನ್ಯ ಭಾಗದ ಮೊಟ್ಟಮೊದಲ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಮಾವೇಶದ ಮೂಲಕ ಈಶಾನ್ಯ ಭಾಗದ ಆರ್ಥಿಕಾಭಿವೃದ್ಧಿ ದೃಷ್ಟಿಯಿಂದ ಮಹತ್ತರ ಹೆಜ್ಜೆಗೆ ಪ್ರಲ್ಹಾದ ಜೋಶಿಯವರು ಮುಂದಡಿ ಇಟ್ಟಿದ್ದಾರೆ.
Addressed the 1st-ever Geology & Mining Conclave in Dimapur, Nagaland. Spoke about noteworthy steps taken by the Northeast States under PM @NarendraModi Ji’s #ActEast Policy. Emphasised on mineral exploration in NER which will further the economic development in the region. pic.twitter.com/fmvUUQbbA7
— Pralhad Joshi (@JoshiPralhad) October 31, 2022