ಕೇರಳದ 9 ವಿಶ್ವವಿದ್ಯಾನಿಲಯಗಳ ಕುಲಪತಿಗಳು ತಮ್ಮ ರಾಜೀನಾಮೆಯನ್ನು ಸಲ್ಲಿಸುವಂತೆ ಸೂಚಿಸಿರುವ ರಾಜ್ಯಪಾಲರ ಆದೇಶದ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (CM Pinarayi Vijayan) ಕಿಡಿ ಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಆರ್‌ಎಸ್‌ಎಸ್‌ನ (RSS) ಸಾಧನವಾಗಿ ವರ್ತಿಸುತ್ತಿದ್ದಾರೆ. ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ರಾಜ್ಯಪಾಲರ ಹುದ್ದೆ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವುದೇ ವಿನಃ ಸರ್ಕಾರದ ವಿರುದ್ಧ ನಡೆಯುವುದಲ್ಲ. ರಾಜ್ಯಪಾಲರ ವರ್ತನೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದು ಕುಲಪತಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ. ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡಬೇಕೆಂದು ರಾಜ್ಯಪಾಲರು ನಿರ್ದೇಶನ ನೀಡಿದ ಬೆನ್ನಲ್ಲೇ ಕೇರಳದ ಮುಖ್ಯಮಂತ್ರಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: Cyclone: ಬಂಗಾಳಕೊಲ್ಲಿಯಲ್ಲಿ ಈ ವಾರ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ
ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲರ ಆದೇಶದ ನಂತರ ಆ 9 ವಿವಿಗಳ ಕುಲಪತಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಕುಲಪತಿಗಳ ನೇಮಕ ಮಾಡುವಾಗ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ ಎಪಿಜೆ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶದ ರಾಜ್ಯಪಾಲರ ಈ ಆದೇಶ ಹೊರಬಿದ್ದಿದೆ. ಇತ್ತೀಚೆಗಷ್ಟೆ ಯುಜಿಸಿ ನಿಯಮಗಳನ್ನು ಪಾಲಿಸದೆ ನೇಮಕಗೊಳಿಸಿರುವ ಹಿನ್ನೆಲೆಯಲ್ಲಿ ತಿರುವನಂತಪುರದ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಕೇರಳದ ರಾಜ್ಯಪಾಲರು ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.
Kerala | Governor (Arif M Khan) is misusing Chancellor post to exercise more powers than he holds. It’s undemocratic & an encroachment on VCs’ powers. Governor post is not to move against govt,but to uphold constitution’s dignity. He’s acting as a tool of RSS: CM Pinarayi Vijayan https://t.co/8jnItwf6Rc pic.twitter.com/P4tD6AekEQ
— ANI (@ANI) October 24, 2022
ಆ 9 ವಿಶ್ವವಿದ್ಯಾನಿಲಯಗಳೆಂದರೆ ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ ಎಝುತಾಚನ್ ಮಲಯಾಳಂ ವಿಶ್ವವಿದ್ಯಾಲಯ.
ಇದನ್ನೂ ಓದಿ: ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಇಂದು ರಾಜೀನಾಮೆ ನೀಡಲು ರಾಜ್ಯಪಾಲರ ಆದೇಶ
ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ (ಕೆಟಿಯು) ಉಪಕುಲಪತಿಯಾಗಿ ಡಾ.ರಾಜಶ್ರೀ ಎಂಎಸ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ಈ ಹಿಂದೆ ರದ್ದುಗೊಳಿಸಿತ್ತು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಪ್ರಕಾರ, ಶೋಧನಾ ಸಮಿತಿಯು ವಿಸಿ ಹುದ್ದೆಗೆ ಮೂವರಿಗೆ ಕಡಿಮೆಯಿಲ್ಲದ ಅರ್ಹ ವ್ಯಕ್ತಿಗಳ ಸಮಿತಿಯನ್ನು ಶಿಫಾರಸು ಮಾಡಬೇಕಾಗಿತ್ತು .ಆದರೆ ರಾಜಶ್ರೀ ಅವರ ಪ್ರಕರಣದಲ್ಲಿ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ.
Published On - 1:21 pm, Mon, 24 October 22