AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಸರಿ ಬಟ್ಟೆ ತೊಟ್ಟ ವಿದ್ಯಾರ್ಥಿಗಳ ವಿರುದ್ಧ ಕ್ರಮ, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

ಕೇಸರಿ ಉಡುಗೆ ತೊಟ್ಟ ಶಾಲೆಗೆ ಬಂದ ವಿದ್ಯಾರ್ಥಿಗಳ ವಿರುದ್ಧ ಕ್ರಮ ತೆಗೆದುಕೊಂಡ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ತೆರೇಸಾ ಶಾಲೆ ವಿರುದ್ಧ ಹಿಂದೂ ಸಂಘಟನೆಗಳು ಅಕ್ರೋಶಗೊಂಡು ಶಾಲೆಯೊಳಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗುತ್ತಿದೆ.

ಕೇಸರಿ ಬಟ್ಟೆ ತೊಟ್ಟ ವಿದ್ಯಾರ್ಥಿಗಳ ವಿರುದ್ಧ ಕ್ರಮ, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ
ಅಕ್ಷಯ್​ ಪಲ್ಲಮಜಲು​​
|

Updated on: Apr 18, 2024 | 12:23 PM

Share

ಮಂಚೇರಿಯಲ್, ಏ.18: ತೆಲಂಗಾಣದ (telangana) ಮಂಚೇರಿಯಲ್ ಜಿಲ್ಲೆಯ ತೆರೇಸಾ ಶಾಲೆಯಲ್ಲಿ ವಿದ್ಯಾರ್ಥಿಗಳು ‘ಹನುಮಾನ್ ದೀಕ್ಷೆ ಉಡುಗೆ’ ಧರಿಸಿ ತರಗತಿಗೆ ಬಂದಿರುವುದನ್ನು ಶಿಕ್ಷಕರು ವಿರೋಧಿಸಿದ್ದಾರೆ. ಇದೀಗ ಶಿಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗಾರರು ಶಾಲಾ ಕ್ರಮದ ವಿರುದ್ಧ ಅಕ್ರೋಶಗೊಂಡ ಶಾಲಾ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಮದರ್ ತೆರೇಸಾ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹನುಮಾನ್ ದೀಕ್ಷೆ ಉಡುಗೆ ಹಾಕಿಕೊಂಡು ಬಂದಿರುವುದಕ್ಕೆ ತರಗತಿಯೊಳಗೆ ಪ್ರವೇಶವಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ ಎಂದು ತರಗತಿಯಿಂದ ಹೊರ ಕಳುಹಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಹಾಗು ಸಂಘಟನೆಗಳು ಶಾಲೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಇನ್ನು ವಿದ್ಯಾರ್ಥಿಗಳ ಪೋಷಕರ ದೂರಿನ ಮೇರೆಗೆ ಬುಧವಾರ ಶಾಲಾ ಶಿಕ್ಷಕರು ಹಾಗೂ ಪ್ರಾಂಶುಪಾಲರ ವಿರುದ್ಧ ಸೆಕ್ಷನ್ 153 (ಎ) (ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 (ಎ) (ಧಾರ್ಮಿಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವಿಲ್ಲದೆ ಶಾಲೆಗೆ ಬಂದಿರುವುದನ್ನು ಕಂಡು ಪ್ರಾಂಶುಪಾಲರ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಬರುವಂತೆ ಹೇಳಿದ್ದಾರೆ. ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಸದಸ್ಯರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಸಮವಸ್ತ್ರ ಧರಿಸದೇ ಬರದ ವಿದ್ಯಾರ್ಥಿಗಳು ಶಾಲೆ ಪ್ರವೇಶಿಸುವಂತಿಲ್ಲ ಹಾಗೂ ವಾರ್ಷಿಕ ಪರೀಕ್ಷೆಗೆ ಹಾಜರಾಗದಂತೆ ಆಡಳಿತ ಮಂಡಳಿ ಹೇಳಿತ್ತು.

ಇದನ್ನೂ ಓದಿ : ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಇದರಿಂದ ಅಕ್ರೋಶಗೊಂಡು ಶಾಲೆ ಹೊರಗೆ ಪ್ರತಿಭಟನೆ ಮಾಡುತ್ತಿದ್ದ ಹಿಂದೂ ಸಂಘಟನೆ ಸದಸ್ಯರು ಶಾಲೆಯೊಳಗೆ ನುಗ್ಗಿ ಶಾಲೆಯ ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ. ಶಾಲೆ ಅನೇಕ ವಸ್ತುಗಳು ಮುರಿದು ಹಾಕಿದ್ದಾರೆ. ಶಾಲೆಯ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಈ ಘಟನೆಯ ಬಗ್ಗೆ ದೂರು ನೀಡಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ