ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ ಸುಪ್ರೀಂ

ಸಂಸದರು, ಶಾಸಕರಿಗೆ ಬಿಸಿ ಮುಟ್ಟಿಸಿದ ಸುಪ್ರೀಂ, ಮಹತ್ವದ ಆದೇಶವನ್ನು ನೀಡಿದೆ. 1998ರ ತೀರ್ಪು ರದ್ದು ಮಾಡಿ, ಸಂಸದರು ಮತ್ತು ಶಾಸಕರು ಸೇರಿದಂತೆ ತಮ್ಮ ಮತಗಳಿಗೆ ಮತ್ತು ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭವನ್ನು ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠ ಹೇಳಿದೆ.

ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ ಸುಪ್ರೀಂ
ಸುಪ್ರೀಂ ಕೋರ್ಟ್​​
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 04, 2024 | 12:42 PM

ದೆಹಲಿ, ಮಾ.4: ಇಂದು ಸುಪ್ರೀಂ ಕೋರ್ಟ್​ ಮಹತ್ವ ತೀರ್ಪುವೊಂದನ್ನು ನೀಡಿದೆ. ಸಂಸದರು ಮತ್ತು ಶಾಸಕರು ಸೇರಿದಂತೆ ತಮ್ಮ ಮತಗಳಿಗೆ ಮತ್ತು ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭವನ್ನು ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠ ಹೇಳಿದೆ. ಪಿವಿ ನರಸಿಂಹರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ 1998ರ ತೀರ್ಪನ್ನು ತೆಗೆದು ಹಾಕಿದೆ.

ಸದನದಲ್ಲಿ ಮತ ಅಥವಾ ಭಾಷಣಕ್ಕೆ ಲಂಚ ಪಡೆದ ಆರೋಪದ ಮೇಲೆ ಸಂಸದರು/ಶಾಸಕರನ್ನು ಕಾನೂನು ಕ್ರಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ. ಶಾಸಕಾಂಗದ ಸದಸ್ಯರಿಂದ ಭ್ರಷ್ಟಾಚಾರ ನಡೆದರೆ ಅದು ಸಾರ್ವಜನಿಕರ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ. ಹಾಗೂ ಅದು ಸಾರ್ವಜನಿಕ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತದೆ ಎಂದು ಏಳು ಪೀಠಗಳು ಹೇಳಿದೆ.

ಸಂಸತ್ ಅಥವಾ ಶಾಸಕಾಂಗದ ಕಾರ್ಯಚಟುವಟಿಕೆಗೆ ಸಂಬಂಧಿಸದ ಯಾವುದೇ ಸವಲತ್ತನ್ನು ನೀಡಿದರೆ, ಅದು ಕಾನೂನಿನ ಚೌಕಟ್ಟಿನ ಒಳಗೆ ಬರದೆವಿರುವ ವಿನಾಯಿತಿಗಳನ್ನು ಅನುಭವಿಸುವ ವರ್ಗವನ್ನು ಸೃಷ್ಟಿಸಲು ಕಾರಣವಾಗುತ್ತದೆ ಎಂದು ಹೇಳಿದೆ. ಸಂಸತ್ತಿನ ಸವಲತ್ತುಗಳು ಮೂಲಭೂತವಾಗಿ ಸದನದ ಎಲ್ಲರಿಗೂ ಸಂಬಂಧಿಸಿರುವುದು ಎಂದು ಹೇಳಲಾಗಿದೆ. ರಾಜ್ಯಸಭೆಗೆ ಅಥವಾ ರಾಷ್ಟ್ರಪತಿ/ಉಪರಾಷ್ಟ್ರಪತಿ ಕಚೇರಿಗೆ ನಡೆಯುವ ಚುನಾವಣೆಗಳು ಸಂಸದೀಯ ಸವಲತ್ತುಗಳಿಗೆ ಅನ್ವಯವಾಗುವ ಸಾಂವಿಧಾನಿಕ ನಿಬಂಧನೆಗಳ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಸುಪ್ರೀಂ ಕೋರ್ಟ್​​ ಹೇಳಿದೆ.

ಇದನ್ನು ಓದಿ: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಸುಪ್ರೀಂ ಕೋರ್ಟ್​​ನ ತೀರ್ಪುನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಸುಪ್ರೀಂ ಕೋರ್ಟ್​​ನ ಈ ತೀರ್ಪಿಗೆ ಪ್ರಧಾನಿ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಇದು ಉತ್ತಮ ತೀರ್ಪು ಇದು ಶುದ್ಧ ರಾಜಕೀಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಇದರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಜನರಿಗೆ ನಂಬಿಕೆ ಇರುತ್ತದೆ ಎಂದು ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಜತೆಗೆ 1998 ರ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Mon, 4 March 24

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್