Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರದ ತನಿಖೆ ನಿಷ್ಪಕ್ಷಪಾತವಾಗಿದೆ: ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ

ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಿದೆ. ಸಾಮಾಜಿಕ ಮಾಧ್ಯಮದಿಂದ ಡಿಜಿಟಲ್ ಸಾಕ್ಷ್ಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಅಸ್ತನಾ ಹೇಳಿದರು.

Jahangirpuri violence ಜಹಾಂಗೀರ್‌ಪುರಿ ಹಿಂಸಾಚಾರದ ತನಿಖೆ ನಿಷ್ಪಕ್ಷಪಾತವಾಗಿದೆ: ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ
ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Apr 18, 2022 | 2:24 PM

ದೆಹಲಿ: ಜಹಾಂಗೀರ್‌ಪುರಿ ಹಿಂಸಾಚಾರದ (Jahangirpuri violence) ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಿದ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತನಾ (Rakesh Asthana) ತನಿಖೆ ನಿಷ್ಪಕ್ಷಪಾತವಾಗಿದೆ. ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ ತಪ್ಪಿತಸ್ಥ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಿಂಸಾಚಾರದಲ್ಲಿ ಗಾಯಗೊಂಡ ಒಂಬತ್ತು ಜನರಲ್ಲಿ ಎಂಟು ಪೊಲೀಸರು ಸೇರಿದ್ದಾರೆ. ದೆಹಲಿ ಪೊಲೀಸರು (Delhi Police) ಸಕ್ರಿಯವಾಗಿ ಮಧ್ಯಪ್ರವೇಶಿಸಿ ಸಾರ್ವಜನಿಕರಿಗೆ ಗಾಯವಾಗುವುದನ್ನು ತಪ್ಪಿಸಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ ಎಂದು ಅವರು ಹೇಳಿದರು.ಒಟ್ಟು 14 ತಂಡಗಳು ಜಹಾಂಗೀರ್‌ಪುರಿ ಹಿಂಸಾಚಾರದ ತನಿಖೆ ನಡೆಸುತ್ತಿವೆ. ತನಿಖೆ ನಿಷ್ಪಕ್ಷಪಾತವಾಗಿರುತ್ತದೆ. ನಾವು ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದುವರೆಗೆ 23 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. 23 ಆರೋಪಿಗಳಲ್ಲಿ ಎಂಟು ಮಂದಿ ಹಿಸ್ಟರಿ ಶೀಟರ್‌ಗಳು. ಸಿಸಿಟಿವಿ ದೃಶ್ಯಾವಳಿ ಮತ್ತು ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ನಾವು ಹೆಚ್ಚಿನ ಜನರನ್ನು ಗುರುತಿಸಿದ್ದೇವೆ. ಮತ್ತು ಶೀಘ್ರದಲ್ಲೇ ಅವರನ್ನು ಹಿಡಿಯುತ್ತೇವೆ ಎಂದು ಅಸ್ತನಾ ಹೇಳಿದರು. ಆರೋಪಿಗಳಿಂದ ಇದುವರೆಗೆ ಮೂರು ಬಂದೂಕುಗಳು ಮತ್ತು ಎಂಟು ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಳದಿಂದ ಸಾಕ್ಷ್ಯ ಸಂಗ್ರಹಿಸಿದೆ. ಸಾಮಾಜಿಕ ಮಾಧ್ಯಮದಿಂದ ಡಿಜಿಟಲ್ ಸಾಕ್ಷ್ಯವನ್ನು ಪರಿಶೀಲಿಸಲಾಗುತ್ತಿದೆ ಎಂದು ಅಸ್ತನಾ ಹೇಳಿದರು.

ತಪ್ಪು ಮಾಹಿತಿಗಳನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು. “ಪರಿಶೀಲಿಸಲು ಯಾವುದೇ ಮಾಹಿತಿ ಅಗತ್ಯವಿದ್ದರೆ ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ” ಎಂದು ಅವರು ಹೇಳಿದರು.

ನಗರದಲ್ಲಿ ಶಾಂತಿ ಕಾಪಾಡಲು ನಗರದಲ್ಲಿನ ‘ಅಮನ್’ ಸಮಿತಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ದೆಹಲಿಯ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಸಿಎಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಏತನ್ಮಧ್ಯೆ, ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಮತ್ತು ಜಿಲ್ಲಾ ಪೊಲೀಸರು ಜಂಟಿಯಾಗಿ ಘಟನೆಯ ತನಿಖೆ ನಡೆಸುತ್ತಿದ್ದಾರೆ ಎಂದು ಅಪರಾಧ ವಿಭಾಗದ ವಿಶೇಷ ಪೊಲೀಸ್ ಕಮಿಷನರ್ ರವೀಂದ್ರ ಯಾದವ್ ಹೇಳಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Jahangirpuri violence: ಜಹಾಂಗೀರ್‌ಪುರಿ ಹಿಂಸಾಚಾರ ಆರೋಪಿಗಳಾದ ಅನ್ಸಾರ್ ಮತ್ತು ಅಸ್ಲಾಂ 1 ದಿನದ ಪೊಲೀಸ್ ಕಸ್ಟಡಿಗೆ

Published On - 1:38 pm, Mon, 18 April 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್