AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

170 ದಿನಗಳ ನಂತರ ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

ಭಾರತದ ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಶೇಕಡಾ 2.74 ಸಕ್ರಿಯ ಪ್ರಕರಣಗಳಿವೆ. ಒಟ್ಟು 97,61,538 ಮಂದಿ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ನಡುವಿನ ಅಂತರ ಏರಿಕೆಯಾಗುತ್ತಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 94,82,848 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

170 ದಿನಗಳ ನಂತರ ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 27, 2020 | 3:24 PM

Share

ನವದೆಹಲಿ: ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.

ಭಾನುವಾರ ವರದಿಯಾಗಿರುವ ಕೋವಿಡ್ ಪ್ರಕರಣಗಳ ಸಂಖ್ಯೆ 18,732. ಸಕ್ರಿಯ ಪ್ರಕರಣಗಳ ಸಂಖ್ಯೆ 6 ತಿಂಗಳುಗಳ ನಂತರ ಇಳಿಕೆಯಾಗಿ 2.78 ಲಕ್ಷವಾಗಿದೆ. 170 ದಿನಗಳಲ್ಲಿ ಅತಿ ಕಡಿಮೆ ಪ್ರಕರಣ ದಾಖಲಾಗಿರುವ ದಿನ ಇದು ಎಂದು ಸಚಿವಾಲಯ ಟ್ವೀಟಿಸಿದೆ.

ಭಾರತದ ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಶೇ 2.74 ಸಕ್ರಿಯ ಪ್ರಕರಣಗಳಿವೆ. ಒಟ್ಟು 97,61,538 ಮಂದಿ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ನಡುವಿನ ಅಂತರ ಏರಿಕೆಯಾಗುತ್ತಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 94,82,848 ಆಗಿದೆ ಎಂದು ಸಚಿವಾಲಯ ಹೇಳಿದೆ.

ಭಾನುವಾರ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,01,87,850 ಆಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,78,690 ಆಗಿದ್ದು ಚೇತರಿಸಿಕೊಂಡವರ ಸಂಖ್ಯೆ 97,61,538 ಆಗಿದೆ. ಕಳೆದ 24 ಗಂಟೆಗಳಲ್ಲಿ 21,430 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಮಹಾರಾಷ್ಟ್ರದಲ್ಲಿ 59,223 ಮತ್ತು ಕೇರಳದಲ್ಲಿ  63,927 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಏತನ್ಮಧ್ಯೆ ಡಿಸೆಂಬರ್ 26 ರವರೆಗೆ 16,81,02,657 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 9,43,368 ಮಾದರಿಗಳನ್ನು ನಿನ್ನೆ (ಡಿ.26) ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಕೋವಿಡ್-19ಕ್ಕೆ ಕಡಿವಾಣ: ಭಾರತದ ಪರಿಶ್ರಮಕ್ಕೆ ವಿಶ್ವಸಂಸ್ಥೆ ವಿಜ್ಞಾನಿ ಶ್ಲಾಘನೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ