ನವದೆಹಲಿ: ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ಭಾನುವಾರ ವರದಿಯಾಗಿರುವ ಕೋವಿಡ್ ಪ್ರಕರಣಗಳ ಸಂಖ್ಯೆ 18,732. ಸಕ್ರಿಯ ಪ್ರಕರಣಗಳ ಸಂಖ್ಯೆ 6 ತಿಂಗಳುಗಳ ನಂತರ ಇಳಿಕೆಯಾಗಿ 2.78 ಲಕ್ಷವಾಗಿದೆ. 170 ದಿನಗಳಲ್ಲಿ ಅತಿ ಕಡಿಮೆ ಪ್ರಕರಣ ದಾಖಲಾಗಿರುವ ದಿನ ಇದು ಎಂದು ಸಚಿವಾಲಯ ಟ್ವೀಟಿಸಿದೆ.
ಭಾರತದ ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ ಶೇ 2.74 ಸಕ್ರಿಯ ಪ್ರಕರಣಗಳಿವೆ. ಒಟ್ಟು 97,61,538 ಮಂದಿ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ನಡುವಿನ ಅಂತರ ಏರಿಕೆಯಾಗುತ್ತಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 94,82,848 ಆಗಿದೆ ಎಂದು ಸಚಿವಾಲಯ ಹೇಳಿದೆ.
ಭಾನುವಾರ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,01,87,850 ಆಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,78,690 ಆಗಿದ್ದು ಚೇತರಿಸಿಕೊಂಡವರ ಸಂಖ್ಯೆ 97,61,538 ಆಗಿದೆ. ಕಳೆದ 24 ಗಂಟೆಗಳಲ್ಲಿ 21,430 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Landmark peak in India's Covid19 trajectory- Daily new cases drop to 18,732 after 6 months.https://t.co/btuueGmJPu pic.twitter.com/vBmDDEj673
— Ministry of Health (@MoHFW_INDIA) December 27, 2020
ಸಕ್ರಿಯ ಪ್ರಕರಣಗಳ ಸಂಖ್ಯೆ ಮಹಾರಾಷ್ಟ್ರದಲ್ಲಿ 59,223 ಮತ್ತು ಕೇರಳದಲ್ಲಿ 63,927 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಏತನ್ಮಧ್ಯೆ ಡಿಸೆಂಬರ್ 26 ರವರೆಗೆ 16,81,02,657 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 9,43,368 ಮಾದರಿಗಳನ್ನು ನಿನ್ನೆ (ಡಿ.26) ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.
ಕೋವಿಡ್-19ಕ್ಕೆ ಕಡಿವಾಣ: ಭಾರತದ ಪರಿಶ್ರಮಕ್ಕೆ ವಿಶ್ವಸಂಸ್ಥೆ ವಿಜ್ಞಾನಿ ಶ್ಲಾಘನೆ