ಖ್ಯಾತ ನಟ ಅನಂತನಾಗ್, ವಯಲಿನ್ ವಾದಕ ಎಲ್. ಸುಬ್ರಮಣ್ಯಂ ಸೇರಿ 71 ಗಣ್ಯರಿಗೆ ರಾಷ್ಟ್ರಪತಿಯಿಂದ ಪದ್ಮ ಪ್ರಶಸ್ತಿ ಪ್ರದಾನ
ಪದ್ಮ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಗೌರವಗಳಾಗಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಇದರಲ್ಲಿ, ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣವನ್ನು ನೀಡಲಾಗುತ್ತದೆ. ಪದ್ಮಭೂಷಣ ಪ್ರಶಸ್ತಿಯನ್ನು ಅತ್ಯುನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 71 ಸಾಧಕರಿಗೆ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಲಾಯಿತು.

ನವದೆಹಲಿ, ಮೇ 27: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಇಂದು (ಮಂಗಳವಾರ) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2ನೇ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ವಿಭಾಗಗಳು ಮತ್ತು ಕ್ಷೇತ್ರಗಳ ಪುರಸ್ಕೃತರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕರ್ನಾಟಕದ ಖ್ಯಾತ ನಟ ಅನಂತನಾಗ್ (Anant Nag) ಅವರಿಗೆ ಪದ್ಮಭೂಷಣ, ಕರ್ನಾಟಕದ ವಯಲಿನ್ ವಾದಕ ಎಲ್. ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ, ಕರ್ನಾಟಕ ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇಂದು ನಡೆದ ಪದ್ಮ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ 71 ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಗಮನಾರ್ಹ ಕೊಡುಗೆ ಮತ್ತು ಕೆಲಸಕ್ಕಾಗಿ 71 ಗಣ್ಯ ವ್ಯಕ್ತಿಗಳಿಗೆ ರಾಷ್ಟ್ರಪತಿಗಳು ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಕರ್, ಕೇಂದ್ರ ಸಚಿವರಾದ ಅಮಿತ್ ಶಾ, ಎಸ್ ಜೈಶಂಕರ್, ಪ್ರಹ್ಲಾದ್ ಜೋಶಿ, ಜಿತೇಂದ್ರ ಸಿಂಗ್, ಜಿ ಕಿಶನ್ ರೆಡ್ಡಿ ಮತ್ತು ಇತರ ಹಲವಾರು ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.
Veteran Kannada Actor, Anant Nag receives the #PadmaBhushan from President #DroupadiMurmu at Rashtrapati Bhawan
Anant Nag is known for his versatility and contribution to Indian cinema over the past 5 decades #PeoplesPadma #PadmaAwards2025 pic.twitter.com/71dNLq2z8I
— PIB India (@PIB_India) May 27, 2025
ಇದನ್ನೂ ಓದಿ: ನಟ ಅನಂತ್ನಾಗ್, ವಯಲಿನ್ ವಾದಕ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂ ಸೇರಿ 19 ಸಾಧಕರಿಗೆ ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ
ಕಲಾ ಕ್ಷೇತ್ರದ ಸಾಧನೆಗಾಗಿ ಕನ್ನಡದ ಖ್ಯಾತ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಹಾಗೇ, ನಟಿ ಶೋಭನಾ, ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರಿಗೆ ಕೂಡ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಎಂಬ ಮೂರು ವಿಭಾಗಗಳಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ಔಷಧ ಮತ್ತು ಸಾಹಿತ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
#WATCH | Delhi: Grammy-winning musician Ricky Kej receives the Padma Shri from President Droupadi Murmu, for his contribution to the field of arts- music. pic.twitter.com/fABnonXvWo
— ANI (@ANI) May 27, 2025
ಈ ಸಮಾರಂಭದಲ್ಲಿ, ರಾಷ್ಟ್ರಪತಿ ಮುರ್ಮು ಅವರು ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಅವರಿಗೆ ಸಾರ್ವಜನಿಕ ವ್ಯವಹಾರಗಳ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಪ್ರದಾನ ಮಾಡಿದರು. ಜಾನಪದ, ಭಕ್ತಿ ಮತ್ತು ಛಠ್ ಗೀತೆಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಅವರಿಗೆ ಕಲೆ-ಜಾನಪದ ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಪುತ್ರ ಅಂಶುಮಾನ್ ಸಿನ್ಹಾ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
#WATCH | Delhi: Pandi Ram Mandavi receives the Padma Shri from President Droupadi Murmu, for his contribution to the field of arts- wood craft. pic.twitter.com/fes70VpFhr
— ANI (@ANI) May 27, 2025
ಇದನ್ನೂ ಓದಿ: ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸಂಗೀತ ಕ್ಷೇತ್ರದ ಸಾಧನೆಗಾಗಿ ವಯಲಿನ್ ವಾದಕ ಎಲ್. ಸುಬ್ರಮಣ್ಯಂ ಪದ್ಮವಿಭೂಷಣ ಸ್ವೀಕರಿಸಿದರು. ಡಾ. ಶೋಭನಾ ಚಂದ್ರಕುಮಾರ್ ಅವರು ಜಾನಪದ ನೃತ್ಯ ಕಲೆಗಳಿಗೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದರು. ಕುಮುದಿನಿ ರಜನಿಕಾಂತ್ ಲಖಿಯಾ ಅವರು ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ಮುರ್ಮು ಅವರು ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅವರ ಮೊಮ್ಮಗ ಅವರ ಪರವಾಗಿ ಪ್ರಶಸ್ತಿಯನ್ನು ಪಡೆದರು.
#WATCH | Delhi: Sadhvi Ritambhara receives the Padma Bhushan from President Droupadi Murmu, for her contribution to the field of social work. pic.twitter.com/lfn4q1UXCw
— ANI (@ANI) May 27, 2025
ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅರ್ಥಶಾಸ್ತ್ರಜ್ಞ ಬಿಬೇಕ್ ದೇಬ್ರಾಯ್ ಅವರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಪತ್ನಿ ಅವರ ಪರವಾಗಿ ಪ್ರಶಸ್ತಿಯನ್ನು ಪಡೆದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:25 pm, Tue, 27 May 25




