ನಟ ಕಮಲ್ ಹಾಸನ್ ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿ

ಚುನಾವಣಾ ಪ್ರಚಾರ ಹಿನ್ನೆಲೆ ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದರು. ಹೀಗಾಗಿ ಮತ್ತೆ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಮಲ್ ದಾಖಲಾಗಿದ್ದು, ಸದ್ಯ ಚಿಕಿತ್ಸೆ ಯಶಸ್ವಿಯಾಗಿದೆ.

ನಟ ಕಮಲ್ ಹಾಸನ್ ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿ
ಕಮಲ್ ಹಾಸನ್
Updated By: ಸಾಧು ಶ್ರೀನಾಥ್​

Updated on: Jan 19, 2021 | 10:33 AM

ಚೆನ್ನೈ: ಚಿತ್ರ ನಟ ಕಮಲ್ ಹಾಸನ್ ಅವರ ಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಕಮಲ್ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ರ ನಟ ಮತ್ತು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥರಾದ ಕಮಲ್ ಹಾಸನ್ ಅವರ ಕಾಲಿಗೆ ಹಿಂದೆ ಅಪಘಾತವೊಂದರಲ್ಲಿ ಗಾಯವಾಗಿತ್ತು. ಆಗ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕಮಲ್, ಇತ್ತೀಚೆಗೆ ಚುನಾವಣಾ ಪ್ರಚಾರ ಹಿನ್ನೆಲೆ ಮತ್ತೆ ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದರು.
ಹೀಗಾಗಿ ಮತ್ತೆ ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಮಲ್ ದಾಖಲಾಗಿದ್ದು, ಸದ್ಯ ಚಿಕಿತ್ಸೆ ಯಶಸ್ವಿಯಾಗಿದೆ.

ಟಾರ್ಚ್ ಲೈಟ್ ಚಿಹ್ನೆ ಕಮಲ್​ ಹಾಸನ್​ ತೆಕ್ಕೆಗೆ: ವಿಡಿಯೋ ಮೂಲಕ ಸಂತಸ ಹಂಚಿಕೊಂಡ ನಟ