AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಕಿಚ್ಚ ಸುದೀಪ್​ ಮುಖ್ಯ ಅತಿಥಿ; ಇಂದಿನಿಂದ ಪ್ರಾರಂಭ

2004ರಿಂದ ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿನಿಮಾ ಉತ್ಸವ (International Film Festival of India (IFFI) ಪ್ರತಿಷ್ಠಿತ ಫಿಲ್ಮ್​ ಫೆಸ್ಟಿವಲ್​ಗಳ ಸಾಲಿಗೆ ಸೇರುತ್ತದೆ. ಹಾಗೇ ಏಷ್ಯಾದಲ್ಲೇ ಅತಿದೊಡ್ಡ ಸಿನಿ ಉತ್ಸವ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಕಿಚ್ಚ ಸುದೀಪ್​ ಮುಖ್ಯ ಅತಿಥಿ; ಇಂದಿನಿಂದ ಪ್ರಾರಂಭ
Lakshmi Hegde
| Edited By: ಸಾಧು ಶ್ರೀನಾಥ್​|

Updated on:Jan 16, 2021 | 11:34 AM

Share

ಗೋವಾದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ 51ನೇ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ (IFFI) ಕನ್ನಡದ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ತಮ್ಮ ಸಿನಿಮಾಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಖ್ಯಾತಿಗಳಿಸಿರುವ ಸುದೀಪ್​, ಗೋವಾದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಫಿಲ್ಮ್​ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಪಣಜಿಯಲ್ಲಿರುವ ಡಾ. ಶ್ಯಾಮ್​ ಪ್ರಸಾದ್​ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 24ರವರೆಗೆ ಈ ಫಿಲ್ಮ್​ ಫೆಸ್ಟಿವಲ್​ ನಡೆಯಲಿದ್ದು,ವಿವಿಧ ದೇಶಗಳ 224 ಸಿನಿಮಾಗಳು ಈ ಬಾರಿ ಪ್ರದರ್ಶನಗೊಳ್ಳಲಿವೆ. ಪ್ರತಿಬಾರಿಯೂ ನವೆಂಬರ್​20-28ರವರೆಗೆ ಗೋವಾದಲ್ಲಿ ಈ ಫಿಲ್ಮ್​ ಫೆಸ್ಟಿವಲ್​ ನಡೆಯುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಈ ಬಾರಿ ಮುಂದೂಡಲಾಗಿತ್ತು.

2004ರಿಂದ ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿನಿಮಾ ಉತ್ಸವ (International Film Festival of India (IFFI) ಪ್ರತಿಷ್ಠಿತ ಫಿಲ್ಮ್​ ಫೆಸ್ಟಿವಲ್​ಗಳ ಸಾಲಿಗೆ ಸೇರುತ್ತದೆ. ಹಾಗೇ ಏಷ್ಯಾದಲ್ಲೇ ಅತಿದೊಡ್ಡ ಸಿನಿ ಉತ್ಸವ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ಬಾರಿ ವರ್ಚ್ಯುವಲ್​ ಆಗಿ ವೀಕ್ಷಿಸುವ ಅವಕಾಶವನ್ನೂ ನೀಡಲಾಗಿದೆ. ಕೊರೊನಾ ವೈರಸ್ ಪ್ರಸರಣ ಇರುವ ಕಾರಣಕ್ಕೆ, ತುಂಬ ಜನ ಆಗಮಿಸಿದರೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ವರ್ಚ್ಯುವಲ್​ ವ್ಯವಸ್ಥೆಯನ್ನೂ ಮಾಡಿದ್ದು, ವಿಶೇಷ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನೇತೃತ್ವದಲ್ಲಿ, ಗೋವಾ ಸರ್ಕಾರ ಮತ್ತು ಚಲನಚಿತ್ರ ಉತ್ಸವದ ನಿರ್ದೇಶನಾಲಯಗಳು ಜಂಟಿಯಾಗಿ ಈ ಉತ್ಸವವನ್ನು ಆಯೋಜಿಸುತ್ತಿದ್ದು, ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​, ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕೊವಿಡ್​-19ಗೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಉತ್ಸವ ನಡೆಯುವ ಕ್ರೀಡಾಂಗಣದ ಹೊರ, ಒಳಭಾಗಗಳನ್ನು ಭರ್ಜರಿ ಶೃಂಗರಿಸಲಾಗಿದೆ.

ಗಟ್ಟಿಮೇಳ ಧಾರಾವಾಹಿಯ ವೇದಾಂತ್​ ಸಂಭಾವನೆ ಎಷ್ಟು ಗೊತ್ತಾ?

Published On - 11:33 am, Sat, 16 January 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ