AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಠಾಕ್ರೆಗೂ ದಿಶಾ ಸಾಲಿಯಾನಿಗೂ ಏನು ಸಂಬಂಧ? ಮೂರೂವರೆ ವರ್ಷಗಳ ನಂತರ ಎಸ್‌ಐಟಿ ವಿಚಾರಣೆ ಯಾಕೆ?

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ವಿಷಯವನ್ನು ಪ್ರಸ್ತಾಪಿಸಲಾಗಿತ್ತು. ಆಗ ಶಿವಸೇನಾ ಶಾಸಕ ಭರತ್ ಗೋಗವ್ಲೆ ಮತ್ತು ಶಿಂಧೆ ಬಣದ ಬಿಜೆಪಿ ಶಾಸಕ ನಿತೇಶ್ ರಾಣೆ ಕೂಡ ದಿಶಾ ಸಾಲಿಯಾನ್ ಸಾವಿನ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದ್ದರು.

ಆದಿತ್ಯ ಠಾಕ್ರೆಗೂ ದಿಶಾ ಸಾಲಿಯಾನಿಗೂ ಏನು ಸಂಬಂಧ? ಮೂರೂವರೆ ವರ್ಷಗಳ ನಂತರ ಎಸ್‌ಐಟಿ ವಿಚಾರಣೆ ಯಾಕೆ?
ದಿಶಾ ಸಾಲಿಯಾನ್- ಆದಿತ್ಯ ಠಾಕ್ರೆ
ರಶ್ಮಿ ಕಲ್ಲಕಟ್ಟ
|

Updated on: Dec 07, 2023 | 4:30 PM

Share

ಮುಂಬೈ ಡಿಸೆಂಬರ್07 : ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant singh rajput) ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ (Disha salian) ಅವರ ಆತ್ಮಹತ್ಯೆ ಪ್ರಕರಣ ಬಗ್ಗೆ ಶಿಂಧೆ ಸರ್ಕಾರ ಈಗ ಎಸ್‌ಐಟಿ ತನಿಖೆ ನಡೆಸಲಿದೆ. ಇದರಿಂದ ಶಿವಸೇನೆ ನಾಯಕ ಆದಿತ್ಯ ಠಾಕ್ರೆಗೆ (Aditya thackeray)  ಸಂಕಷ್ಟ ಉಂಟಾಗಲಿದೆ. ಡಿಐಜಿ ಶ್ರೇಣಿಯ ಅಧಿಕಾರಿಯೊಬ್ಬರು ಈ ಎಸ್‌ಐಟಿಯ ಕೆಲಸವನ್ನು ಮೇಲ್ವಿಚಾರಣೆ ಮಾಡುತ್ತಾರೆ. ದಿಶಾ ಸಾಲಿಯಾನ್ ಪ್ರಕರಣದಲ್ಲಿ ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಹಲವು ಶಾಸಕರು ಒತ್ತಾಯಿಸಿದ್ದಾರೆ. ಕಳೆದ ಚಳಿಗಾಲದ ಅಧಿವೇಶನದಲ್ಲಿ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಎಸ್‌ಐಟಿ ತನಿಖೆಗೆ ಆದೇಶಿಸಿದ್ದರು. ಈಗ ಎಸ್‌ಐಟಿ ರಚನೆಯಾಗಲಿದ್ದು, ತನಿಖೆ ಆರಂಭವಾಗಲಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ವಿಷಯವನ್ನು ಪ್ರಸ್ತಾಪಿಸಲಾಗಿತ್ತು. ಆಗ ಶಿವಸೇನಾ ಶಾಸಕ ಭರತ್ ಗೋಗವ್ಲೆ ಮತ್ತು ಶಿಂಧೆ ಬಣದ ಬಿಜೆಪಿ ಶಾಸಕ ನಿತೇಶ್ ರಾಣೆ ಕೂಡ ದಿಶಾ ಸಾಲಿಯಾನ್ ಸಾವಿನ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದರು. ಸುಶಾಂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಅವರ ಫೋನ್‌ಗೆ ‘AU’ ಹೆಸರಿನ ಕರೆಗಳು 44 ಬಾರಿ ಬಂದಿವೆ ಎಂದು ಶಿಂಧೆ ಗುಂಪಿನ ರಾಹುಲ್ ಶೆವಾಲೆ ಆರೋಪಿಸಿದ್ದಾರೆ. ಬಿಹಾರ ಪೊಲೀಸ್ ಎಯು ಪ್ರಕಾರ ಆದಿತ್ಯ ಮತ್ತು ಉದ್ಧವ್ ಠಾಕ್ರೆ ಎಂದು ರಾಹುಲ್ ಶೆವಾಲೆ ಹೇಳಿಕೊಂಡಿದ್ದರು. ಅಂದಿನಿಂದ, ನಿಖರವಾಗಿ AU ಯಾರು ಎಂಬುದರ ಕುರಿತು ತನಿಖೆಗೆ ಬಲವಾದ ಬೇಡಿಕೆಯಿದೆ. ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಆದಿತ್ಯ ಠಾಕ್ರೆ ಅವರನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಬೇಕು ಎಂದು ನಿತೇಶ್ ರಾಣೆ ಆಗ್ರಹಿಸಿದ್ದರು.

ದಿಶಾ ಸಾಲಿಯಾನ್ ಯಾರು?

ಕರ್ನಾಟಕದ ಉಡುಪಿಯಲ್ಲಿ ಜನಿಸಿದ ದಿಶಾ ಸಾಲಿಯಾನ್ ಸೆಲೆಬ್ರಿಟಿ ಮ್ಯಾನೇಜರ್ ಆಗಿದ್ದರು. ಅವರು ವರುಣ್ ಶರ್ಮಾ, ಸುಶಾಂತ್ ಸಿಂಗ್ ರಜಪೂತ್, ಭಾರತಿ ಸಿಂಗ್ ಅವರಂತಹ ಜನಪ್ರಿಯ ನಟರೊಂದಿಗೆ ಕೆಲಸ ಮಾಡಿದರು. ಇದಲ್ಲದೆ, ಆಕೆ ಅನೇಕ ಜಾಹೀರಾತು ಏಜೆನ್ಸಿಗಳೊಂದಿಗೆ ಸಂಬಂಧ ಹೊಂದಿದ್ದಳು. ಆಕೆ ಕಿರುತೆರೆ ನಟ ರೋಹನ್ ರಾಯ್ ಜೊತೆ ಡೇಟಿಂಗ್ ಮಾಡುತ್ತಿದ್ದು ಸಾವಿಗೆ ಕೆಲವು ತಿಂಗಳ ಮೊದಲು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಇದನ್ನೂ ಓದಿಸೆಲೆಬ್ರಿಟಿಗಳನ್ನು ಕಾಡಿದ ಖಿನ್ನತೆ; ಆತ್ಮಹತ್ಯೆಗೆ ಶರಣಾದ ನಟ-ನಟಿಯರು ಇವರೇ ನೋಡಿ

ದಿಶಾ ಸಾವು ಪ್ರಕರಣ

9 ಜೂನ್ 2020 ರಂದು, ಮುಂಬೈನ ಮಲಾಡ್‌ನಲ್ಲಿರುವ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಸಾವಿಗೀಡಾಗಿದ್ದರು. ನಂತರ ದಿಶಾ ಸಾವಿಗೂ ಸುಶಾಂತ್ ಸಾವಿಗೂ ಸಂಬಂಧ ಕಲ್ಪಿಸಲಾಗಿತ್ತು. ಏಕೆಂದರೆ ಸುಶಾಂತ್ 5 ದಿನಗಳ ನಂತರ ಅಂದರೆ 14 ಜೂನ್ 2020 ರಂದು ನಿಧನರಾದರು. 28 ವರ್ಷದ ದಿಶಾ ಸಾವಿನ ನಂತರ ಮುಂಬೈ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 2021 ರಲ್ಲಿ, ಪೊಲೀಸರು ಈ ಪ್ರಕರಣದಲ್ಲಿ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ