AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ರ ತಮಿಳುನಾಡು ಚುನಾವಣೆಗೆ ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ

2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಟಿವಿಕೆಯ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಅವರನ್ನು ಆಯ್ಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಮತ್ತು ಡಿಎಂಕೆ ಜೊತೆ ಮೈತ್ರಿ ಇಲ್ಲ ಎಂದು ಟಿವಿಕೆ ಘೋಷಿಸಿದೆ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಟಿವಿಕೆ ಯಾವ ಮೈತ್ರಿಕೂಟಗಳನ್ನು ಮಾಡಿಕೊಳ್ಳಬೇಕು ಎಂಬುದನ್ನು ನಿರ್ಧರಿಸಲು ವಿಜಯ್ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದು ಪಕ್ಷ ಹೇಳಿದೆ.

2026ರ ತಮಿಳುನಾಡು ಚುನಾವಣೆಗೆ ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ
Vijay
ಸುಷ್ಮಾ ಚಕ್ರೆ
|

Updated on: Jul 04, 2025 | 3:52 PM

Share

ಚೆನ್ನೈ, ಜುಲೈ 4: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ-ರಾಜಕಾರಣಿ ವಿಜಯ್ (Actor Vijay) ಅವರನ್ನು ಘೋಷಿಸಲಾಗಿದೆ. ನಟ ವಿಜಯ್ ಅವರು ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ಮತ್ತು ಡಿಎಂಕೆ ಜೊತೆಗಿನ ಮೈತ್ರಿಯನ್ನು ವಿಜಯ್ ತಳ್ಳಿಹಾಕಿದ್ದು, ಅವರನ್ನು ಟಿವಿಕೆಯ ‘ಸೈದ್ಧಾಂತಿಕ ಶತ್ರುಗಳು’ ಎಂದು ಕರೆದಿದ್ದಾರೆ.

2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ-ರಾಜಕಾರಣಿ ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಅಧಿಕೃತವಾಗಿ ಘೋಷಿಸಲಾಯಿತು. ಸಮಿತಿ ಸಭೆಯಲ್ಲಿ ಮಾತನಾಡಿದ ವಿಜಯ್, “ನಮ್ಮ ಪಕ್ಷವು ಬಿಜೆಪಿಯೊಂದಿಗೆ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಸಾರ್ವಜನಿಕವಾಗಿ ಮಾತ್ರವಲ್ಲದೆ ಮುಚ್ಚಿದ ಬಾಗಿಲುಗಳ ಹಿಂದೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಅಣ್ಣಾಮಲೈ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ, ಉದ್ವಿಗ್ನತೆ

“ಸೈದ್ಧಾಂತಿಕ ಶತ್ರುಗಳು” ಎಂದು ಕರೆದವರೊಂದಿಗೆ ಕೈಜೋಡಿಸುವ ಯಾವುದೇ ಸಾಧ್ಯತೆಯಿಲ್ಲ ಎಂದು ವಿಜಯ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. “ಬಿಜೆಪಿ ಬೇರೆಡೆ ವಿಷದ ಬೀಜಗಳನ್ನು ಬಿತ್ತಬಹುದು, ಆದರೆ ತಮಿಳುನಾಡಿನಲ್ಲಿ ಅಲ್ಲ” ಎಂದು ಅವರು ಹೇಳಿದ್ದಾರೆ. “ನೀವು ಅಣ್ಣಾ ಮತ್ತು ಪೆರಿಯಾರ್ ಅವರನ್ನು ವಿರೋಧಿಸಲು ಅಥವಾ ಅವಮಾನಿಸಲು ಮತ್ತು ತಮಿಳುನಾಡಿನಲ್ಲಿ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿಯೊಂದಿಗೆ ಕೈಜೋಡಿಸಲು ಟಿವಿಕೆ ಡಿಎಂಕೆ ಅಥವಾ ಎಐಎಡಿಎಂಕೆ ಅಲ್ಲ” ಎಂದಿದ್ದಾರೆ.

ಇದನ್ನೂ ಓದಿ: ತಮಿಳುನಾಡು ದೇವಾಲಯಕ್ಕೆ ರೋಬೊ ಆನೆ ಉಡುಗೊರೆ ಕೊಟ್ಟ ತ್ರಿಷಾ ಕೃಷ್ಣನ್

ಚುನಾವಣೆಗೆ ಮುಂಚಿತವಾಗಿ ಮೈತ್ರಿಯನ್ನು ನಿರ್ಧರಿಸಲು ಪಕ್ಷವು ವಿಜಯ್ ಅವರಿಗೆ ಸಂಪೂರ್ಣ ಅಧಿಕಾರವನ್ನು ವಹಿಸಿತು. ಟಿವಿಕೆ ತಮಿಳುನಾಡು ರಾಜ್ಯದಲ್ಲಿ 2 ಕೋಟಿ ಸದಸ್ಯರನ್ನು ದಾಖಲಿಸುವ ಗುರಿಯನ್ನು ಹೊಂದಿತ್ತು. ಜನರನ್ನು ತಲುಪಲು ವಿಜಯ್ ಈ ವರ್ಷ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗೆ ತಮಿಳುನಾಡಿನಾದ್ಯಂತ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮತದಾರರನ್ನು ಭೇಟಿ ಮಾಡಿ ಬೆಂಬಲವನ್ನು ಕೋರಲಿದ್ದಾರೆ. ಟಿವಿಕೆಯ ಎರಡನೇ ರಾಜ್ಯ ಸಮ್ಮೇಳನವು ಆಗಸ್ಟ್‌ನಲ್ಲಿ ನಡೆಯಲಿದ್ದು, ಅಲ್ಲಿ ಹೆಚ್ಚಿನ ಕಾರ್ಯತಂತ್ರಗಳನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ