AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿ ಶಕೀಲಾ ಕಾಂಗ್ರೆಸ್​ಗೆ ಸೇರ್ಪಡೆ; ತಮಿಳುನಾಡು ರಾಜಕಾರಣಕ್ಕೆ ತಾರಾಮೆರುಗು

ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಸೇರುತ್ತಿದ್ದೇನೆ. ಅಧಿಕಾರವು ಜನರ ಸೇವೆಗಾಗಿ ಬಳಕೆಯಾಗಬೇಕು. ನನ್ನ ಈ ಯೋಚನೆಯು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮೂಲಕ ನನಸಾಗಲಿದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಶಕೀಲಾ ತಿಳಿಸಿದ್ದಾರೆ.

ಖ್ಯಾತ ನಟಿ ಶಕೀಲಾ ಕಾಂಗ್ರೆಸ್​ಗೆ ಸೇರ್ಪಡೆ; ತಮಿಳುನಾಡು ರಾಜಕಾರಣಕ್ಕೆ ತಾರಾಮೆರುಗು
ಶಕೀಲಾ ಕಾಂಗ್ರೆಸ್ ಸೇರ್ಪಡೆ
TV9 Web
| Edited By: |

Updated on:Apr 05, 2022 | 1:12 PM

Share

ತೆಲುಗು ಸಿನಿರಂಗದ ಖ್ಯಾತ ಹಾಗೂ ಚಿರಪರಿಚಿತ ನಟಿ ಶಕೀಲಾ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಶೀಘ್ರದಲ್ಲಿ ಆರಂಭವಾಗಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲಿ ಶಕೀಲಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಮಿಳುನಾಡು ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಅವರು ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಮಾನವ ಹಕ್ಕು ವಿಭಾಗದಲ್ಲೂ ಅವರು ಮುಖ್ಯ ಸ್ಥಾನ ವಹಿಸಲಿದ್ದಾರೆ.

ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಸೇರುತ್ತಿದ್ದೇನೆ. ಅಧಿಕಾರವು ಜನರ ಸೇವೆಗಾಗಿ ಬಳಕೆಯಾಗಬೇಕು. ನನ್ನ ಈ ಯೋಚನೆಯು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮೂಲಕ ನನಸಾಗಲಿದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಶಕೀಲಾ ತಿಳಿಸಿದ್ದಾರೆ.

90ರ ದಶಕದಲ್ಲಿ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಶಕೀಲಾ ಜನಜನಿತ ನಟಿಯಾಗಿದ್ದರು. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾದಲ್ಲೂ ಅವರು ನಟಿಸಿದ್ದರು. ಇತ್ತೀಚೆಗೆ ಕಿರುತೆರೆಯಲ್ಲೂ ಅವರು ತಮ್ಮ ಛಾಪು ಮೂಡಿಸಿದ್ದರು. ಕುಕ್ ವಿತ್ ಕೋಮಲಿ ಎಂಬ ರಿಯಾಲಿಟಿ ಶೋ ಒಂದರಲ್ಲಿ ಶಕೀಲಾ ಕಾಣಿಸಿಕೊಂಡಿದ್ದರು.

ಕುಕ್ ವಿತ್ ಕೋಮಲಿ ಶೋನ ಸೀಸನ್ 2ರಲ್ಲಿ ಭಾಗವಹಿಸಿದ್ದ ಶಕೀಲಾ, ದೊಡ್ಡ ಸಂಖ್ಯೆಯ ಅಭಿಮಾನಿಗಳ ಪ್ರೀತಿ ಗಳಿಸಿದ್ದರು. ಎಲಿಮಿನಿಷೇನ್ ಬಳಿಕ ಈ ವಾರ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಅದೇ ಶೋನಲ್ಲಿ ಅವರು ಮತ್ತೆ ಕಾಣಿಸಿಕೊಳ್ಳಲಿದ್ದಾರೆ.

ರಾಜಕೀಯ ರಂಗಕ್ಕೆ ಪ್ರವೇಶಿಸುತ್ತೇನೆ ಎಂದು ಹೇಳುತ್ತಿದ್ದ ಶಕೀಲಾ ಕೊನೆಗೂ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಮಾನವ ಹಕ್ಕುಗಳ ವಿಭಾಗಕ್ಕೆ ಸೇರುವ ಮೂಲಕ ಅವರು ತುಳಿತಕ್ಕೊಳಗಾದ ಜನರ ಪರವಾಗಿ ಕೆಲಸ ಮಾಡಲಿದ್ದಾರೆ. ಶಕೀಲಾ ಕಾಂಗ್ರೆಸ್ ಸೇರ್ಪಡೆಗೊಂಡಿರುವ, ಕಾಂಗ್ರೆಸ್ ಸದಸ್ಯತ್ವ ಪಡೆದುಕೊಳ್ಳುತ್ತಿರುವ ಫೊಟೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಮಿಳುನಾಡು ಕಾಂಗ್ರೆಸ್ ನಾಯಕರು ಶಕೀಲಾ ಆಗಮನವನ್ನು ಸ್ವಾಗತಿಸಿದ್ದಾರೆ.

ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ನಡೆಯಲಿರುವ 4 ರಾಜ್ಯಗಳಲ್ಲಿ ಒಟ್ಟು 18.68 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. 2.7 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಒಟ್ಟು 824 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಚುನಾವಣಾ ಅಕ್ರಮಗಳ ಬಗ್ಗೆ ಜನರು ನೇರವಾಗಿ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಕೊಡಬಹುದು. ಎಸ್​ಎಂಎಸ್ ಕೂಡ ಕಳಿಸಬಹುದು. ಈ ದೂರುಗಳನ್ನು ಆಯೋಗ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

Tamil Nadu Election 2021: ಜಯಲಲಿತಾ-ಎಂಜಿಆರ್​ ದೇವಸ್ಥಾನದಲ್ಲಿ ತೋರಣದಂತೆ ರಾರಾಜಿಸುತ್ತಿವೆ ಪ್ರಧಾನಿ ಮೋದಿ, ಮತ್ತಿತರ ಬಿಜೆಪಿ ನಾಯಕರ ಫೋಟೋಗಳು!

Published On - 9:39 pm, Fri, 26 March 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು