AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Group: ಫೆ.10 ರಂದು ಸುಪ್ರೀಂನಲ್ಲಿ ಅದಾನಿ ಸಂಸ್ಥೆಗಳ ವಿರುದ್ಧದ ಹಿಂಡನ್‌ಬರ್ಗ್ ವರದಿಯ ತನಿಖೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ

ಅದಾನಿ ಸಂಸ್ಥೆಗಳ ಮೇಲಿನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಫೆ.10 ರಂದು ವಿಚಾರಣೆ ಮಾಡಲು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.

Adani Group: ಫೆ.10 ರಂದು ಸುಪ್ರೀಂನಲ್ಲಿ ಅದಾನಿ ಸಂಸ್ಥೆಗಳ ವಿರುದ್ಧದ ಹಿಂಡನ್‌ಬರ್ಗ್ ವರದಿಯ ತನಿಖೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on:Feb 09, 2023 | 12:02 PM

Share

ಅದಾನಿ ಸಂಸ್ಥೆಗಳ ಮೇಲಿನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಫೆ.10 ರಂದು ವಿಚಾರಣೆ ಮಾಡಲು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.

ಅರ್ಜಿ ಸಲ್ಲಿಸಿರುವ ವಕೀಲ ವಿಶಾಲ್ ತಿವಾರಿ ಅವರು ಗುರುವಾರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಪೀಠದ ಮುಂದೆ ತುತ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು. ಹಿಂಡೆನ್​ಬರ್ಗ್​ ಕಳೆದ ವಾರ ಅದಾನಿ ಗ್ರೂಪ್ ವಿರುದ್ಧ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಬಗ್ಗೆ ಆರೋಪ ಮಾಡಿದೆ.

ಹಿಂಡೆನ್​ಬರ್ಗ್​ ವರದಿಯ ಬಗ್ಗೆ ಅದಾನಿ ಗ್ರೂಪ್ ಬಿಡುಗಡೆಗೊಳಿಸಿರುವ 413 ಪುಟಗಳ ಪ್ರತಿಕ್ರಿಯೆಗೆ ಹಿಂಡೆನ್​ಬರ್ಗ್ ಪ್ರತ್ಯುತ್ತರ ನೀಡಿದ್ದು, ಅದಾನಿ ಗ್ರೂಪ್ ಜಂಬದ ಪ್ರತಿಕ್ರಿಯೆ ನೀಡುವ ಮೂಲಕ ನಾವು ಎತ್ತಿರುವ ಪ್ರಮುಖ ಆರೋಪಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದೆ. ಅದಾನಿ ಗ್ರೂಪ್ ನಿರೀಕ್ಷೆಯಂತೆ ಪ್ರಮುಖ ವಿಷಯವನ್ನು ಮರೆಮಾಚಲು ರಾಷ್ಟ್ರೀಯವಾದವನ್ನು ಮುಂಚೂಣಿಗೆ ತಂದಿದೆ ಎಂದಿದೆ.

ಹಿಂಡೆನ್​ಬರ್ಗ್​ ವರದಿ ಏನು?

ಅಮೆರಿಕದ ಶಾರ್ಟ್‌ ಸೆಲ್ಲರ್‌ ಸಂಸ್ಥೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಅದಾನಿ ಸಮೂಹದ ವಿರುದ್ಧ ವರದಿ ಬಿಡುಗಡೆ ಮಾಡಿತ್ತು. ಇದರ ನಂತರ ಅದಾನಿ ಗ್ರೂಪ್‌ ಷೇರುಗಳು ತೀವ್ರ ಕುಸಿತ ಕಂಡಿವೆ. ಈ ವರದಿಯಿಂದಾಗಿ ಭಾರತ ಮತ್ತು ಏಷ್ಯಾದ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ಸಂಪತ್ತು ಸುಮಾರು 4 ಲಕ್ಷ ಕೋಟಿ ರೂ. ಕರಗಿದೆ. ಅದಾನಿ ಗ್ರೂಪ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿ ಹೇಳಿದೆ. ಈ ಗ್ರೂಪ್‌ ದಶಕಗಳಿಂದ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಖಾತೆ ವಂಚನೆಯಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದೆ.

ಅದಾನಿ ಅವರ ನಿವ್ವಳ ಮೌಲ್ಯ 92 ಬಿಲಿಯನ್‌ಗೆ ಇಳಿದಿದೆ. ಈ ಮೂಲಕ ಅದಾನಿ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ವಿಚಾರದಲ್ಲಿ ಅದಾನಿ ಗ್ರೂಪ್ ಹಿಂಡೆನ್‌ಬರ್ಗ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಹಿಂಡೆನ್‌ಬರ್ಗ್ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಕುರಿತು 88 ನೇರ ಪ್ರಶ್ನೆಗಳನ್ನು ಕೇಳಿತ್ತು. ಆದರೆ, ಈ ಪ್ರಶ್ನೆಗಳಿಗೆ ಅದಾನಿ ಗ್ರೂಪ್ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಹಿಂಡೆನ್‌ಬರ್ಗ್ ಹೇಳಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:49 am, Thu, 9 February 23

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ